ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾಕಪ್ ನ ಟಿ 20 ಟೂರ್ನಿಯಲ್ಲಿ ಭಾರತ ತಂಡವು ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತರು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಭಾರತ ತಂಡವು ಇದನ್ನು ಸರಿಯಾಗಿ ಬಳಸಿಕೊಂಡಿತು.ಆರಂಭದಲ್ಲಿ ರಾಹುಲ್ ಹಾಗೂ ರೋಹಿತ್ ಶರ್ಮಾ 38 ರನ್ ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿದರು. ಇನ್ನೊಂದೆಡೆಗೆ ಕಳೆದ ಪಂದ್ಯದಲ್ಲಿ ಫಾರ್ಮ್ ಗೆ ಮರಳಿದ ಕೊಹ್ಲಿ ಇಂದಿನ ಪಂದ್ಯದಲ್ಲಿ ಕೆಲವು ಅತ್ಯುತ್ತಮ ಶಾಟ್ ಗಳನ್ನು ಆಡಿದರು. ಅವರು ಕೇವಲ 44 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 59 ರನ್ ಗಳಿಸಿ ಅಜೇಯರಾಗಿ ಉಳಿದರು.
𝐅𝐈𝐅𝐓𝐘 for @surya_14kumar⚡️
A scintillating knock this from SKY as he brings up his half-century in just 22 balls with 6x4, 4x6🔥https://t.co/9txNRez6hL… #INDvHK #AsiaCup2022 pic.twitter.com/5mXUe4hTHN
— BCCI (@BCCI) August 31, 2022
ಇನ್ನೊಂದೆಡೆಗೆ ಸ್ಪೋಟಕ ಬ್ಯಾಟಿಂಗ್ ಮಾಡಿದ ಸೂರ್ಯ ಕುಮಾರ್ ಯಾದವ್ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಬೀಸುವುದರ ಮೂಲಕ ಕೇವಲ 26 ಎಸೆತಗಳಲ್ಲಿ ಆರು ಸಿಕ್ಸರ್ ಹಾಗೂ ಆರು ಬೌಂಡರಿ ಗಳ ನೆರವಿನಿಂದ 68 ರನ್ ಗಳಿಸಿ ಅಜೇಯ ರಾಗಿ ಉಳಿದರು. ಇದರಿಂದಾಗಿ ಭಾರತ ತಂಡವು ಅಂತಿಮವಾಗಿ ಕೇವಲ ಎರಡು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.
ಇದನ್ನು ಬೆನ್ನತ್ತಿದ ಹಾಂಗ್ ಕಾಂಗ್ ತಂಡವು ಆರಂಭದಲ್ಲಿಯೇ ಯಾಸಿಂ ಮುರ್ತಾಜಾ ಅವರ ವಿಕೆಟ್ ನ್ನು ತಂಡದ ಮೊತ್ತ 12 ಆಗುವಷ್ಟರಲ್ಲಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು, ಮಧ್ಯಮ ಕ್ರಮಾಂಕದಲ್ಲಿ ಬಾಬರ್ ಹಯಾತ್ 41 ಹಾಗೂ ಕಿಂಚಿತ್ ಶಾ 30 ಗಳಿಸಿದರು ಕೂಡ ಅದು ಗೆಲುವಿಗೆ ಸಾಕಾಗಲಿಲ್ಲ, ಅಂತಿಮವಾಗಿ ಹಾಂಗ್ ಕಾಂಗ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 152 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.