IND vs NZ: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಹೀನಾಯ ಸೋಲು..!36 ವರ್ಷಗಳಲ್ಲಿ ಮೊದಲ ಬಾರಿಗೆ ಗೆಲವು ಸಾಧಿಸಿ ಇತಿಹಾಸ ಸೃಷ್ಟಿಸಿದ ಎದುರಾಳಿ ತಂಡ

IND vs NZ: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಸೋಲಿನೊಂದಿಗೆ ಆರಂಭಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಕೊನೆಗೊಂಡ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಆತಿಥೇಯ ಭಾರತವನ್ನು 8 ವಿಕೆಟ್ ಗಳಿಂದ ಸೋಲಿಸಿತು. ಪವಾಡ ಮಾಡುತ್ತೇನೆ ಎಂದುಕೊಂಡ ಭಾರತದ ಸ್ಪಿನ್ನರ್‌ಗಳು ಕೈ ಚಿಲ್ಲುವ ಮೂಲಕ ಪಂದ್ಯವನ್ನು ಸೋಲಿನತ್ತಾ ಕೊಂಡಯ್ದರು. ಸುಮಾರು 36 ವರ್ಷಗಳ ನಂತರ ನ್ಯೂಜಿಲೆಂಡ್ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿದೆ. 1988ರಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ಟೆಸ್ಟ್ ಗೆದ್ದಿತ್ತು.  

Written by - Zee Kannada News Desk | Last Updated : Oct 20, 2024, 01:38 PM IST
  • ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಸೋಲಿನೊಂದಿಗೆ ಆರಂಭಿಸಿದೆ.
  • ಸುಮಾರು 36 ವರ್ಷಗಳ ನಂತರ ನ್ಯೂಜಿಲೆಂಡ್ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿದೆ.
  • 1988ರಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ಟೆಸ್ಟ್ ಗೆದ್ದಿತ್ತು.
 IND vs NZ: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಹೀನಾಯ ಸೋಲು..!36 ವರ್ಷಗಳಲ್ಲಿ ಮೊದಲ ಬಾರಿಗೆ ಗೆಲವು ಸಾಧಿಸಿ ಇತಿಹಾಸ ಸೃಷ್ಟಿಸಿದ ಎದುರಾಳಿ ತಂಡ title=

IND vs NZ: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಸೋಲಿನೊಂದಿಗೆ ಆರಂಭಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಕೊನೆಗೊಂಡ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಆತಿಥೇಯ ಭಾರತವನ್ನು 8 ವಿಕೆಟ್ ಗಳಿಂದ ಸೋಲಿಸಿತು. ಪವಾಡ ಮಾಡುತ್ತೇನೆ ಎಂದುಕೊಂಡ ಭಾರತದ ಸ್ಪಿನ್ನರ್‌ಗಳು ಕೈ ಚಿಲ್ಲುವ ಮೂಲಕ ಪಂದ್ಯವನ್ನು ಸೋಲಿನತ್ತಾ ಕೊಂಡಯ್ದರು. ಸುಮಾರು 36 ವರ್ಷಗಳ ನಂತರ ನ್ಯೂಜಿಲೆಂಡ್ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿದೆ. 1988ರಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ಟೆಸ್ಟ್ ಗೆದ್ದಿತ್ತು.

108 ರನ್‌ಗಳ ಸಣ್ಣ ಗುರಿಯೊಂದಿಗೆ ಎರಡನೇ ಇನಿಂಗ್ಸ್‌ಗೆ ಇಳಿದ ನ್ಯೂಜಿಲೆಂಡ್ 27.4 ಓವರ್‌ಗಳಲ್ಲಿ 2 ವಿಕೆಟ್‌ಗೆ 110 ರನ್ ಗಳಿಸಿ ನಿರಾಯಾಸವಾಗಿ ಗೆದ್ದಿತು. ವಿಲ್ ಯಂಗ್ (76 ಎಸೆತಗಳಲ್ಲಿ 7 ಬೌಂಡರಿ, ಸಿಕ್ಸರ್ ಸಹಿತ 48) ಮತ್ತು ರಚಿನ್ ರವೀಂದ್ರ (46 ಎಸೆತಗಳಲ್ಲಿ 6 ಬೌಂಡರಿ ಸಹಿತ ಔಟಾಗದೆ 39) ನ್ಯೂಜಿಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

2 ವಿಕೆಟ್ ಪಡೆದ ಭಾರತದ ಏಕೈಕ ಬೌಲರ್ ಎಂದರೆ ಬುಮ್ರಾ . ಈ ಸೋಲಿನೊಂದಿಗೆ ಸರ್ಫರಾಜ್ ಖಾನ್ ಮತ್ತು ರಿಷಬ್ ಪಂತ್ ಹೋರಾಟ ವ್ಯರ್ಥವಾಯಿತು. ಮೂರು ಟೆಸ್ಟ್‌ಗಳ ಸರಣಿಯಲ್ಲಿ ನ್ಯೂಜಿಲೆಂಡ್ 1-0 ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಅಕ್ಟೋಬರ್ 24 ರಿಂದ ಪುಣೆಯಲ್ಲಿ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 46 ರನ್ ಗಳಿಗೆ ಕುಸಿದಿತ್ತು. ಬಳಿಕ ನ್ಯೂಜಿಲೆಂಡ್ 402 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ರಚಿನ್ ರವೀಂದ್ರ (134) ಡೆವೊನ್ ಕಾನ್ವೆ (91) ಮತ್ತು ಟಿಮ್ ಸೌಥಿ (65) ಅರ್ಧ ಶತಕ ಬಾರಿಸಿದರು. ಭಾರತದ ಬೌಲರ್‌ಗಳಲ್ಲಿ ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಎರಡು ವಿಕೆಟ್ ಪಡೆದರು. ಬುಮ್ರಾ ಒಂದು ವಿಕೆಟ್ ಪಡೆದರು.

356 ರನ್ ಗಳ ಬೃಹತ್ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ 462 ರನ್ ಗಳ ಬೃಹತ್ ಸ್ಕೋರ್ ಗಳಿಸಿದ ಸರ್ಫರಾಜ್ ಮತ್ತು ಪಂತ್ ಹೋರಾಟ ವ್ಯರ್ಥವಾಯಿತು . ಸರ್ಫರಾಜ್ ಖಾನ್ (150) ಶತಕ ಸಿಡಿಸಿದ್ದರು.. ರಿಷಬ್ ಪಂತ್ (99) ಸ್ವಲ್ಪದರಲ್ಲೇ ಶತಕ ವಂಚಿತರಾದರು. ವಿರಾಟ್ ಕೊಹ್ಲಿ (70) ಮತ್ತು ರೋಹಿತ್ ಶರ್ಮಾ (52) ಅರ್ಧಶತಕಗಳೊಂದಿಗೆ ಮಿಂಚಿದರು. ನ್ಯೂಜಿಲೆಂಡ್ ಬೌಲರ್‌ಗಳ ಪೈಕಿ ಮ್ಯಾಟ್ ಹೆನ್ರಿ ಮತ್ತು ವಿಲಿಯಂ ಓ'ರೂರ್ಕ್ ಎರಡು ವಿಕೆಟ್ ಪಡೆದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡರು.. ಹೆಚ್ಚುವರಿ ಸ್ಪಿನ್ನರ್‌ನೊಂದಿಗೆ ಕಣಕ್ಕೆ ಇಳಿದು.. ಮೊದಲ ಇನಿಂಗ್ಸ್‌ನಲ್ಲಿ 46 ರನ್‌ಗಳನ್ನು ಬಿಟ್ಟುಕೊಟ್ಟರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News