IND vs NZ 2nd ODI: ಸರಣಿ ಕೈತಪ್ಪುವ ಭೀತಿಯಲ್ಲಿ ಟೀಂ ಇಂಡಿಯಾ: 2ನೇ ಪಂದ್ಯಕ್ಕೆ ಎದುರಾಯ್ತು ಈ ಸಮಸ್ಯೆ

IND vs NZ 2nd ODI: ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳ ಪೈಕಿ 2 ಪಂದ್ಯ ಮಳೆಗೆ ಕೊಚ್ಚಿ ಹೋಗಿದೆ. ಇದೇ ವೇಳೆ ಭಾನುವಾರ (ನವೆಂಬರ್ 27) ನಡೆಯಲಿರುವ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ.

Written by - Bhavishya Shetty | Last Updated : Nov 26, 2022, 12:59 PM IST
    • ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ
    • ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ
    • ಎರಡನೇ ಪಂದ್ಯದ ವೇಳೆಗೆ ಶೇ 100ರಷ್ಟು ಮಳೆಯಾಗುವ ಸಾಧ್ಯತೆ
IND vs NZ 2nd ODI: ಸರಣಿ ಕೈತಪ್ಪುವ ಭೀತಿಯಲ್ಲಿ ಟೀಂ ಇಂಡಿಯಾ: 2ನೇ ಪಂದ್ಯಕ್ಕೆ ಎದುರಾಯ್ತು ಈ ಸಮಸ್ಯೆ title=
Team India

IND vs NZ 2nd ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ (ನವೆಂಬರ್ 27) ಹ್ಯಾಮಿಲ್ಟನ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಸದ್ಯ ಸರಣಿಯಲ್ಲಿ 0-1 ಹಿನ್ನಡೆಯಲ್ಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಮುಂದಿನ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಎರಡನೇ ಏಕದಿನ ಪಂದ್ಯಕ್ಕೂ ಮುನ್ನವೇ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದ್ದು, ನ್ಯೂಜಿಲೆಂಡ್‌ನಲ್ಲಿ ಸರಣಿ ಗೆಲ್ಲುವ ಕನಸಿಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ: FIFA WC 2022: ಅರ್ಜೆಂಟೀನಾ ವಿರುದ್ಧ ಗೆದ್ದ ಸೌದಿ ಅರೇಬಿಯಾದ ಪ್ರತಿಯೊಬ್ಬ ಆಟಗಾರರಿಗೆ ರೋಲ್ಸ್ ರಾಯ್ಸ್ ಗಿಫ್ಟ್!

ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳ ಪೈಕಿ 2 ಪಂದ್ಯ ಮಳೆಗೆ ಕೊಚ್ಚಿ ಹೋಗಿದೆ. ಇದೇ ವೇಳೆ ಭಾನುವಾರ (ನವೆಂಬರ್ 27) ನಡೆಯಲಿರುವ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಪ್ರಕಾರ, ಭಾನುವಾರ ಹ್ಯಾಮಿಲ್ಟನ್‌ನಲ್ಲಿ ನಡೆಯುವ ಪಂದ್ಯದ ವೇಳೆಗೆ ಶೇ 100ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ನ್ಯೂಜಿಲೆಂಡ್ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಮತ್ತು ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 7 ಗಂಟೆಗೆ ನಡೆಯಲಿದೆ.

ಟೀಂ ಇಂಡಿಯಾ ಏಕದಿನ ಸರಣಿಯನ್ನು ವಶಪಡಿಸಿಕೊಳ್ಳಬೇಕಾದರೆ ಈ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. ಒಂದು ವೇಳೆ ಈ ಪಂದ್ಯ ಮಳೆಯಿಂದ ರದ್ದಾದರೆ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ ಸರಣಿ ಡ್ರಾ ಮಾಡಿಕೊಳ್ಳಲು ಮಾತ್ರ ಆಡಲಿದೆ., ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ಟೀಂ ಇಂಡಿಯಾಗೆ ಮಹತ್ವದ್ದಾಗಿದೆ. ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.

ಏಕದಿನ ಸರಣಿಗೆ ಟೀಂ ಇಂಡಿಯಾ

ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್.

ಇದನ್ನೂ ಓದಿ: IND vs NZ ODI: ಟಿ20ಯಲ್ಲಿ ಸ್ಟಾರ್-ODIನಲ್ಲಿ ವಿಲನ್: ಈ ಆಟಗಾರನಿಂದ ಕೀವಿಸ್ ವಿರುದ್ಧ ಸೋಲುಂಡ ಭಾರತ!

ನ್ಯೂಜಿಲೆಂಡ್ ತಂಡ:

ಫಿನ್ ಅಲೆನ್, ಡೆವೊನ್ ಕಾನ್ವೇ (ವಾಕ್), ಕೇನ್ ವಿಲಿಯಮ್ಸನ್ (ಸಿ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News