Ind vs SA: ಮಂಗಳವಾರ(ಡಿ.12)  ಗ್ಕೆಬೆರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಸರಣಿಯ ಎರಡನೇ ಟಿ20 ಐ ಪಂದ್ಯದಲ್ಲಿ 152 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಐದು ವಿಕೆಟ್‌ಗಳಿಂದ ಭಾರತವನ್ನು ಮಣಿಸಿತು. ಈ ಮೂಲಕ ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-0 ಮುನ್ನಡೆ ಸಾಧಿಸಿದೆ. 


COMMERCIAL BREAK
SCROLL TO CONTINUE READING

ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್,  ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಮಾಡಿದ ಶೈಲಿ ಅದ್ಭುತವಾಗಿತ್ತು ಎಂದರಲ್ಲದೆ ಭಾರತ ತಂಡದ ಸೋಲಿನ ಕಾರಣವನ್ನು ಸಹ ಬಹಿರಂಗಪಡಿಸಿದರು. 


ಸೂರ್ಯಾಕುಮಾರ್ ಯಾದವ್ ಪ್ರಕಾರ, ಇದೇ ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಂತೆ! 
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ತಂಡದ ಸೋಲಿನ ಕಾರಣ ಬಹಿರಂಗಪಡಿಸಿದ ಸೂರ್ಯಕುಮಾರ್ ಯಾದವ್, ನಮ್ಮ ಇನ್ನಿಂಗ್ಸ್ ನಂತರ ಈ ಸ್ಕೋರ್ ಉತ್ತಮವಾಗಿದೆ ಎಂದು ನಾನು ಭಾವಿಸಿದೆ. ಆದರೆ ಮೊದಲ ಐದಾರು ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಮಾಡಿದ ರೀತಿ ಅತ್ಯುತ್ತಮವಾಗಿತ್ತು. ಆದರೆ, ಭಾರತೀಯ ಬ್ಯಾಟ್ಸ್‌ಮನ್‌ಗಳ ಜೊತೆಯಾಟದ ಕೊರತೆಯೇ ನಮ್ಮ ತಂಡದ ಸೋಲಿಗೆ ಪ್ರಮುಖ ಕಾರಣ ಎಂದಿದ್ದಾರೆ. 


ಈ ಪಂದದಲ್ಲಿ ಸ್ವತಃ  ಅದ್ಭುತ ಅರ್ಧ ಶತಕ ಗಳಿಸಿದ ಸೂರ್ಯಕುಮಾರ್ ಯಾದವ್, ತಂಡದ ಪ್ರದರ್ಶನದ ಬಗ್ಗೆ ನಿರಾಸೆ ವ್ಯಕ್ತಪಡಿಸಿದರು. ಎರಡನೇ ಟಿ20 ಪಂದ್ಯದಲ್ಲಿ ನಮ್ಮ ತಂಡ ಉತ್ತಮ ಆರಂಭ ಪಡೆದರೂ, ನಮ್ಮ ಬ್ಯಾಟ್ಸ್‌ಮನ್‌ಗಳು ಅದನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಗಣನೀಯ ಜೊತೆಯಾಟವನ್ನು ನಿರ್ಮಿಸಲು ವಿಫಲರಾಗಿದ್ದಾರೆ. ಇದು ಅಂತಿಮವಾಗಿ ತಂಡದ ಸೋಲಿಗೆ ಕಾರಣವಾಯಿತು ಎಂದು ಅವರು ಹೇಳಿದರು. 


ಇದನ್ನೂ ಓದಿ- ಮತ್ತೆ ಬರ್ತಿದ್ದಾರೆ ಜೂ. ಧೋನಿ… ವರ್ಷದ ಬಳಿಕ ತಂಡಕ್ಕೆ ಮರಳಿದ 26ರ ಹರೆಯದ ಈ ಆಟಗಾರನಿಗೆ ನಾಯಕತ್ವ!


ಈ ಸಂದರ್ಭದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳಿಂದ ಉತ್ತಮ ಶಾಟ್ ಆಯ್ಕೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ ಸೂರ್ಯಕುಮಾರ್ ಯಾದವ್, ಟಿ 20 ಕ್ರಿಕೆಟ್‌ನಲ್ಲಿ, ಸರಿಯಾದ ಸಮಯದಲ್ಲಿ ಸರಿಯಾದ ಶಾಟ್ ಅನ್ನು ಆಯ್ಕೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ತಂಡವು ತಮ್ಮ ಪ್ರದರ್ಶನವನ್ನು ಸುಧಾರಿಸಲು ಈ ಅಂಶದಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಉಲ್ಲೇಖಿಸಿದ್ದಾರೆ.


ಬೌಲರ್‌ಗಳನ್ನು ಸಮರ್ಥಿಸಿಕೊಂಡ ಸೂರ್ಯಕುಮಾರ್ ಯಾದವ್: 
ಇದೇ ಸಂದರ್ಭದಲ್ಲಿ ಭಾರತೀಯ ಬೌಲರ್‌ಗಳನ್ನು ಸಮರ್ಥಿಸಿಕೊಂಡ ನಾಯಕ ಸೂರ್ಯಕುಮಾರ್ ಯಾದವ್, ಒದ್ದೆಯಾದ ಚೆಂಡಿನೊಂದಿಗೆ ಬೌಲಿಂಗ್ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಹಾಗಾಗಿ,  ಆತಿಥೇಯ ತಂಡದ ರನ್‌ಗಳ ಹರಿವನ್ನು ತಡೆಯಲು ಯಾವುದೇ ಭಾರತೀಯ ಬೌಲರ್‌ಗೆ ಸಾಧ್ಯವಾಗಲಿಲ್ಲ ಎಂದರು. 


ಇದೇ ವೇಳೆ, ಮುಂದೆಯೂ ಇಂತಹದ್ದೇ ಸಂದರ್ಭಗಳು ಎದುರಾಗುವ ಸಾಧ್ಯತೆ ಖಂಡಿತವಾಗಿಯೂ ಇದ್ದೇ ಇರುತ್ತದೆ. ಹಾಗಾಗಿ, ಕಂಫರ್ಟ್ ಝೋನ್‌ನಿಂದ ಹೊರಗೆ ಬಂದು ಆಡುವಂತೆ ತಮ್ಮ ತಂಡದ ಆಟಗಾರರಿಗೆ ಸಲಹೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. 


ಇದನ್ನೂ ಓದಿ- ENG vs IND Test Squad: ಇಂಗ್ಲೆಂಡ್ ಟೆಸ್ಟ್ ಸರಣಿಗೆ ತಂಡ ಪ್ರಕಟ, 19 ವರ್ಷದ ಆಟಗಾರನಿಗೆ ಖುಲಾಯಿಸಿದ ಅದೃಷ್ಟ


ಭಾರತ ತಂಡವು ಈ ಸೋಲಿನಿಂದ ನಿಸ್ಸಂದೇಹವಾಗಿ ಪಾಠ ಕಲಿಯುತ್ತದೆ ಮತ್ತು ಸರಣಿಯ ಉಳಿದ ಪಂದ್ಯಗಳಲ್ಲಿ ತಮ್ಮ ಪ್ರದರ್ಶನವನ್ನು ಸುಧಾರಿಸಲು ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ತಮ್ಮ ಮುಂದಿನ ಲಕ್ಷ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದತ್ತ ಇರಲಿದೆ ಎಂದರು. 


ಗಮನಾರ್ಹವಾಗಿ ಗುರುವಾರ (ಡಿಸೆಂಬರ್ 14 ರಂದು) ಜೋಹಾನ್ಸ್‌ಬರ್ಗ್‌ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.