T20 World Cup 2024 Rohit Sharma Captain:ಟಿ20 ವಿಶ್ವಕಪ್‌ ನಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಬುಧವಾರ ಪ್ರಕಟಿಸಿದ್ದಾರೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಸರಣಿಯ ಮೂರನೇ ಟೆಸ್ಟ್‌ಗೆ ಮೊದಲು ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಈ ಘೋಷಣೆ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೋರಮಂಗಲದಲ್ಲಿ ಫೆ.16 ರಿಂದ 18 ರವರೆಗೆ ಕರಾಟೆ ಕುರಿತ ಅಂತರರಾಷ್ಟ್ರೀಯ ವಿಚಾರ ಸಂಕಿರ್ಣ 


ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬುಧವಾರ ಟೀಂ ಇಂಡಿಯಾದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ನ ಅಂತಿಮ ಪಂದ್ಯದಲ್ಲಿ ಭಾರತ ಸೋತರೂ ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಅಭಿಮಾನಿಗಳ ಮನ ಗೆದ್ದಿದೆ ಎಂದರು. ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್‌ಗೆ ಮುನ್ನ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಶಾ ಹೇಳಿದ್ದಾರೆ.  


ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 


ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಆಡದಿರುವ ಬಗ್ಗೆ ಮಾತನಾಡಿರುವ ಶಾ, ವಿರಾಟ್ ಯಾವುದೇ ಪ್ರಮುಖ ಕಾರಣವಿಲ್ಲದೆ ಸರಣಿಯಲ್ಲಿ ಆಡದಂತಹ ಆಟಗಾರನಲ್ಲ ಎಂದು ಹೇಳಿದರು.


ಇದನ್ನೂ ಓದಿ: ಬಿಸಿಸಿಐ ಒತ್ತಡಕ್ಕೆ ಮಣಿದ್ರಾ ಇಶಾನ್ ಕಿಶನ್? ಮಹತ್ವದ ನಿರ್ಧಾರ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.