IPL 2020: ಚೆನ್ನೈ ಸೂಪರ್ ಕಿಂಗ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 7 ರನ್ ಗಳ ಜಯ

ದುಬೈನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಮತ್ತು ಹೈದಾರಾಬಾದ್ ನಡುವಿನ ಪಂದ್ಯದಲ್ಲಿ ಹೈದರಾಬಾದ್ 7 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

Last Updated : Oct 3, 2020, 12:06 AM IST
IPL 2020: ಚೆನ್ನೈ ಸೂಪರ್ ಕಿಂಗ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 7 ರನ್ ಗಳ ಜಯ   title=
Photo Courtsey : Twitter

ನವದೆಹಲಿ: ದುಬೈನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಮತ್ತು ಹೈದಾರಾಬಾದ್ ನಡುವಿನ ಪಂದ್ಯದಲ್ಲಿ ಹೈದರಾಬಾದ್ 7 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

IPL 2020: ಐಪಿಎಲ್ ನಲ್ಲಿ ನೂತನ ದಾಖಲೆ ನಿರ್ಮಿಸಿದ ಎಂ.ಎಸ್ ಧೋನಿ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಗೆ ಇಳಿದ ಹೈದರಾಬಾದ್ ತಂಡವು 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.ಹೈದರಾಬಾದ್ ಪರವಾಗಿ ಪ್ರಿಯಂ ಗಾರ್ಗ್ ಅಜೇಯ 51 ರನ್ ಗಳಿಸುವ ಮೂಲಕ ಆಸರೆಯಾದರು. ಇನ್ನು ವಾರ್ನರ್ 28 ಮನೀಶ್ ಪಾಂಡೆ 29,ಅಭಿಷೇಕ್ ಶರ್ಮಾ 31 ಗಳಿಸಿದರು.

165 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡಕ್ಕೆ ಆರಂಭದಲ್ಲೇ ಶೇನ್ ವಾಟ್ಸನ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಎದುರಿಸಿತು.ರವಿಂದ್ರ ಜಡೇಜಾ 50 ಹಾಗೂ ಎಂ.ಎಸ್ ಧೋನಿ 47 ಅವರ ಹೋರಾಟದ ನಡುವೆಯೂ ಕೂಡ ತಂಡವು ಗೆಲುವಿನ ಗುರಿ ತಲುಪಲು ಸಾಧ್ಯವಾಗಲಿಲ್ಲ.20 ಓವರ್ ಗಳಲ್ಲ್ಲಿ  5ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಸಾಧ್ಯವಾಯಿತು.

Trending News