ICC Ranking: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಶುಕ್ರವಾರ (ಸೆಪ್ಟೆಂಬರ್ 22) ರಂದು ಪ್ರಾರಂಭವಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಹಂಗಾಮಿ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆಸ್ಟ್ರೇಲಿಯಾ 50 ಓವರ್’ಗಳಲ್ಲಿ 276 ರನ್ ಗಳಿಸಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 48.4 ಓವರ್‌ಗಳಲ್ಲಿ 281 ರನ್ ಗಳಿಸಿ ಗೆಲುವು ಸಾಧಿಸಿತು.
ಈ ಗೆಲುವಿನೊಂದಿಗೆ ಭಾರತ ಐಸಿಸಿ ಏಕದಿನ ರ‍್ಯಾಂಕಿಂಗ್’ನಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ. ಈಗಾಗಲೇ ಟಿ20 ಮತ್ತು ಟೆಸ್ಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತ, ಏಕಕಾಲದಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್-1 ಎನಿಸಿಕೊಂಡಿದೆ.
ಇದನ್ನೂ ಓದಿ: ODI ಕ್ರಿಕೆಟ್’ನಲ್ಲಿ ಇದುವರೆಗೆ ಒಂದೇ ಒಂದು ಬಾರಿಯೂ ಔಟ್ ಆಗದ ಭಾರತೀಯ ಬ್ಯಾಟ್ಸ್’ಮನ್ ಯಾರು ಗೊತ್ತಾ
ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದೆ. ಒಂದೇ ಸಮಯದಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಮೊದಲ ಸ್ಥಾನವನ್ನು ತಲುಪಿದ ಎರಡನೇ ತಂಡವಾಗಿ ಹೊರಹೊಮ್ಮಿದೆ. ಈ ಹಿಂದೆ ದಕ್ಷಿಣ ಆಫ್ರಿಕಾ ಈ ಸಾಧನೆ ಮಾಡಿತ್ತು. ಆಗಸ್ಟ್ 2012 ರಲ್ಲಿ ಏಕಕಾಲದಲ್ಲಿ ಟೆಸ್ಟ್-ODI ಮತ್ತು T20 ನಲ್ಲಿ ನಂಬರ್ ಒನ್ ಸ್ಥಾನ ಪಡೆದಿತ್ತು.
ಆಸ್ಟ್ರೇಲಿಯಾ ವಿರುದ್ಧದ ಗೆಲುವಿನ ನಂತರ ಭಾರತ ಏಕದಿನದಲ್ಲಿ 116 ರೇಟಿಂಗ್ ಪಾಯಿಂಟ್’ಗಳನ್ನು ತಲುಪಿದೆ. ಮೊದಲ ಸ್ಥಾನ ಪಡೆಯುವ ಮೂಲಕ ಪಾಕಿಸ್ತಾನವನ್ನು ಹಿಂದೆ ಹಾಕಿದೆ. ಪಾಕಿಸ್ತಾನ ತಂಡ 115 ರೇಟಿಂಗ್ ಅಂಕಗಳನ್ನು ಪಡೆದಿದೆ. ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದು, 111 ರೇಟಿಂಗ್ ಅಂಕಗಳನ್ನು ಹೊಂದಿದೆ.
ಇದನ್ನೂ ಓದಿ: ಇಂದಿನಿಂದ ಏಷ್ಯನ್ ಕ್ರೀಡಾಕೂಟ ಶುರು: ಮಿನಿ ಒಲಿಂಪಿಕ್ಸ್ ಉದ್ಘಾಟನೆ ಎಷ್ಟೊತ್ತಿಗೆ, ವೀಕ್ಷಿಸುವುದೇಗೆ
ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಏನಾಯಿತು?
ಮೊಹಾಲಿಯಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 50 ಓವರ್;ಗಳಲ್ಲಿ ಎಲ್ಲಾ 10 ವಿಕೆಟ್’ಗಳನ್ನು ಕಳೆದುಕೊಂಡು 276 ರನ್ ಗಳಿಸಿತು. ಡೇವಿಡ್ ವಾರ್ನರ್ 52 ರನ್, ಜೋಶ್ 45 ರನ್ ಮತ್ತು ಸ್ಟೀವ್ ಸ್ಮಿತ್ 41 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಇದಕ್ಕುತ್ತರವಾಗಿ ಟೀಂ ಇಂಡಿಯಾಕ್ಕೆ ರಿತುರಾಜ್ ಗಾಯಕ್ವಾಡ್ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿ ಮೊದಲ ವಿಕೆಟ್’ಗೆ 142 ರನ್ ಸೇರಿಸಿದರು. ರಿತುರಾಜ್ 71 ರನ್ ಮತ್ತು ಶುಭ್‌ಮನ್ ಗಿಲ್ 74 ರನ್’ಗಳ ಇನಿಂಗ್ಸ್ ಆಡಿದರು. ಇನ್ನು, ಸೂರ್ಯಕುಮಾರ್ ಯಾದವ್ 50 ರನ್ ಗಳಿಸಿ ಔಟಾದರು. ಜೊತೆಗೆ ನಾಯಕ ಕೆಎಲ್ ರಾಹುಲ್ 58 ರನ್ ಗಳ ಅಜೇಯ ಇನ್ನಿಂಗ್ಸ್ ಆಡಿದರು. 49ನೇ ಓವರ್ ನಲ್ಲಿ ಶಾನ್ ಅಬಾಟ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ