India vs England 3rd Test: ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಇಂಗ್ಲೆಂಡ್ ಗೆದ್ದುಕೊಂಡಿದ್ದರೆ, ಎರಡನೇ ಪಂದ್ಯವನ್ನು ಭಾರತ ತಂಡ ಗೆದ್ದುಕೊಂಡಿತ್ತು. ಇದೀಗ ಎರಡೂ ತಂಡಗಳು ಸರಣಿಯಲ್ಲಿ 1-1ರಲ್ಲಿ ಸಮಬಲ ಸಾಧಿಸಿವೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಇದೀಗ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು, ಕೊಹ್ಲಿ ಕಂಬ್ಯಾಕ್ ಮಾಡಲು ಫ್ಯಾನ್ಸ್ ಕಾಯುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ! ಕೊಹ್ಲಿ ಸೇರಿ ಮೂವರು ಪ್ರಮುಖ ಆಟಗಾರರೇ ಇಲ್ಲ!


ಅಂದಹಾಗೆ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರಾಟ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಸಾಕಷ್ಟು ಮಿಸ್ ಮಾಡಿಕೊಂಡಿದ್ದರು. ಹೈದರಾಬಾದ್ ಟೆಸ್ಟ್ ನಲ್ಲಿ ಹಲವು ಪ್ರೇಕ್ಷಕರು ವಿರಾಟ್ ಕೊಹ್ಲಿ ಹೆಸರಿನ ಜೆರ್ಸಿ ಧರಿಸಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದರು.


ಇದನ್ನೂ ಓದಿ: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ?


ವಿಶಾಖಪಟ್ಟಣಂ ಟೆಸ್ಟ್ ಪಂದ್ಯದ ಗೆಲುವಿನ ನಂತರ, ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಕಂಬ್ಯಾಕ್ ಕುರಿತು ಮಾತನಾಡಿದ್ದಾರೆ. “ಮುಂದಿನ ದಿನಗಳಲ್ಲಿ ಆಯ್ಕೆದಾರರು ತಂಡವನ್ನು ಪ್ರಕಟಿಸಲಿದ್ದಾರೆ. ಇದಲ್ಲದೇ ಕೊಹ್ಲಿಯನ್ನು ಸಂಪರ್ಕಿಸಿ ಅವರ ಸ್ಥಿತಿಯನ್ನು ತಿಳಿದುಕೊಳ್ಳಲಿದ್ದಾರೆ” ಎಂದಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ