Indian team for AUS tests, KL Rahul Vice Captain: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಉಳಿದ 2 ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ದೆಹಲಿಯ ಫಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿ ಭಾರತ 6 ವಿಕೆಟ್‌ಗಳ ಜಯ ಸಾಧಿಸಿದ ಕೆಲವೇ ಗಂಟೆಗಳ ನಂತರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಈ ಪಂದ್ಯಗಳ ನಾಯಕತ್ವವನ್ನು ರೋಹಿತ್ ಶರ್ಮಾಗೆ ನೀಡಲಾಗಿದೆ. ಆದರೆ ಇದೀಗ ಉಪನಾಯಕತ್ವದ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: India squad for ODI series: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಅಲ್ಲ, ಈ ಆಟಗಾರನಿಗೆ ಲಭಿಸಿದ ನಾಯಕತ್ವ!


ಟೆಸ್ಟ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ:


ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಎರಡು ಟೆಸ್ಟ್‌ಗಳಿಗೆ ರೆಡ್ ಬಾಲ್ ತಂಡದಲ್ಲಿ ಭಾರತೀಯ ಆಯ್ಕೆಗಾರರು ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ತಂಡ ಪ್ರಕಟಿಸಿದ ಪ್ರತಿಯಲ್ಲಿ ಉಪನಾಯಕನ ಹೆಸರನ್ನು ಉಲ್ಲೇಖಿಸಿಲ್ಲ. ನಾಗ್ಪುರ ಮತ್ತು ದೆಹಲಿಯಲ್ಲಿ ನಡೆದ ಸರಣಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಓಪನರ್ ಕೆಎಲ್ ರಾಹುಲ್ ಅವರನ್ನು, ರೋಹಿತ್ ಶರ್ಮಾ ಉಪನಾಯಕನನ್ನಾಗಿ ಮಾಡಿದ್ದರು. ಆದರೆ ಅವರು ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದಾರೆ.


ಸೌರಾಷ್ಟ್ರ ವೇಗಿ ಜಯದೇವ್ ಉನದ್ಕತ್ ತಂಡಕ್ಕೆ ಮರಳಿದ್ದಾರೆ. ಬಂಗಾಳ ವಿರುದ್ಧದ ರಣಜಿ ಟ್ರೋಫಿ ಫೈನಲ್‌ಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರನ್ನು ರಿಲೀಸ್ ಮಾಡಲಾಗಿತ್ತು. ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ. ಏಕದಿನ ತಂಡದಲ್ಲಿಯೂ ಸ್ಥಾನ ಪಡೆದಿದ್ದಾರೆ. ಜಯದೇವ್ 2010 ರಲ್ಲಿ ತಮ್ಮ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದರು. ಅದಾದ ಬಳಿಕ ಸುಮಾರು 2 ವರ್ಷಗಳ ನಂತರ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡಿಸೆಂಬರ್ 2022 ರಲ್ಲಿ ಮೀರ್‌ಪುರದಲ್ಲಿ ಬಾಂಗ್ಲಾದೇಶ ವಿರುದ್ಧ ಆಡಿದ್ದರು.


ಆಸ್ಟ್ರೇಲಿಯಾ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್‌ನಲ್ಲಿ ನಡೆಯಲಿದೆ. ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಮಾರ್ಚ್ 9 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.


ಇದನ್ನೂ ಓದಿ: DK Ravi Wife : ಐಎಎಸ್ vs ಐಪಿಎಸ್ ಅಧಿಕಾರಿಗಳ ಮಧ್ಯೆ ಎಂಟ್ರಿಯಾದ ಡಿ.ಕೆ ರವಿ ಪತ್ನಿ ಕುಸುಮಾ!


ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ಕ್ಯಾ), ಲೋಕೇಶ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕತ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.