India vs New Zealand 3rd ODI: ಭಾರತ ತಂಡ ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ. ಇದೀಗ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಬಯಸುತ್ತದೆ. ಭಾರತ ತಂಡದ ಕೆಲವು ಆಟಗಾರರು ಉಜ್ಜಯಿನಿಯ ಮಹಾಕಾಳ ದೇವಸ್ಥಾನದಲ್ಲಿ ಬೆಳಗ್ಗೆ ಭಸ್ಮಾರ್ಥಿಯಲ್ಲಿ ಪಾಲ್ಗೊಂಡರು. ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಅವರಲ್ಲದೆ, ಸಹಾಯಕ ಸಿಬ್ಬಂದಿಯ ಕೆಲವು ಸದಸ್ಯರು ಪೂಜೆಯಲ್ಲಿ ಭಾಗವಹಿಸಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs NZ: ಅಂತಿಮ ಪಂದ್ಯದಲ್ಲಿ ಈ ಆಟಗಾರನಿಗೆ ಸಿಗುತ್ತಾ ಚಾನ್ಸ್? ಡ್ಯಾಶಿಂಗ್ ಕ್ರಿಕೆಟರ್ ಕಂಡರೆ ಎದುರಾಳಿಗಳು ನಡುಗೋದು ಗ್ಯಾರಂಟಿ


3ನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತದ ಆಟಗಾರರು ಉಜ್ಜಯಿನಿಯ ದೇವಸ್ಥಾನದಲ್ಲಿ ಭಸ್ಮಾರ್ಥದಲ್ಲಿ ಪಾಲ್ಗೊಂಡಿದ್ದರು. ಟೀಂ ಇಂಡಿಯಾದ ಆಟಗಾರರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಾಮಾನ್ಯ ಜನರ ನಡುವೆ ಕುಳಿತು ಭಸ್ಮಾರ್ಥಿಯನ್ನು ವೀಕ್ಷಿಸಿದರು. ಈ ವೇಳೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಶಿವಭಕ್ತಿಯಲ್ಲಿ ಮಗ್ನರಾಗಿದ್ದರು.


ಭಾರತ ತಂಡದ ಸೂಪರ್‌ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್, “ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸಿದ್ದೇವೆ. ಅವರ ಮರಳುವಿಕೆ ನಮಗೆ ಬಹಳ ಮುಖ್ಯವಾಗಿದೆ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ. ಮಹಾಕಾಳೇಶ್ವರ ದೇಗುಲಕ್ಕೆ ಬಂದಿರುವುದು ತುಂಬಾ ಸಂತಸ ತಂದಿದೆ” ಎಂದು ಹೇಳಿದ್ದಾರೆ.  


ಡಿಸೆಂಬರ್ 30, 2022 ರಂದು, ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ತೆರಳುತ್ತಿದ್ದಾಗ ಅಪಘಾತಕ್ಕೊಳಗಾದರು. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ 6 ರಿಂದ 8 ತಿಂಗಳ ಕಾಲ ರೆಸ್ಟ್ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ.


ಇದನ್ನೂ ಓದಿ: Team India: ದಾಖಲೆ ಬಾನೆತ್ತರವಿದ್ದರೂ ಟೀಂ ಇಂಡಿಯಾದಲ್ಲಿ ನಿರ್ಲಕ್ಷ್ಯ: ಈ ಆಟಗಾರನಿಗೆ ಎಂದು ಸಿಗುವುದು ಅವಕಾಶ?


ಮತ್ತೊಂದೆಡೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನೂ ಅದ್ಧೂರಿಯಾಗಿ ಗೆದ್ದುಕೊಂಡಿದೆ. ODI ವಿಶ್ವಕಪ್ 2023 ಭಾರತದಲ್ಲಿ ಆಯೋಜಿಸಲಾಗಿದ್ದು, ಇದಕ್ಕಾಗಿ ಭಾರತ ತಂಡ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ಭಾರತ 1983ರಲ್ಲಿ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.