T20 World Cup 2022: ಪಾಕಿಸ್ತಾನ ತಂಡಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದ ರಮೀಝ್ ರಾಜಾ..!

ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯದಲ್ಲಿ ಸೋಲು ಕಂಡಿದ್ದಕ್ಕೆ ಪಾಕಿಸ್ತಾನದ ಮಾಜಿ ಆಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Oct 24, 2022, 04:05 PM IST
  • ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯದಲ್ಲಿ ವಿರೋಚಿತ ಸೋಲು ಕಂಡ ಪಾಕಿಸ್ತಾನ
  • ಪಾಕಿಸ್ತಾನಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಝ್ ರಾಜಾ
  • ಈ ಆಟವು ಕ್ರೂರ ಮತ್ತು ಅನ್ಯಾಯವಾಗಿರಬಹುದು ಎಂದು ಬೇಸರ ವ್ಯಕ್ತಪಡಿಸಿದ ಪಿಸಿಬಿ ಅಧ್ಯಕ್ಷ
T20 World Cup 2022: ಪಾಕಿಸ್ತಾನ ತಂಡಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದ ರಮೀಝ್ ರಾಜಾ..!   title=
ಬೇಸರ ವ್ಯಕ್ತಪಡಿಸಿದ ಪಿಸಿಬಿ ಅಧ್ಯಕ್ಷ

ನವದೆಹಲಿ: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ವಿರೋಚಿತ ಗೆಲುವು ಸಾಧಿಸಿತು. ಸ್ಫೋಟಕ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕಕ್ಕೆ ತಾನು ಕಿಂಗ್ ಅನ್ನೋದನ್ನ ಮತ್ತೊಮ್ಮೆ ತೋರಿಸಿದರು.

ಈ ಪಂದ್ಯದ ಕೊನೆಯ ಓವರ್ ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮೊಹಮ್ಮದ್ ನವಾಜ್ ಎಸೆದ ಈ ಓವರ್‍ನ 4ನೇ ಎಸೆತವನ್ನು ವಿರಾಟ್ ಕೊಹ್ಲಿ ಸಿಕ್ಸರ್‍ಗೆ ಅಟ್ಟಿದ್ದರು. ಆದರೆ ಈ ಎಸೆತವನ್ನು ಅಂಪೈರ್ ನೋಬಾಲ್ ಎಂದು ಘೋಷಿಸಿದ್ದರು. ಈ ಬಗ್ಗೆ ಪಾಕ್ ಆಟಗಾರರು ಮೈದಾನದಲ್ಲಿಯೇ ಅಂಪೈರ್ ತೀರ್ಪನ್ನು ಪ್ರಶ್ನಿಸಿದ್ದರು. ಅಂತಿಮವಾಗಿ ಗೆಲ್ಲುವ ಪಂದ್ಯದಲ್ಲಿ ಪಾಕಿಸ್ತಾನ ವಿರೋಚಿತ ಸೋಲು ಕಾಣಬೇಕಾಯಿತು. ಇದು ಪಾಕಿಸ್ತಾನದ ಮಾಜಿ ಆಟಗಾರರು ಮತ್ತು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.

ಇದನ್ನೂ ಓದಿ: ಟೀಂ ಇಂಡಿಯಾ ಗೆಲುವಿನ ರೂವಾರಿಗಳ ಮನದಾಳದ ಮಾತು: Hardik-Virat ಸಂದರ್ಶನದಲ್ಲಿದೆ ರೋಚಕ ಮಾಹಿತಿ

ಟೀಂ ಇಂಡಿಯಾ ಈ ಪಂದ್ಯವನ್ನು ಮೋಸದಿಂದ ಗೆದ್ದಿದೆ ಅಂತಾ ಪಾಕಿಸ್ತಾನದ ಮಾಜಿ ಆಟಗಾರರು ಸೇರಿದಂತೆ ಅಭಿಮಾನಿಗಳು ಆರೋಪಿಸಿದ್ದಾರೆ. ಈ ಪಂದ್ಯದ ಸೋಲಿನಿಂದ ಪಾಕಿಸ್ತಾನಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಝ್ ರಾಜಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಮೀಝ್ ರಾಜಾ, ‘ಇದು ಒಂದು ಶ್ರೇಷ್ಠ ಪಂದ್ಯ! ನೀವು ಕೆಲವು ಪಂದ್ಯಗಳಲ್ಲಿ ಗೆಲ್ಲುತ್ತೀರಿ, ಕೆಲವು ಪಂದ್ಯಗಳಲ್ಲಿ ಸೋಲುತ್ತೀರಿ. ನಮಗೆಲ್ಲರಿಗೂ ತಿಳಿದಿರುವಂತೆ ಈ ಆಟವು ಕ್ರೂರ ಮತ್ತು ಅನ್ಯಾಯವಾಗಿರಬಹುದು. #TeamPakistan ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಹೆಚ್ಚಿನದನ್ನು ನೀಡಲು ಸಾಧ್ಯವಾಗಲಿಲ್ಲ. ಆದರೆ ನಮ್ಮ ಆಟಗಾರರ ಪ್ರಯತ್ನದ ಬಗ್ಗೆ ತುಂಬಾ ಹೆಮ್ಮೆ ಇದೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: T20 World Cup 2022: ಟೀಂ ಇಂಡಿಯಾ ಮೋಸದಿಂದ ಗೆದ್ದಿದೆ ಎಂದ ಪಾಕಿಸ್ತಾನ..!

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ನಿಗದಿತ 20 ಓವರ್‍ಗಳಲ್ಲಿ 159 ರನ್ ಗಳಿಸಿತು. ಸವಾಲಿನ ಟಾರ್ಗೆಟ್ ಬೆನ್ನುಹತ್ತಿದ ಭಾರತ ವಿರಾಟ್ ಕೊಹ್ಲಿ(ಅಜೇಯ 82) ಮತ್ತು ಹಾರ್ದಿಕ್ ಪಾಂಡ್ಯ (40) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News