Surya kumar yadav surgery : ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಬುಧವಾರ ಜರ್ಮನಿಯಲ್ಲಿ ಯಾದವ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವಿಷಯವನ್ನು ಸ್ವತಃ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋವನ್ನು ಹಂಚಿಕೊಂಡಿರುವ ಸೂರ್ಯ ಕುಮಾರ್‌, ʼಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ಶೀಘ್ರದಲ್ಲೇ ನಾನು ಹಿಂತಿರುಗುತ್ತೇನೆ ಎಂದು ಬರೆದುಕೊಂಡಿದ್ದಾರೆ.  


ಧೋನಿಯ ಶ್ರೇಷ್ಠ ದಾಖಲೆ ಬ್ರೇಕ್: ಇನ್ಮುಂದೆ ಭಾರತದ ಅತ್ಯಂತ ಯಶಸ್ವಿ T20 ನಾಯಕ ರೋಹಿತ್ ಶರ್ಮಾ


ಕಳೆದ ವರ್ಷ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಗಂಭೀರವಾಗಿ ಗಾಯಗೊಂಡಿದ್ದರು. ಅವರ ಪಾದದ ಅಸ್ಥಿರಜ್ಜುಗಳು ಹರಿದಿದ್ದವು. ಇದನ್ನು ಕ್ರೀಡಾ ಹರ್ನಿಯಾ ಎಂದು ಕರೆಯಲಾಗುತ್ತದೆ. ವೈದ್ಯಕೀಯ ಭಾಷೆಯಲ್ಲಿ ಇದಕ್ಕೆ ʼಅಥ್ಲೆಟಿಕ್ ಪಬ್ಲ್ಜಿಯಾʼ ಎಂದು ಹೆಸರು.


ಕ್ರೀಡಾ ಹರ್ನಿಯಾದಿಂದಾಗಿ ಸೂರ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮತ್ತು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯನ್ನು ಕಳೆದುಕೊಂಡಿದ್ದಾರೆ. ಫುಟ್ಬಾಲ್, ಕುಸ್ತಿ ಮತ್ತು ಐಸ್ ಹಾಕಿ ಆಟಗಾರರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಕ್ರಿಕೆಟಿಗರು ಈ ಕಾಯಿಲೆಗೆ ತುತ್ತಾಗುವುದು ಅಪರೂಪ. ಎರಡು ವರ್ಷಗಳ ಕೆಳಗೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಕೂಡ ಈ ಸಮಸ್ಯೆಯಿಂದ ಬಳಲಿದ್ದರು. ಅದರ ನಂತರ ಅವರು 2022 ರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.