T20 World Cup 2021, ENG vs NZ: ಇಂದು ಫೈನಲ್‌ಗಾಗಿ ಇಂಗ್ಲೆಂಡ್ VS ನ್ಯೂಜಿಲೆಂಡ್ ಕಾದಾಟ..!

ಸಂಜೆ 7.30ಕ್ಕೆ ಅಬುಧಾಬಿಯ ಶೇಖ್ ಜಾಯೆದ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಭಾರೀ ಕುತೂಹಲ ಮೂಡಿಸಿದೆ.

Written by - Puttaraj K Alur | Last Updated : Nov 10, 2021, 12:46 PM IST
  • ಫೈನಲ್ ಟಿಕೆಟ್ ಗಾಗಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿ
  • 2019ರ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ನ್ಯೂಜಿಲೆಂಡ್..?
  • ಭಾರೀ ಕುತೂಹಲ ಮೂಡಿಸಿರುವ ಬಲಿಷ್ಠ ತಂಡಗಳ ನಡುವಿನ ಸೆಣಸಾಟ
T20 World Cup 2021, ENG vs NZ: ಇಂದು ಫೈನಲ್‌ಗಾಗಿ ಇಂಗ್ಲೆಂಡ್ VS ನ್ಯೂಜಿಲೆಂಡ್ ಕಾದಾಟ..! title=
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿ

ನವದೆಹಲಿ: ಇಂದು ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯ(ENG vs NZ T20 Semifinal Match)ನಡೆಯಲಿದ್ದು, ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಸಂಜೆ 7.30ಕ್ಕೆ ಅಬುಧಾಬಿಯ ಶೇಖ್ ಜಾಯೆದ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಭಾರೀ ಕುತೂಹಲ ಮೂಡಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉಭಯ ತಂಡಗಳು ಬಲಿಷ್ಠವಾಗಿದ್ದು, ಯಾರಿಗೆ ಫೈನಲ್ ಟಿಕೆಟ್ ಸಿಗುತ್ತದೆ ಎಂಬುದರ ಬಗ್ಗೆ ಅಭಿಮಾನಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ.

2019ರ ಏಕದಿನ ವಿಶ್ವಕಪ್​ನಲ್ಲಿ(England vs New Zealand World Cup 2019) ಈ ಎರಡೂ ತಂಡಗಳು ಫೈನಲ್ ಪ್ರವೇಶಿಸಿದ್ದವು. ಅಂದು ಪಂದ್ಯ ಟೈ ಆಗಿದ್ದರಿಂದ ಸೂಪರ್ ಓವರ್​ ನಡೆಸಲಾಗಿತ್ತು. ಆದರೆ ಸೂಪರ್ ಓವರ್ ಕೂಡ​ ಟೈ ಆಗಿದ್ದರಿಂದ ಹೆಚ್ಚು ಬೌಂಡರಿ ಸಿಡಿಸಿದ ಆಧಾರದ ಮೇಲೆ ಇಂಗ್ಲೆಂಡ್​ ತಂಡ ಚಾಂಪಿಯನ್ ಆಗಿ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದಾದ ಬಳಿಕ ನಡೆದ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಕಿವೀಸ್ ತಂಡವು ಫೈನಲ್​ನಲ್ಲಿ ಭಾರತವನ್ನು ಮಣಿಸಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿದಿತ್ತು.

ಇದನ್ನೂ ಓದಿ: Ind vs NZ: ನ್ಯೂಜಿಲೆಂಡ್ ಸರಣಿಗಾಗಿ ಟೀಮ್ ಇಂಡಿಯಾದಲ್ಲಿ ಇಬ್ಬರು ಭಯಾನಕ ಬೌಲರ್‌ಗಳ ಸೇರ್ಪಡೆ

‘ಎ’ ಗುಂಪಿನಲ್ಲಿ 4 ಪಂದ್ಯಗಳನ್ನು ಗೆದ್ದಿದ್ದ ಇಯಾನ್ ಮಾರ್ಗನ್(Eoin Morgan) ನೇತೃತ್ವದ ಆಂಗ್ಲ ಪಡೆ ಸೆಮಿಫೈನಲ್ ಪ್ರವೇಶಿಸಿದರೆ, ‘ಬಿ’ ಗುಂಪಿನಲ್ಲಿ 4 ಪಂದ್ಯಗಳನ್ನು ಗೆದ್ದಿರುವ ಕೇನ್ ವಿಲಿಯಮ್ಸನ್ ನೇತೃತ್ವದ ಕಿವೀಸ್ ಪಡೆ ನಾಲ್ಕರ ಘಟ್ಟಕ್ಕೆ ಅರ್ಹತೆ ಪಡೆದುಕೊಂಡಿದೆ. ಇಂದು ಅಬುಧಾಬಿಯಲ್ಲಿ ನಡೆಯಲಿರುವ ಸೆಮಿಫೈನಲ್ ಕಾದಾಟವು ಮತ್ತೊಮ್ಮೆ 2019ರ ರೋಚಕ ಕ್ಷಣವನ್ನು ಮರು ಸೃಷ್ಟಿಸುವ ಸಾಧ್ಯತೆ ಇದ್ದು, ಕೋಟ್ಯಂತರ ಅಭಿಮಾನಿಗಳು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

ಟಿ-20 ವಿಶ್ವಕಪ್(T20 World Cup 2021) ಆರಂಭದಿಂದಲೂ ಈ ಎರಡೂ ತಂಡಗಳು ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿವೆ. ಇಬ್ಬರು ಚಾಣಾಕ್ಷ ನಾಯಕರು, ಘಟಾನುಘಟಿ ಆಟಗಾರರ ನಡುವೆ ನಡೆಯುತ್ತಿರುವ ಈ ಸೆಮಿಫೈನಲ್ ಫೈಟ್​ನಲ್ಲಿ ಯಾರಿಗೆ ವಿಜಯಲಕ್ಷ್ಮೀ ಒಲಿಯುತ್ತಾಳೆಂಬುದು ತೀವ್ರ ಕುತೂಹಲ ಕೆರಳಿಸಿದೆ. 2019ರಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಸೇಡನ್ನು ನ್ಯೂಜಿಲೆಂಡ್ ತೀರಿಸಿಕೊಳ್ಳುತ್ತಾ..? ಅನ್ನೋ ಪ್ರಶ್ನೆ ಮೂಡಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಇಂದಿನ ಪಂದ್ಯವು ಬಹುರೋಚಕತೆಯಿಂದ ಕೂಡಿರಲಿದೆ.

ಇದನ್ನೂ ಓದಿ: ಕೊನೆಯಾಗಲಿದೆಯೇ ಈ ನಾಲ್ಕು ಕ್ರಿಕೆಟಿಗರ ಟೆಸ್ಟ್ ಕರಿಯರ್ ?

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ: 

ಇಂಗ್ಲೆಂಡ್: ಇಯಾನ್ ಮಾರ್ಗನ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೇಮ್ಸ್ ವಿನ್ಸ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಟಾಮ್ ಕರ್ರಾನ್, ರೀಸ್ ಟೋಪ್ಲಿ.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಎಂ ಸೌಥಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News