Ind vs WI Series: ಜುಲೈ 12ರಿಂದ ಆರಂಭವಾಗಬೇಕಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ಶುಕ್ರವಾರ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕತ್ವವನ್ನು ಆರಂಭಿಕ ಆಟಗಾರ ರೋಹಿತ್ ಶರ್ಮಾಗೆ ಹಸ್ತಾಂತರಿಸಲಾಗಿದ್ದು, ಉಪನಾಯಕ ಜವಾಬ್ದಾರಿಯನ್ನು ತಂಡದ ಅನುಭವಿ ಆಟಗಾರ ಅಜಿಂಕ್ಯ ರಹಾನೆಗೆ ನೀಡಲಾಗಿದೆ.


COMMERCIAL BREAK
SCROLL TO CONTINUE READING

ರಹಾನೆಗೆ ಸಿಕ್ತು ಉಡುಗೊರೆ
ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆಗೆ ಕೊಡುಗೆ ನೀಡಲಾಗಿದೆ ಎಂದರೆ ಇಲ್ಲಿ ತಪ್ಪಾಗಲಾರದು. ಏಕೆಂದರೆ ಇತ್ತೀಚೆಗಷ್ಟೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC Final-2023) ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಹಾನೆ ಇದೀಗ ಟೆಸ್ಟ್ ತಂಡದ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ. ಇಶಾನ್ ಕಿಶನ್ ಎರಡೂ ಮಾದರಿಗಳಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಅವರೊಂದಿಗೆ ಟೆಸ್ಟ್‌ನಲ್ಲಿ ಕೆಎಸ್ ಭರತ್ ಮತ್ತು ಏಕದಿನದಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಪಡೆದಿದ್ದಾರೆ.


ಪೂಜಾರಾಗೆ ಕೊಕ್ 
ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅವರ ಹೆಸರನ್ನು ತಂಡದಿಂದ ಹೊರಗಿಡಲಾಗಿದೆ. ಪೂಜಾರ ಇತ್ತೀಚೆಗೆ WTC ಫೈನಲ್‌ಗೆ ಆಯ್ಕೆಯಾದ ತಂಡದ ಭಾಗವಾಗಿದ್ದರು ಆದರೆ ಅವರ ಪ್ರದರ್ಶನವು ತುಂಬಾ ಕಳಪೆಮಟ್ಟದ್ದಾಗಿತ್ತು. ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 41 (27 ಮತ್ತು 14) ರನ್ ಅವರು ಗಳಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಬಿಸಿಸಿಐ ಅವರನ್ನು ತಂಡದಿಂದ ಹೊರಗಿಟ್ಟು ಯಶಸ್ವಿ ಜೈಸ್ವಾಲ್, ರಿತುರಾಜ್ ಗಾಯಕ್ವಾಡ್ ಅವರಂತಹ ಯುವ ಆಟಗಾರರಿಗೆ ಅವಕಾಶ ನೀಡಿದೆ.


ಇದನ್ನೂ ಓದಿ-Mohan Bhagwat: ಎಲ್ಲಿಯವರೆಗೆ ಭಾರತದಲ್ಲಿ ಹಿಂದೂ-ಮುಸ್ಲಿಂ ಐಕ್ಯತೆ ಇದೆಯೋ ಅಲ್ಲಿಯವರೆಗೆ....!


ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನ್ನಡ್ಕಟ್  ಮತ್ತು ನವದೀಪ್ ಸೈನಿ.


ಇದನ್ನೂ ಓದಿ-Petrol-Diesel Price: 4 ರಿಂದ 5 ರೂ. ಅಗ್ಗವಾಗಲಿದೆ ಪೆಟ್ರೋಲ್ ಡೀಸೆಲ್!ತೈಲ ಕಂಪನಿಗಳಿಂದ ಘೋಷಣೆ ಯಾವಾಗ?


ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನ್ನಡ್ಕಟ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಮುಖೇಶ್ ಕುಮಾರ್.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.