ಮಂಗಳೂರು: ಭಾರತೀಯ ಕ್ರಿಕೆಟ್ ತಂಡದ ಆಟಗಾರ, ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ-20 ವಿಶ್ವಕಪ್‌ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆ ಕುಟುಂಬದವರೊಂದಿಗೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: Virat Kohli: ಈ ಸ್ಟಾರ್ ಆಟಗಾರನಿಂದ ವಿರಾಟ್ ಕೊಹ್ಲಿಗೆ ಬೆದರಿಕೆ!
ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಕೆ.ಎಲ್.ರಾಹುಲ್ ಮಹಾಪೂಜೆಯಲ್ಲಿ ಭಾಗಿಯಾಗಿದ್ದರು. ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಕೆ.ಎಲ್.ರಾಹುಲ್ ವಿರುದ್ಧ ವ್ಯಾಪಕ ಟೀಕೆ
ಕಳಪೆ ಪ್ರದರ್ಶನ ಮುಂದುವರೆಸಿರುವ ಕೆ.ಎಲ್.ರಾಹುಲ್ರನ್ನು ತಂಡದಿಂದ ಕೈಬಿಡಬೇಕೆಂದು ಅನೇಕ ಮಾಜಿ ಕ್ರಿಕೆಟಿಗರು ಆಗ್ರಹಿಸಿದ್ದರು. ಟಿ-20 ವಿಶ್ವಕಪ್‍ನ ಮಹತ್ವದ ಪಂದ್ಯಗಳಲ್ಲಿಯೇ ಪದೇ ಪದೇ ರಾಹುಲ್ ವೈಫಲ್ಯ ಹೊಂದುವ ಮೂಲಕ ಅಭಿಮಾನಿಗಳಿಗೆ ದೊಡ್ಡ ನಿರಾಸೆ ಮೂಡಿಸಿದ್ದರು. ಆರಂಭಿಕ ಬ್ಯಾಟ್ಸ್ಮನ್ ಆಗಿ ಅವಕಾಶ ನೀಡಿದ್ರೂ ರಾಹುಲ್ ಕೆಲವು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದರು. ಹೀಗಾಗಿ ತಂಡದಿಂದ ಕೈಬಿಟ್ಟು ಬದಲಿ ಆಟಗಾರರಿಗೆ ಅವಕಾಶ ನೀಡುವಂತೆ ಬಿಸಿಸಿಐಗೆ ಒತ್ತಾಯಿಸಲಾಗಿತ್ತು.
ನಿರಂತರ ಕಳಪೆ ಪ್ರದರ್ಶನದಿಂದ ವ್ಯಾಪಕ ಟೀಕೆಗೆ ಗುರಿಯಾಗಿರುವ ರಾಹುಲ್ ಸದ್ಯ ಟೀಂ ಇಂಡಿಯಾದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಮೊದಲಿನ ಫಾರ್ಮ್‍ಗೆ ಮರಳುವ ಉದ್ದೇಶದಿಂದ ರಾಹುಲ್ ದೇವರ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಇದಲ್ಲದೆ ಬಾಲಿವುಡ್ ಖ್ಯಾತ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಜೊತೆಗೆ ರಾಹುಲ್ ಡೇಟಿಂಗ್ ಮಾಡುತ್ತಿದ್ದಾರೆ. ಶೀಘ್ರವೇ ಆಕೆಯ ಜೊತೆಗೆ ವಿವಾಹವಾಗುವ ಯೋಚನೆಯಲ್ಲಿದ್ದಾರಂತೆ. ಮದುವೆ ಉದ್ದೇಶದಿಂದಲೂ ರಾಹುಲ್ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Team India: ರೋಹಿತ್ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರವಿ ಶಾಸ್ತ್ರಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.