Suresh Raina cousin death: ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಅವರ ಸೋದರ ಸಂಬಂಧಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಪಠಾಣ್‌ಕೋಟ್ ಮಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹಾಲಿನಲ್ಲಿ ಈ ಪುಡಿ ಬೆರೆಸಿ ಕುಡಿಯಿರಿ: ದೇಹಕ್ಕೆ ಸಿಗುತ್ತೆ ಈ 6 ಪ್ರಯೋಜನಗಳು


ಹಿಮಾಚಲದ ಟಿಂಬರ್ ಬಳಿ ವೇಗವಾಗಿ ಬಂದ ಟ್ಯಾಕ್ಸಿ ಚಾಲಕ ಸ್ಕೂಟರ್‌’ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಒಟ್ಟು ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಅವರಲ್ಲಿ ಒಬ್ಬರು ಸುರೇಶ್ ರೈನಾ ಅವರ ತಾಯಿಯ ಚಿಕ್ಕಪ್ಪನ ಮಗ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪರಾರಿಯಾಗಿದ್ದ ಟ್ಯಾಕ್ಸಿ ಚಾಲಕನನ್ನು ಬಂಧಿಸಿದ್ದಾರೆ.


ಕಾಂಗ್ರಾ ಪೊಲೀಸರಿಗೆ ದೊರೆತ ಮಾಹಿತಿಯ ಪ್ರಕಾರ ವೇಗವಾಗಿ ಬಂದ ಆಟೋ ಚಾಲಕನೊಬ್ಬ ಸ್ಕೂಟರ್‌’ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಟ್ಯಾಕ್ಸಿ ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಪರಾರಿಯಾಗಿದ್ದ ಟ್ಯಾಕ್ಸಿ ಚಾಲಕನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಇದೀಗ ಪೊಲೀಸರು ಅಪಘಾತದ ತನಿಖೆ ಆರಂಭಿಸಿದ್ದಾರೆ.


ಇದನ್ನೂ ಓದಿ: ಮುಂಬೈ ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ನೋವು ವ್ಯಕ್ತಪಡಿಸಿದ ರೋಹಿತ್ ಶರ್ಮಾ


ಘಟನೆಯ ಬಗ್ಗೆ ಎಸ್ಪಿ ಕಂಗ್ರಾ ಶಾಲಿನಿ ಅಗ್ರಿಹೋತ್ರಿ ಮಾಹಿತಿ ನೀಡಿದ್ದು, “ಗಗ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಹಿಟ್ ಅಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಗಗ್ಗಲ್ ನಿವಾಸಿ ಸೌರಭ್ ಮತ್ತು ಬಾನೋಯಿ ನಿವಾಸಿ ಶುಭಂ ಎಂದು ಗುರುತಿಸಲಾಗಿದೆ. ಈ ಯುವಕರಿಗೆ ಡಿಕ್ಕಿ ಹೊಡೆದು ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಾರಿಯಾಗಿದ್ದ ಚಾಲಕನನ್ನು ಬೆನ್ನಟ್ಟಿದ್ದು, ಮಂಡಿಯಿಂದ ವಶಕ್ಕೆ ಪಡೆದು ಈಗ ಕಾಂಗ್ರಾಕ್ಕೆ ಕರೆತರಲಾಗುತ್ತಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲಾಗುತ್ತಿದೆ” ಎಂದಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.