ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಸರಣಿಯ ಮೂರನೇ ಪಂದ್ಯವು ಇಂದು (ಜುಲೈ 17 ರಂದು) ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ರೋಹಿತ್ ಸೇನೆ ಈಗಾಗಲೇ ಸಜ್ಜಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಮೂರನೇ ಏಕದಿನ ಪಂದ್ಯವನ್ನು ಗೆದ್ದರೆ, ನಂತರ 39 ವರ್ಷಗಳ ನಂತರ ರೋಹಿತ್ ದೊಡ್ಡ ಇತಿಹಾಸವನ್ನು ಸೃಷ್ಟಿಸಲಿದ್ದಾರೆ ಮತ್ತು ಕಪಿಲ್ ದೇವ್ ಅವರ ವಿಶೇಷ ಕ್ಲಬ್ ಸೇರಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: PV Sindhu: ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಪಿವಿ ಸಿಂಧು


ರೋಹಿತ್‌ಗೆ ಇತಿಹಾಸ ಸೃಷ್ಟಿಸಲು ಸಾಧ್ಯವೇ?
ಮೂರನೇ ಏಕದಿನ ಪಂದ್ಯ ರೋಹಿತ್ ಶರ್ಮಾ ಅವರಿಗೆ ಅಗ್ನಿ ಪರೀಕ್ಷೆ ಎಂದರೆ ತಪ್ಪಾಗಲ್ಲ. ಸರಣಿ ಗೆಲ್ಲಬೇಕಾದರೆ ಭಾರತ ತಂಡ ಈ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಭಾರತ ತಂಡದ ದಾಖಲೆ ಅತ್ಯಂತ ಕಳಪೆಯಾಗಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಮೂರು ಮಾತ್ರ ಗೆದ್ದಿದೆ. ಕಳೆದ 39 ವರ್ಷಗಳಲ್ಲಿ ಟೀಂ ಇಂಡಿಯಾ ಇಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ.


ಮಾಂಚೆಸ್ಟರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಗೆದ್ದರೆ, ದಂತಕಥೆ ಕಪಿಲ್ ದೇವ್‌ಗೆ ಸಮಾನರಾಗುತ್ತಾರೆ. ಏಕೆಂದರೆ ಕಪಿಲ್ ದೇವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ತಂಡ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಅದು 22 ಜೂನ್ 1983 ರಲ್ಲಿ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮೊದಲ ಬಾರಿಗೆ ಆಡಿದಾಗ ಭಾರತವು ಈ ವಿಜಯವನ್ನು ಸಾಧಿಸಿತ್ತು. ಇದಾದ ನಂತರ ಭಾರತ ಇಲ್ಲಿ 1986, 1996 ಮತ್ತು 2007ರಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, ಪ್ರತಿ ಬಾರಿಯೂ ಸೋಲನ್ನು ಎದುರಿಸಿದೆ. 


ಇದನ್ನೂ ಓದಿ: ವಂಚನೆ ಪ್ರಕರಣ: ಸ್ಯಾಂಡಲ್ ವುಡ್ ಖ್ಯಾತ ನಟಿಯ ಸ್ನೇಹಿತ ಅರೆಸ್ಟ್‌


8 ವರ್ಷಗಳಿಂದ ಸರಣಿ ಗೆದ್ದಿಲ್ಲ: 
ಭಾರತ ಮತ್ತು ಇಂಗ್ಲೆಂಡ್ ನಡುವೆ 105 ಏಕದಿನ ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 55 ಪಂದ್ಯಗಳನ್ನು ಗೆದ್ದಿದೆ. ಅದರಲ್ಲಿ ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಭಾರತವು ಇಂಗ್ಲೆಂಡ್ ನೆಲದಲ್ಲಿ 10 ಏಕದಿನ ಸರಣಿಗಳನ್ನು ಆಡಿದ್ದು, ಅದರಲ್ಲಿ ಮೂರು ಮಾತ್ರ ಗೆದ್ದಿದೆ. 2014ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಏಕದಿನ ಸರಣಿಯನ್ನು 3-1ರಿಂದ ಗೆದ್ದುಕೊಂಡಿತ್ತು. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಓಲ್ಡ್ ಟ್ರಾಫಲ್ ಮೈದಾನದಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.