ನವದೆಹಲಿ: ವಿರಾಟ್ ಕೊಹ್ಲಿ ಸೋಮವಾರ ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಈಗ ಹೆಗ್ಗುರುತು ಸಾಧಿಸಿದ ವಿಶ್ವದ ಮೊದಲ ಕ್ರಿಕೆಟಿಗ ಕೊಹ್ಲಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸ್ವಾಗತಿಸಿದೆ.
ಈಗ ಕೊಹ್ಲಿ (Virat Kohli) ಕ್ರಿಸ್ಟಿಯಾನೊ ರೊನಾಲ್ಡೊ ರಂತಹ ತಾರೆಗೆಗಳ ಸಾಲಿಗೆ ಸೇರಿದ್ದಾರೆ. ಈಗ ಕೊಹ್ಲಿ ನಂತರ, ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಮ್ನಲ್ಲಿ 60 ಮಿಲಿಯನ್ ಫಾಲೋವರ್ಸ್ ಹೊಂದಿರುವ ಭಾರತೀಯರಾಗಿದ್ದಾರೆ.
ಇನ್‌ಸ್ಟಾಗ್ರಾಮ್‌ನ ಹೊರತಾಗಿ, ಕೊಹ್ಲಿ ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗಿನಂತೆ ಅವರು ಮೈಕ್ರೋ ಬ್ಲಾಗಿಂಗ್ ಸೈಟ್‌ನಲ್ಲಿ 40.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಫೇಸ್‌ಬುಕ್‌ನಲ್ಲಿ 36 ಮಿಲಿಯನ್‌ಗೂ ಹೆಚ್ಚು ಲೈಕ್‌ಗಳನ್ನು ಹೊಂದಿದ್ದಾರೆ.
Virat Kohli - the first cricket star to hit 100 million followers on Instagram 🎉 pic.twitter.com/HI1hTSbo8M
— ICC (@ICC) March 1, 2021
ಇದನ್ನೂ ಓದಿ: 'ಭಾರತ ತಂಡವು ಇಂಗ್ಲೆಂಡ್ ತಂಡದ ಸ್ಪಿನ್ ದೌರ್ಬಲ್ಯವನ್ನು ಸರಿಯಾಗಿ ಲೆಕ್ಕ ಹಾಕಿದೆ'
ಇನ್ಸ್ಟಾಗ್ರಾಮ್ನಲ್ಲಿ ಪೋರ್ಚುಗಲ್ ಮತ್ತು ಜುವೆಂಟಸ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ 266 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಅವರ ನಂತರ ಅರಿಯಾನಾ ಗ್ರಾಂಡೆ 224 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದರೆ, ನಿವೃತ್ತ ಡಬ್ಲ್ಯುಡಬ್ಲ್ಯುಇ ಸೂಪರ್ಸ್ಟಾರ್ ಡ್ವೇನ್ ಜಾನ್ಸನ್ 220 ಮಿಲಿಯನ್ ಅನುಯಾಯಿಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಮಾರ್ಚ್ 4 ರಿಂದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿರುವ ಕೊಹ್ಲಿ ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಅಹಮದಾಬಾದ್ನಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.