T20 World Cup 2024: ಸೂಪರ್ 8ರಲ್ಲಿ ಗೆಲುವಿನ ಆರಂಭ ಮಾಡಿದ ನಂತರ, ಭಾರತವು ಈಗ ಬಾಂಗ್ಲಾದೇಶವನ್ನು ಎದುರಿಸಲಿದೆ. ಬಾಂಗ್ಲಾ ಸೂಪರ್ 8ರ ತಮ್ಮ ಮೊದಲ ಪಂದ್ಯವನ್ನು ಸೋತಿತ್ತು. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯ ಇಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.


COMMERCIAL BREAK
SCROLL TO CONTINUE READING

ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಯಾವಾಗಲೂ ಮೇಲುಗೈ ಸಾಧಿಸಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 13 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ ಒಂದು ಪಂದ್ಯವನ್ನು ಗೆದ್ದಿದೆ.


ಇದನ್ನೂ ಓದಿ: Thalapathy Vijay Birthday: ನೂರಾರು ಕೋಟಿ ಸಂಭಾವನೆ ಪಡೆವ ದಳಪತಿ ವಿಜಯ್ ಆಸ್ತಿ ಎಷ್ಟು ಗೊತ್ತಾ?


ಟಿ20 ವಿಶ್ವಕಪ್‌’ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತದ ದಾಖಲೆ ಉತ್ತಮವಾಗಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತವನ್ನು ಸೋಲಿಸಲು ಬಾಂಗ್ಲಾದೇಶಕ್ಕೆ ಸಾಧ್ಯವಾಗಿಲ್ಲ. ಭಾರತ ತಂಡ ಬಾಂಗ್ಲಾದೇಶದ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 4 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಎಲ್ಲಾ 4 ಪಂದ್ಯಗಳನ್ನು ಗೆದ್ದಿದೆ.


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ವಿಶ್ವಕಪ್‌’ನ ಸೂಪರ್-8 ಪಂದ್ಯವು ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನ ಪಿಚ್ ವೇಗದ ಬೌಲರ್’ಗಳಿಗೆ ಮತ್ತು ಬ್ಯಾಟ್ಸ್ ಮನ್’ಗಳಿಗೆ ಸ್ನೇಹಿ. ಇನ್ನು ಆಟ ಮುಂದುವರೆದಂತೆ ಇಲ್ಲಿನ ಪಿಚ್ ನಿಧಾನವಾಗುತ್ತದೆ. ಈ ಪಿಚ್‌ನಲ್ಲಿ ಯಾವ ತಂಡವು ಟಾಸ್ ಗೆದ್ದರೂ, ಮೊದಲು ಬ್ಯಾಟಿಂಗ್ ಮಾಡಲು ಬಯಸುತ್ತದೆ. ಏಕೆಂದರೆ ಪಿಚ್ ನಿಧಾನವಾದಾಗ ಇಲ್ಲಿ ರನ್ ಚೇಸ್ ಕಷ್ಟವಾಗುತ್ತದೆ.


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಈ ಟಿ20 ವಿಶ್ವಕಪ್ ಪಂದ್ಯವು ಸ್ಥಳೀಯ ಕಾಲಮಾನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಡೆಯಲಿದೆ. ಪಂದ್ಯದ ವೇಳೆ 18 ರಿಂದ 24 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ 20 ವಿಶ್ವಕಪ್ ಪಂದ್ಯದ ವೇಳೆ ಮಳೆ ಅಡ್ಡಿಪಡಿಸಬಹುದು, ಆದರೆ ಪಂದ್ಯವು ವಾಶ್ ಔಟ್ ಆಗುವ ಸಾಧ್ಯತೆ ತುಂಬಾ ಕಡಿಮೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುವುದು. ಸೂಪರ್ -8 ಪಂದ್ಯಗಳಿಗೆ ಮೀಸಲು ದಿನವನ್ನು ಇರಿಸಲಾಗಿಲ್ಲ.


ಇದನ್ನೂ ಓದಿ:  Hebah Patel : ಸೀರೆಯಲ್ಲಿ ಮಿಂಚಿದ ʼಶಿವರುದ್ದೇಗೌಡರ ಮಗಳುʼ..! ಫೋಟೋಸ್‌ ಇಲ್ಲಿವೆ


ಟೀಂ ಇಂಡಿಯಾದಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಿವಂ ದುಬೆ, ರವೀಂದ್ರ ಜಡೇಜಾರಂತಹ ಕ್ರಿಕೆಟಿಗರು ರನ್‌’ಗಾಗಿ ಪರದಾಡುತ್ತಿದ್ದಾರೆ. ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಯಾಗಿರುವ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ