IND vs ENG: ಸೆಮಿಸ್ಗೂ ಮುನ್ನ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ..! ತಂಡದಿಂದ ಹೊರಬೀಳಲಿದ್ದಾರಾ ಸ್ಟಾರ್ ಆಟಗಾರ..?
IND vs ENG: ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಕಣಕ್ಕಿಳಿಯಲಿವೆ, ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ.
IND vs ENG: ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಕಣಕ್ಕಿಳಿಯಲಿವೆ, ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಗಯಾನಾ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಬಹುದು ಎಂಬ ಸುದ್ದಿ ಇದೀಗ ಕೇಳಿ ಬರುತ್ತಿವೆ.
ಓಪನಿಂಗ್ ಬ್ಯಾಟ್ಸ್‌ಮೆನ್‌ಗಳದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಇದರೊಂದಿಗೆ ವಿರಾಟ್ ಕೊಹ್ಲಿ ಬದಲಿಗೆ ಯಶಸ್ವಿ ಜೈಸ್ವಾಲ್‌ರನ್ನು ಓಪನರ್ ಆಗಿ ಕಣಕ್ಕಿಳಿಸುವ ಯೋಜನೆ ನಡೆದಿದೆ ಎಂದು ವರದಿಯಾಗಿದೆ. 2022ರಲ್ಲಿ ಸೆಮಿಫೈನಲ್‌ನಲ್ಲಿ ಇದೇ ಇಂಗ್ಲೆಂಡ್ ತಂಡವನ್ನು ಎದುರಿಸಿದ್ದ ಟೀಂ ಇಂಡಿಯಾ ವಿರೋಧಿ ತಂಡದ ಎದುರು ಸೋತು ಮನೆಗೆ ಹೋಗಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳಲು ರೋಹಿತ್ ಸೇನೆ ಸಜ್ಜಾಗಿ ಕಾಯ್ತಾ ಇದೆ. ಅದಕ್ಕಾಗಿಯೇ ಬಲಿಷ್ಠ ಆಟಗಾರರೊಂದಿಗೆ ಕಣಕ್ಕೆ ಇಳಿಯಲು ಸಕತ್ ಪ್ಲಾನ್ ಮಾಡಿಕೊಳ್ಳುತ್ತಿದೆ.
ಇದನ್ನೂ ಓದಿ: ಭಾರತದ ವಿರುದ್ಧ ಸೆಮಿಫೈನಲ್‌ಗೆ ರೆಡಿಯಾಯ್ತು ಇಂಗ್ಲೆಂಡ್ ಪ್ಲೇಯಿಂಗ್ XI, ಹೇಗಿದೆ ವಿರೋಧಿ ತಂಡದ ಸಾಂಭವ್ಯ ಆಟಗಾರರ ಪಟ್ಟಿ..?
ಓಪನರ್ ಆಗಿ ಕೊಹ್ಲಿ ಕಳಪೆ ಫಾರ್ಮ್‌ನಲ್ಲಿ ಮುಂದುವರಿದಿದ್ದಾರೆ. ಕಳೆದ ಪಂದ್ಯದಲ್ಲಿ ಆಸೀಸ್ ವಿರುದ್ಧ ವಿರಾಟ್ ಡಕ್ ಔಟ್ ಆಗಿದ್ದರು. ಟೂರ್ನಿಯಲ್ಲಿ ಇದು ಅವರ ಎರಡನೇ ಡಕ್ ಔಟ್ ಆಗಿದೆ. ಹಾಗಾಗಿ ಕೊಹ್ಲಿ ಎಂದಿನಂತೆ ಮೂರನೇ ಸ್ಥಾನಕ್ಕೆ ಇಳಿಯಲಿದ್ದು, ಓಪನರ್ ಆಗಿ ಯಶಸ್ವಿ ಜೈಸ್ವಾಲ್ ಕಣಕ್ಕೆ ಇಳಿಯಲಿದ್ದಾರೆ. ಈ ಒಂದು ಬದಲಾವಣೆಯನ್ನು ಹೊರತುಪಡಿಸಿ, ತಂಡದ ಉಳಿದ ಆಟಗಾರರು ಅದೇ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
ಟೀಮ್ ಇಂಡಿಯಾ ಸ್ಕ್ವಾಡ್ (ಅಂದಾಜು):
ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ, ರಿಷಭ್ ಪಂತ್ , ಸೂರ್ಯಕುಮಾರ್ ಯಾದವ್, ಶಿವಂ ದುಬೆ ಅಥವಾ ಯಶಸ್ವಿ ಜೈಸ್ವಾಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.