Virat Kohli Captaincy: ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್‌ ಮನ್ ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ ನಂತರ ಈ ದಿನಗಳಲ್ಲಿ ಬಿಡುವಿನ ಸಮಯವನ್ನು ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯವಾಗಿರುತ್ತಾರೆ. ಆದರೆ ವಿರಾಟ್ ಕೊಹ್ಲಿಯವರ ಇನ್‌ಸ್ಟಾಗ್ರಾಮ್ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವಿರಾಟ್ ಕೊಹ್ಲಿಯ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ತಲ್ಲಣ ಮೂಡಿಸಿದೆ. ಟ್ವಿಟ್ಟರ್‌ನಲ್ಲಿ ಜನರು ವಿರಾಟ್ ಕೊಹ್ಲಿಯ ಈ ಪೋಸ್ಟ್ ಅನ್ನು ಮತ್ತೊಮ್ಮೆ ಭಾರತ ಕ್ರಿಕೆಟ್ ತಂಡದ ನಾಯಕರಾಗುತ್ತಾರೆ ಎಂಬ ಚರ್ಚೆಯೊಂದಿಗೆ ಲಿಂಕ್ ಮಾಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  11 ವರ್ಷಗಳ ಬಳಿಕ ಈ ತಂಡದ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ! ಜು.6ರಿಂದ ನಡೆಯಲಿದೆ ಬಿಗ್ ಫೈಟ್


ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ವಿರಾಟ್ ಕೊಹ್ಲಿಯ ಈ ವಿಚಿತ್ರ ಪೋಸ್ಟ್ ನಿಂದ ಮುಂದಿನ ದಿನಗಳಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದು ಜನ ಊಹಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಮತ್ತೊಮ್ಮೆ ಭಾರತ ಕ್ರಿಕೆಟ್ ತಂಡದ ನಾಯಕರಾಗಬಹುದು ಮತ್ತು ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಕುತ್ತು ಬರಬಹುದು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ನ ಫೈನಲ್‌ ನಲ್ಲಿ ಭಾರತ ಸೋತ ನಂತರ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ.


5 ಐಪಿಎಲ್ ಟ್ರೋಫಿ ಗೆದ್ದಿರುವ ನಾಯಕ ಟೀಂ ಇಂಡಿಯಾಗೆ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂದರೆ ಹೇಗೆ ಎಂಬ ಪ್ರಶ್ನೆಗಳು ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಎದ್ದಿವೆ. ಕಳೆದ ವರ್ಷ ನವೆಂಬರ್ 2022 ರ ಮೊದಲು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಟಿ 20 ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದೆ. 2022 ರ T20 ವಿಶ್ವಕಪ್‌ ನ ಸೆಮಿಫೈನಲ್‌ ನಲ್ಲಿ ಇಂಗ್ಲೆಂಡ್ ಭಾರತವನ್ನು ಸೋಲಿಸಿತು ಮತ್ತು ICC ಟ್ರೋಫಿ ಗೆಲ್ಲುವ ಕನಸನ್ನು ಕಮರಿತು.


ಇದನ್ನೂ ಓದಿ: ಚಿಟಿಕೆಯಲ್ಲಿ ಪಂದ್ಯವನ್ನೇ ಬದಲಿಸಬಲ್ಲ ಈ ಆಟಗಾರ ವಿಶ್ವಕಪ್’ಗೆ ಎಂಟ್ರಿ! ಟೀಂ ಇಂಡಿಯಾಗೆ ಸಂತಸವೋ ಸಂತಸ


ಇದೀಗ ವಿರಾಟ್ ಕೊಹ್ಲಿ ಇಂಗ್ಲಿಷ್ ಬರಹಗಾರ ಅಲನ್ ವಾಟ್ಸ್ ಅವರ ಬರಹವನ್ನು ತಮ್ಮ ಸ್ಟೋರಿ ಮೂಲಕ ಹಂಚಿಕೊಂಡಿದ್ದಾರೆ. 'ಬದಲಾವಣೆಯ ಅರ್ಥವನ್ನು ಕಲ್ಪಿಸುವ ಏಕೈಕ ಮಾರ್ಗವೆಂದರೆ ಅದಕ್ಕೆ ಧುಮುಕುವುದು, ಅದರೊಂದಿಗೆ ಚಲಿಸುವುದು ಮತ್ತು ಅದರ ಜೊತೆ ಕುಣಿದಾಡುವುದು” ಎಂದು ಪೋಸ್ಟ್ ಬರೆದಿದ್ದಾರೆ. ವಿರಾಟ್ ಕೊಹ್ಲಿ ಅವರ ಈ ಪೋಸ್ಟ್‌ ಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ವಿರಾಟ್ ಕೊಹ್ಲಿ ಬಿಸಿಸಿಐ ಹಾಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ” ಎಂದು ಬರೆದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.