ನವದೆಹಲಿ: ದೀರ್ಘಕಾಲದಿಂದಲೂ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರ ಕಾಲದ ದಿಗ್ಗಜ ಬ್ಯಾಟ್ಸ್ ಮನ್ ಅಂಶುಮಾನ್ ಗಾಯಕ್ವಾಡ್ ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅಂಶುಮಾನ್ ಅವರಿಗೆ 71 ವರ್ಷ ವಯಸ್ಸಾಗಿತ್ತು.


COMMERCIAL BREAK
SCROLL TO CONTINUE READING

ಅಂಶುಮಾನ್ ಸುಮಾರು 12 ವರ್ಷಗಳ ಕಾಲ ತನ್ನ ವೃತ್ತಿಜೀವನದಲ್ಲಿ 40 ಟೆಸ್ಟ್ ಪಂದ್ಯಗಳು ಮತ್ತು 15 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.ಅವರು ಆಡಿದ 40 ಟೆಸ್ಟ್ ಪಂದ್ಯಗಳಲ್ಲಿ, ಗಾಯಕ್ವಾಡ್ 2 ಶತಕ ಮತ್ತು 10 ಅರ್ಧ ಶತಕಗಳೊಂದಿಗೆ 30.07 ರ ಸರಾಸರಿಯಲ್ಲಿ 1985 ರನ್ ಗಳಿಸಿದರು. ಅದೇ ಸಮಯದಲ್ಲಿ, 15 ಏಕದಿನ ಪಂದ್ಯಗಳಲ್ಲಿ, ಗಾಯಕ್ವಾಡ್ 20.69 ಸರಾಸರಿಯಲ್ಲಿ 269 ರನ್ ಗಳಿಸಿದ್ದರು. 1983 ರಲ್ಲಿ ಪಾಕಿಸ್ತಾನದ ವಿರುದ್ಧ 201 ರನ್‌ಗಳ ಇನ್ನಿಂಗ್ಸ್‌ಗಾಗಿ ಅಂಶುಮಾನ್ ಅವರನ್ನು ಹಳೆಯ ಕಾಲದ ಕ್ರಿಕೆಟ್ ಪ್ರೇಮಿಗಳು ಇಂದಿಗೂ ನೆನಪಿಸಿಕೊಳ್ಳುತ್ತಾರೆ.


ಗಾಯಕ್ವಾಡ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ 'ಗಾಯಕ್ವಾಡ್ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಗಾಗಿ ಸ್ಮರಣೀಯರಾಗಿದ್ದಾರೆ. ಅವರು ಸಹಜ ಬ್ಯಾಟ್ಸ್‌ಮನ್ ಮತ್ತು ಅಸಾಧಾರಣ ಕೋಚ್ ಆಗಿದ್ದರು. ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ ಮತ್ತು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ." ಎಂದು ಅವರು ಕಂಬನಿ ಮಿಡಿದಿದ್ದಾರೆ.


ಇದನ್ನೂ ಓದಿ: ಭದ್ರಾವತಿಯಲ್ಲಿ ಭದ್ರೆಯ ರೌದ್ರಾವತಾರ : ಪ್ರವಾಹ ಸೃಷ್ಟಿ, ಮನೆಗಳಿಗೆ ನುಗ್ಗಿದ ನೀರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.