T20 World Cup 2024: ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ..!
T20 World Cup 2024:ಶನಿವಾರ, ಜೂನ್ 29 ರಂದು ನಡೆದ ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎದುರಾಳಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ರೋಚಕ ಜಯ ಸಾಧಿಸಿದೆ, ಈ ಮೂಲಕ ಟಿ20 ಕಪ್ ತನ್ನದಾಗಿಸಿಕೊಂಡಿದೆ. ಇದರ ಬೆನ್ನಲ್ಲೆ ವಿರಾಟ್ ಕೋಹ್ಲಿ ತಮ್ಮ ಅಂತಾರಾಷ್ಟರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿರಾಟ್ ತಮ್ಮ ವಿದಾಯ ಘೋಷಿಸುತ್ತಿದ್ದ ಬೆನ್ನಲ್ಲೆ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.
T20 World Cup 2024: ಶನಿವಾರ, ಜೂನ್ 29 ರಂದು ನಡೆದ ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎದುರಾಳಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ರೋಚಕ ಜಯ ಸಾಧಿಸಿದೆ, ಈ ಮೂಲಕ ಟಿ20 ಕಪ್ ತನ್ನದಾಗಿಸಿಕೊಂಡಿದೆ. ಇದರ ಬೆನ್ನಲ್ಲೆ ವಿರಾಟ್ ಕೋಹ್ಲಿ ತಮ್ಮ ಅಂತಾರಾಷ್ಟರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿರಾಟ್ ತಮ್ಮ ವಿದಾಯ ಘೋಷಿಸುತ್ತಿದ್ದ ಬೆನ್ನಲ್ಲೆ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.
2024ರ ಟಿ20 ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿ ನಿರ್ಧಾರವನ್ನು ಮೊದಲು ಘೋಷಿಸಿದರು. ಭವಿಷ್ಯದ ಪೀಳಿಗೆಗಾಗಿ ಅಂತರಾಷ್ಟ್ರೀಯ ಟಿ20 ಪಂದ್ಯಗಳಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ.
ಇದಾದ ಕೆಲವೇ ನಿಮಿಷಗಳ ಬೆನ್ನಲ್ಲೆ ರೋಹಿತ್ ಶರ್ಮಾ ಕೂಡ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ಶನಿವಾರ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ 7 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಯಿತು. ಐಸಿಸಿ ಪ್ರಶಸ್ತಿಗಾಗಿ 11 ವರ್ಷಗಳ ಸುದೀರ್ಘ ಕಾಯುವಿಕೆ ಈ ಪಂದ್ಯ ಗೆಲ್ಲುವ ಮೂಲಕ ಕೊನೆಗೊಂಡಿತು. ಪಂದ್ಯದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದ ರೋಹಿತ್ ಶರ್ಮಾ ನಿವೃತ್ತಿ ನಿರ್ಧಾರ ಪ್ರಕಟಿಸಿದರು.
“ಈ ವಿಶ್ವಕಪ್ ಫೈನಲ್ ನನ್ನ ಕೊನೆಯ ಪಂದ್ಯವಾಗಿದೆ. ನಿಜ ಹೇಳಬೇಕೆಂದರೆ, ನಾನು ಆಟವನ್ನು ತುಂಬಾ ಆನಂದಿಸಿದೆ, ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ. ನನ್ನ ಟಿ20 ವೃತ್ತಿಜೀವನದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ. ಟೀಂ ಇಂಡಿಯಾ ಪರ ನನ್ನ ಅಂತರಾಷ್ಟ್ರೀಯ ವೃತ್ತಿ ಜೀವನ ಆರಂಭವಾಗಿದ್ದು ಇದೇ ಮಾದರಿಯಲ್ಲಿ. ನನಗೆ ವಿಶ್ವಕಪ್ ಗೆಲ್ಲಬೇಕೆಂಬ ಆಸೆ ಇತ್ತು. ಗೆದ್ದಿದ್ದರಿಂದ ವಿದಾಯ ಹೇಳುತ್ತಿದ್ದೇನೆ' ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
2007ರ ಟಿ20 ವಿಶ್ವಕಪ್‌ನೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿದ ರೋಹಿತ್ ಶರ್ಮಾ 17 ವರ್ಷಗಳ ಸುದೀರ್ಘ ಪಯಣವನ್ನು ಅಂತ್ಯಗೊಳಿಸಿದರು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 176 ರನ್ ಗಳಿಸಿತು. ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ಸಿಡಿಸಿ 76 ರನ್ ಕಲೆಹಾಕಿದರು.
ಬಳಿಕ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 165 ರನ್ ಗಳಿಸಿ ಸೋಲನುಭವಿಸಿತು. ಹೆನ್ರಿಚ್ ಕ್ಲಾಸೆನ್ 27 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಿಡಿಸಿ 52 ಕಲೆಹಾಕುವ ಮೂಲಕ ತಂಡದ ಪರ ಕಾರಾಟ ನಡೆಸಿದರು. ಇನ್ನೂ ಕ್ವಿಂಟನ್ ಡಿ ಕಾಕ್ 31 ಎಸೆತಗಳಲ್ಲಿ 4 ಬೌಂಡರಿ ಭಾರಿಸಿ 39 ರನ್ ಕಲೆಹಾಕಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.