IPL 2024, RCB vs SRH: ಐಪಿಎಲ್ ಇತಿಹಾಸದಲ್ಲೇ ದಾಖಲೆಯ ರನ್ ಗಳಿಸಿದ ಹೈದರಾಬಾದ್!
IPL 2024, RCB vs SRH: ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್‌ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
IPL 2024, RCB vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ರನ್ ಗಳಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಗರಿಷ್ಠ ರನ್ ಗಳಿಸುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.
ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 287 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.
ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್
ಈ ಆಟಗಾರ ಹರಾಜಿಗೆ ಬಂದರೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಖರೀದಿಸುತ್ತೇನೆ ಎಂದ ನಟಿ ..!
ಇದೀಗ ಹೈದರಾಬಾದ್ ತನ್ನ ಹಳೆಯ ದಾಖಲೆಯನ್ನೇ ಮುರಿದು ಹೊಸ ದಾಖಲೆ ನಿರ್ಮಿಸಿದೆ. ಟ್ರಾವಿಸ್ ಹೆಡ್(102) ಭರ್ಜರಿ ಶತಕ, ಹೆನ್ರಿಕ್ ಕ್ಲಾಸೆನ್(67), ಅಭಿಷೇಕ್ ಶರ್ಮಾ(32), ಐಡೆನ್ ಮಾರ್ಕ್ರಾಮ್(ಅಜೇಯ 32) ಮತ್ತು ಅಬ್ದುಲ್ ಸಮದ್(ಅಜೇಯ 37) ರನ್ ಗಳಿಸಿದರು. ಇವರ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಹೈದರಾಬಾದ್ 20 ಓವರ್‌ಗಳಲ್ಲಿ 287 ರನ್‌ಗಳ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು.
Highest totals in IPL
287/3 SRH vs RCB Bengaluru 2024
277/3 SRH vs MI Hyderabad 2024
272/7 KKR vs DC Vizag 2024
263/5 RCB vs PWI Bengaluru 2013
257/7 LSG vs PK Mohali 2023
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.