badrinath Made Sensational Comments on Indian Team Selection: ಜುಲೈ ಅಂತ್ಯದಲ್ಲಿ ಶ್ರೀಲಂಕಾ ವಿರುದ್ಧದ T20 ಮತ್ತು ODI ಸರಣಿಗೆ (IND vs SL) ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆ ಈ ತಂಡಗಳ ಘೋಷಣೆಯಲ್ಲಿ ಗೌತಮ್ ಗಂಭೀರ್ ಗುರುತು ಕಾಣಿಸಿಕೊಂಡಿದೆ. ಜೊತೆಗೆ ಅನೇಕ ಅನಿರೀಕ್ಷಿತ ಬದಲಾವಣೆಗಳು ಸಂಭವಿಸಿವೆ.


COMMERCIAL BREAK
SCROLL TO CONTINUE READING

ಎಲ್ಲರೂ ನಿರೀಕ್ಷಿಸಿದಂತೆ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅಲ್ಲ, ಶಾರ್ಟ್ ಫಾರ್ಮ್ಯಾಟ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ಸರಣಿಯಲ್ಲಿ ತಮ್ಮ ಶಕ್ತಿ ಪ್ರದರ್ಶಿಸಿದ ಯುವ ಗನ್‌ಗಳಾದ ಅಭಿಷೇಕ್ ಶರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಬದಿಗೊತ್ತಲಾಗಿದೆ.


ಇದನ್ನೂ ಓದಿ-ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಹೊರಬಿತ್ತು ಬಿಗ್‌ ಅಪ್ಡೇಟ್‌: ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ ಆಗಿ ಈ ದಿಗ್ಗಜ ನೇಮಕ!


ಇದರೊಂದಿಗೆ... ಟೀಂ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಪಯಣ ಟೀಕೆಗಳಿಂದಲೇ ಆರಂಭವಾಗಿದೆ ಎಂದೇ ಹೇಳಲಾಗುತ್ತಿದೆ.. ಶ್ರೀಲಂಕಾ ತಂಡದ ಆಯ್ಕೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ಇದೀಗ ಪ್ರಶ್ನಿಸುತ್ತಿದ್ದಾರೆ. ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ನಾಯಕನನ್ನಾಗಿ ಮಾಡುವುದರಿಂದ ಹಿಡಿದು ಉದಯೋನ್ಮುಖ ತಾರೆ ಅಭಿಷೇಕ್ ಶರ್ಮಾ ಅವರನ್ನು ಕೈಬಿಡುವವರೆಗೆ ಎಲ್ಲವನ್ನೂ ಪ್ರಶ್ನಿಸಲಾಗುತ್ತಿದೆ.. 


ಇದನ್ನೂ ಓದಿ-ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ಬಾರಿ ಇಂಥಾ ವಿಶೇಷ ದಾಖಲೆ ಬರೆದ ಟೀಂ ಇಂಡಿಯಾ ವನಿತಾ ಪಡೆ! ಅಷ್ಟಕ್ಕೂ ಏನದು?


ಆದರೆ ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮಾಡಿರುವ ಕಾಮೆಂಟ್‌ಗಳು ಇದೀಗ ಸಂಚಲನ ಮೂಡಿಸುತ್ತಿವೆ. ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಬೇಕಾದರೆ ಬಾಲಿವುಡ್ ಹೀರೋಯಿನ್ ಗಳ ಜೊತೆ ಅಫೇರ್ ಇಟ್ಟುಕೊಳ್ಳಬೇಕು ಎಂದು ಕಟುವಾದ ಕಾಮೆಂಟ್ ಗಳನ್ನು ಮಾಡಿದ್ದರು. ಲಂಕಾ ಪ್ರವಾಸಕ್ಕಾಗಿ ಘೋಷಿಸಲಾದ ಟಿ20 ಮತ್ತು ಏಕದಿನ ತಂಡಗಳಲ್ಲಿ ಸ್ಥಾನ ಪಡೆಯದಿದ್ದಕ್ಕಾಗಿ ಭಾರತದ ಮಾಜಿ ಕ್ರಿಕೆಟಿಗ ಬದ್ರಿನಾಥ್ ಟೀಕಿಸಿ ಮಾತನಾಡಿದ್ದಾರೆ..  ಬದ್ರಿನಾಥ್ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದು ಗೊತ್ತೇ ಇದೆ. ಅಲ್ಲದೆ ಧೋನಿಗೆ ಅವರು ತುಂಬಾ ಆಪ್ತರು.


ಜಿಂಬಾಬ್ವೆ ಪ್ರವಾಸದಲ್ಲಿ ರುತುರಾಜ್ ಸೂಪರ್ ಫಾರ್ಮ್‌ನಲ್ಲಿದ್ದಾರೆ. ಎರಡು ಪಂದ್ಯಗಳಲ್ಲಿ 77 ಮತ್ತು 49 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಯುವ ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಬಿಸಿಸಿಐ ಆಯ್ಕೆ ಹಾಗೂ ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಈ ಪ್ರತಿಭೆ ಇರುವ ಆಟಗಾರರಿಗೆ ಸ್ಥಾನ ನೀಡದಿರುವ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.