ICC T20 Ranking : ಐಸಿಸಿ ಟಿ20 ರ‍್ಯಾಕಿಂಗ್ ನಲ್ಲಿ ಭಾರತದ ಭರ್ಜರಿ ಬ್ಯಾಟ್ಸ್‌ಮನ್ ಗೆ ಸ್ಥಾನ!
ಟಿ20 ಶ್ರೇಯಾಂಕದಲ್ಲಿ ಲಾಂಗ್ ಜಂಪ್ ಮೂಲಕ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಆಟಗಾರ ಏಷ್ಯಾ ಕಪ್ 2022 ರಲ್ಲಿ ಸ್ಥಾನ ಪಡೆಯುವ ಲಕ್ಷಣಗಳು ಕಂಡು ಬರುತ್ತಿವೆ.
ICC T20 Ranking : ಐಸಿಸಿ ಟಿ20 ಮಾದರಿಯಲ್ಲಿ ಇತ್ತೀಚಿನ ರ‍್ಯಾಕಿಂಗ್ ಅನ್ನು ಬಿಡುಗಡೆ ಮಾಡಿದೆ. ಈ ರ‍್ಯಾಕಿಂಗ್ ನಲ್ಲಿ ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ಮೇಲುಗೈ ಸಾಧಿಸಿದ್ದಾರೆ. ಈ ಆಟಗಾರ ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅಮೋಘ ಇನ್ನಿಂಗ್ಸ್ ಆಡಿದ್ದರು, ಟಿ20 ಶ್ರೇಯಾಂಕದಲ್ಲಿ ಲಾಂಗ್ ಜಂಪ್ ಮೂಲಕ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಆಟಗಾರ ಏಷ್ಯಾ ಕಪ್ 2022 ರಲ್ಲಿ ಸ್ಥಾನ ಪಡೆಯುವ ಲಕ್ಷಣಗಳು ಕಂಡು ಬರುತ್ತಿವೆ.
ಟಿ20 ಶ್ರೇರ‍್ಯಾಕಿಂಗ್ ನಲ್ಲಿ ಈ ಆಟಗಾರನ ಹೆಸರು
ಇತ್ತೀಚಿನ ಐಸಿಸಿ ಟಿ20 ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ 816 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಸೂರ್ಯಕುಮಾರ್ ಯಾದವ್ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಬಿರುಸಿನ ಇನ್ನಿಂಗ್ಸ್ ಆಡಿ ಭರ್ಜರಿ ಪ್ರದರ್ಶನ ನೀಡಿದ್ದರು. ಪಾಕಿಸ್ತಾನದ ಬಾಬರ್ ಅಜಮ್ 818 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ಈ ಪಟ್ಟಿಯಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಅಗ್ರ 10 ರೊಳಗೆ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.
ಇದನ್ನೂ ಓದಿ : IND vs WI 2022: ತನ್ನ ಆತ್ಮೀಯ ಗೆಳೆಯನಿಗೆ ದೊಡ್ಡ ವಿಲನ್ ಆದ ಸೂರ್ಯಕುಮಾರ್..!
ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯವನ್ನು ಗೆದ್ದಿದೆ
ಮಂಗಳವಾರ (ಆಗಸ್ಟ್ 2), ವೆಸ್ಟ್ ಇಂಡೀಸ್ ವಿರುದ್ಧ ಸೇಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 76 ರನ್ ಗಳಿಸಿದರು. ಈ ಪಂದ್ಯದಲ್ಲಿ ಅವರು 172.72 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದರು. ಈ ಅದ್ಭುತ ಪ್ರದರ್ಶನದ ನಂತರವೇ ಸೂರ್ಯಕುಮಾರ್ ಯಾದವ್ ಐಸಿಸಿ ರ್ಯಾಂಕಿಂಗ್‌ನಲ್ಲಿ ಅಬ್ಬರಿಸಿದ್ದಾರೆ.
ವಿರಾಟ್ ಕೊಹ್ಲಿಗೆ ಹಿನ್ನೆಡೆ
ಭಾರತದ ಮಾಜಿ ನಾಯಕ ಹಾಗೂ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇತ್ತೀಚಿನ ಐಸಿಸಿ ಟಿ20 ಶ್ರೇಯಾಂಕದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ವಿರಾಟ್ ಕೊಹ್ಲಿ 539 ಅಂಕಗಳೊಂದಿಗೆ 28ನೇ ಸ್ಥಾನದಲ್ಲಿದ್ದಾರೆ. ಹಾಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 598 ಅಂಕಗಳೊಂದಿಗೆ 16ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಶಾನ್ ಕಿಶನ್ 14 ನೇ ಸ್ಥಾನದಲ್ಲಿದ್ದಾರೆ ಮತ್ತು ಕೆಎಲ್ ರಾಹುಲ್ 20 ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ : Commonwealth Games 2022: ವೇಟ್‌ಲಿಫ್ಟಿಂಗ್‌ನಲ್ಲಿ ವಿಕಾಸ್ ಠಾಕೂರ್ ಗೆ ಬೆಳ್ಳಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.