Suryakumar Yadav, IND vs AUS 3rd test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಒಬ್ಬ ಆಟಗಾರನನ್ನು ಆಡಿಸಲು ಬಹುತೇಕ ನಿರ್ಧರಿಸಲಾಗಿದೆ. ಒಂದೆಡೆ, ಭಾರತ ತಂಡವು ಸರಣಿ ಗೆಲ್ಲುವ ಗುರಿಯೊಂದಿಗೆ ಮಾರ್ಚ್ 1 ರಂದು ಮೈದಾನಕ್ಕಿಳಿಯಲಿದೆ.,
ಮತ್ತೊಂದೆಡೆ ಆಸ್ಟ್ರೇಲಿಯಾ ಈ ಸರಣಿಯಲ್ಲಿ ಮೊದಲ ಗೆಲುವನ್ನು ಸಾಧಿಸುವ ಉದ್ದೇಶದಿಂದ ಆಡಲಿದೆ. ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಪ್ರದರ್ಶನ ತೀವ್ರ ಮುಜುಗರ ತಂದಿತ್ತು. ಭಾರತದ ಬೌಲರ್‌ಗಳ ಮುಂದೆ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳು ಕೆಲಸ ಮಾಡಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಮ್ಮೆ ಭಾರತ ಬಲಿಷ್ಠ ತಂಡದೊಂದಿಗೆ ಇಂದೋರ್ ಟೆಸ್ಟ್‌ನಲ್ಲಿ ಆಡಲು ಬಯಸುತ್ತಿದೆ.
ಇದನ್ನೂ ಓದಿ: Women's T20 World Cup: ಮೊದಲ ಬಾರಿ ಫೈನಲ್’ಗೆ ಪ್ರವೇಶಿಸುವ ಮೂಲಕ ಇತಿಹಾಸ ಬರೆದ ದ.ಆಫ್ರಿಕಾ ವನಿತೆಯರು
ಈ ಆಟಗಾರನು ಆಡುವುದು ಖಚಿತ!
ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಪಡೆದರು. ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಇಬ್ಬರ ಬ್ಯಾಟ್‌ನಿಂದ ರನ್ ಬರಲಿಲ್ಲ. ಆದರೆ ಮೂರನೇ ಟೆಸ್ಟ್‌ಗೂ ಮುನ್ನ ಸೂರ್ಯಕುಮಾರ್ ಯಾದವ್ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಾಕಿದ್ದು, ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮಾತುಕತೆ ಶುರುವಾಗಿದೆ. ಸೂರ್ಯಕುಮಾರ್ ಯಾದವ್ ಮೂರನೇ ಟೆಸ್ಟ್‌ನಲ್ಲಿ ಆಡುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್ ಗವಾಸ್ಕರ್ ಟ್ರೋಫಿ ನಡೆಯುತ್ತಿದೆ. ಭಾರತ ಮೂರನೇ ಟೆಸ್ಟ್‌ನಲ್ಲಿ ಗೆದ್ದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (ಡಬ್ಲ್ಯುಟಿಸಿ ಫೈನಲ್) ಫೈನಲ್‌ಗೆ ಹೋಗುವ ಸಾಧ್ಯತೆಗಳು ಮತ್ತಷ್ಟು ಹೆಚ್ಚಾಗುತ್ತವೆ. ಮತ್ತೊಂದೆಡೆ, ಆಸ್ಟ್ರೇಲಿಯಾ ಈಗಾಗಲೇ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್-1 ಸ್ಥಾನದಲ್ಲಿ ಉಳಿದಿದೆ. ಇನ್ನುಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಸೋಲಿಸಿದರೆ, ಆಸ್ಟ್ರೇಲಿಯಕ್ಕೆ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಬರುವುದು ಕಷ್ಟ.
ಇದನ್ನೂ ಓದಿ: IND vs AUS: ಕೇವಲ 4 ದಿನಗಳಲ್ಲಿ ಕೊನೆಯಾಗಲಿದೆ ಈ ಸ್ಟಾರ್ ಕ್ರಿಕೆಟಿಗನ ವೃತ್ತಿ ಜೀವನ!
ಭಾರತ ಸರಣಿಯಲ್ಲಿ 2-0 ಮುನ್ನಡೆ:
ಭಾರತ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಹಿನ್ನಡೆಗೆ ತಳ್ಳಿದೆ. ನಾಗ್ಪುರ ಟೆಸ್ಟ್‌ನಲ್ಲಿ ಭಾರತ ಇನಿಂಗ್ಸ್ ಮತ್ತು 132 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿತು. ದೆಹಲಿ ಟೆಸ್ಟ್‌ನಲ್ಲೂ ಭಾರತ 6 ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿತು. ಇದೀಗ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟೆಸ್ಟ್’ನ ಸರದಿ. ಇಂದೋರ್‌ನ ಪಿಚ್ ಸ್ಪಿನ್ ಬೌಲರ್‌ಗಳಿಗೂ ಸಹಕಾರಿಯಾಗಿದೆ. ಭಾರತದ ಸ್ಪಿನ್ ಬೌಲರ್‌ಗಳನ್ನು ಆಸ್ಟ್ರೇಲಿಯಾ ಹೇಗೆ ಎದುರಿಸಲಿದೆ ಎಂಬುದು ಕಾದು ನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.