ಆಗಸ್ಟ್ 5, 2020 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಸುರೇಶ್ ರೈನಾ ಇನ್ನು ಮುಂದೆ ಐಪಿಎಲ್ ಮತ್ತು ಉತ್ತರ ಪ್ರದೇಶಕ್ಕಾಗಿ ದೇಶೀಯ ಕ್ರಿಕೆಟ್‌ನಲ್ಲಿಯೂ ಆಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದಾರೆ. ಈಗ ಅವರು ವಿದೇಶಿ ಲೀಗ್‌ಗಳಲ್ಲಿ ಆಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಸುರೇಶ್ ರೈನಾ ಭಾವನಾತ್ಮಕ ಟ್ವೀಟ್:


ಸುರೇಶ್ ರೈನಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಭಾವುಕರಾಗಿ ಟ್ವೀಟ್ ಮಾಡಿರುವ ಅವರು, 'ದೇಶಕ್ಕಾಗಿ ಮತ್ತು ಉತ್ತರ ಪ್ರದೇಶಕ್ಕಾಗಿ ಕ್ರಿಕೆಟ್ ಆಡುವುದು ನನಗೆ ಹೆಮ್ಮೆಯ ವಿಷಯ. ನಾನು ಈಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಅಲ್ಲದೆ ನಾನು ಬಿಸಿಸಿಐ, ಯುಪಿ ಕ್ರಿಕೆಟ್ ಸಂಸ್ಥೆ, ಐಪಿಎಲ್ ತಂಡ ಸಿಎಸ್‌ಕೆ ಮತ್ತು ರಾಜೀವ್ ಶುಕ್ಲಾ ಅವರಿಗೆ ಧನ್ಯವಾದ ಹೇಳುತ್ತೇನೆ. ನನ್ನನ್ನು ಬೆಂಬಲಿಸಿದ ಅಭಿಮಾನಿಗಳಿಗೂ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ.


ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ: 


ಸುರೇಶ್ ರೈನಾ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದರ ನಂತರ, ಅವರು ಉತ್ತರ ಪ್ರದೇಶ ತಂಡ ಮತ್ತು ಐಪಿಎಲ್ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿದ್ದರು. ಆದರೆ 2020 ರಲ್ಲಿ ಕಥೆ ಸಂಪೂರ್ಣವಾಗಿ ಬದಲಾಯಿತು, ಚೆನ್ನೈ ಸೂಪರ್ ಕಿಂಗ್ಸ್ ಅವರನ್ನು ಉಳಿಸಿಕೊಳ್ಳಲಿಲ್ಲ. ಐಪಿಎಲ್ ಮೆಗಾ ಹರಾಜು 2022 ರಲ್ಲಿ ಯಾವುದೇ ತಂಡವು ಅವರನ್ನು ಖರೀದಿಸಲಿಲ್ಲ. ಆ ಬಳಿಕ ವಿದೇಶಿ ಲೀಗ್ ಗಳಲ್ಲಿ ಆಡಲು ಸುರೇಶ್ ರೈನಾ ಈ ಹೆಜ್ಜೆ ಇಟ್ಟಿದ್ದಾರೆ.


ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸುವುದಾಗಿ ಚಿನ್ನ ತಾಲಾ ಸುರೇಶ್ ರೈನಾ ಸ್ಪಷ್ಟಪಡಿಸಿದ್ದಾರೆ. ರೈನಾ ನೀಡಿರುವ ಸುದ್ದಿ ಅಭಿಮಾನಿಗಳಿಗೆ ಶಾಕ್ ನೀಡಿದಂತಾಗಿದೆ. ಇದೀಗ ಕ್ರಿಕೆಟ್ ಪ್ರೇಮಿಗಳು, ರೈನಾ ಅಭಿಮಾನಿಗಳು ಅವರ ಮುಂದಿನ ಜೀವನಕ್ಕೆ ಶುಭಹಾರೈಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.