India Squad WTC Final 2023: ಆಯ್ಕೆಗಾರರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌’ಗೆ ಟೀಮ್ ಇಂಡಿಯಾ ತಂಡವನ್ನು ಘೋಷಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಘೋಷಣೆಯಾದ ತಕ್ಷಣ ಭಾರತೀಯ ಆಟಗಾರನೊಬ್ಬನ ಟೆಸ್ಟ್ ವೃತ್ತಿಜೀವನ ಬಹುತೇಕ ಮುಗಿದಿದೆ ಎನ್ನಲಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Health Tips: ಒಂದಲ್ಲ, ಎರಡಲ್ಲ…11 ಔಷಧೀಯ ಗುಣವುಳ್ಳ ಈ ಬಣ್ಣದ ಅಕ್ಕಿಯ ಗಂಜಿ ಕ್ಯಾನ್ಸರ್ ರೋಗವನ್ನು ಬುಡಸಮೇತ ಕಿತ್ತುಹಾಕುತ್ತೆ!


ಮಹತ್ವದ ನಿರ್ಧಾರ ಕೈಗೊಂಡಿರುವ ಆಯ್ಕೆಗಾರರು ಮಿ.360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಟ್ಟಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌’ಶಿಪ್ (ಡಬ್ಲ್ಯುಟಿಸಿ) ಫೈನಲ್‌ ಟೀಂ ಇಂಡಿಯಾ ತಂಡದಲ್ಲಿ ಸೂರ್ಯಕುಮಾರ್ ಯಾದವ್‌’ಗೆ ಆಯ್ಕೆಗಾರರು ಸ್ಥಾನ ನೀಡಲಿಲ್ಲ.


ಶ್ರೇಯಸ್ ಅಯ್ಯರ್ ಗಾಯಗೊಂಡ ಕಾರಣ ಅವರ ಸ್ಥಾನವನ್ನು ಸೂರ್ಯಕುಮಾರ್ ಯಾದವ್ ತುಂಬುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಆಯ್ಕೆದಾರರು ಇದ್ದಕ್ಕಿದ್ದಂತೆ ಅಜಿಂಕ್ಯ ರಹಾನೆ ಅವರಿಗೆ ಅವಕಾಶ ನೀಡಿದ್ದಾರೆ.


ಸೂರ್ಯಕುಮಾರ್ ಯಾದವ್ ಭಾರತಕ್ಕಾಗಿ ಕೇವಲ ಒಂದು ಟೆಸ್ಟ್ ಪಂದ್ಯವನ್ನು ಆಡುವ ಅವಕಾಶವನ್ನು ಪಡೆದಿದ್ದಾರೆ. ಆದರೆ, ಅದರಲ್ಲಿ ಅವರು ಕೇವಲ 8 ರನ್ ಗಳಿಸಿದ್ದರು. ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಫ್ಲಾಪ್ ಆಗಿದ್ದರು. ಆಸ್ಟ್ರೇಲಿಯದ ಸ್ಪಿನ್ನರ್‌ಗಳ ಅಬ್ಬರದ ನಡುವೆ ಟೀಂ ಇಂಡಿಯಾದ ಈ ಬ್ಯಾಟ್ಸ್‌ಮನ್‌’ಗೆ ಭಾರತ ತಂಡದ ಆಡಳಿತದ ನಿರೀಕ್ಷೆಯನ್ನು ತಲುಪಲು ಸಾಧ್ಯವಾಗಲಿಲ್ಲ. ಈ ಒಂದು ಟೆಸ್ಟ್ ಪಂದ್ಯದ ನಂತರ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು.


ಇದನ್ನೂ ಓದಿ: Photos: ಕ್ರಿಕೆಟಿಗ ರವೀಂದ್ರ ಜಡೇಜಾ ಮನೆ ನೋಡಿದ್ದೀರಾ? ದೇಶದ ಶ್ರೀಮಂತರ ಮನೆಯೂ ಇಲ್ಲ ಇಷ್ಟೊಂದು ಸುಂದರ


ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌’ನ ಫೈನಲ್‌ಗೆ ಭಾರತದ 15 ಸದಸ್ಯರ ತಂಡ:


ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನ್ಕತ್ .


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.