2ನೇ ಟೆಸ್ಟ್’ಗೆ ಟೀಂ ಇಂಡಿಯಾ Playing 11 ರೆಡಿ: ಮೊದಲ ಪಂದ್ಯದ ಗೆಲುವಿಗೆ ಕಾರಣವಾದವ ಔಟ್.. ಈ ಆಟಗಾರ ಇನ್!
IND vs WI 2nd Test Playing 11: ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಹೊರತಾಗಿಯೂ ನಾಯಕ ರೋಹಿತ್ ಶರ್ಮಾ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಎಲ್ಲಾ ಸಾಧ್ಯತೆಗಳಿವೆ.
IND vs WI 2nd Test Playing 11: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್‌ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಎರಡನೇ ಟೆಸ್ಟ್ ಪಂದ್ಯ ಜುಲೈ 20 ಗುರುವಾರ ಟ್ರಿನಿಡಾಡ್ ನಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ನಡೆಯಲಿದೆ.
ಇದನ್ನೂ ಓದಿ: “ನಮ್ಮ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಲಾಯಿತು...” IND vs WI ಸರಣಿ ಮಧ್ಯೆ ಈ ಅನುಭವಿಯ ಶಾಕಿಂಗ್ ಹೇಳಿಕೆ
ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಹೊರತಾಗಿಯೂ ನಾಯಕ ರೋಹಿತ್ ಶರ್ಮಾ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಎಲ್ಲಾ ಸಾಧ್ಯತೆಗಳಿವೆ. ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿದೆ ನೋಡೋಣ.
ಆರಂಭಿಕ ಜೋಡಿ:
ಟ್ರಿನಿಡಾಡ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ತಮ್ಮ ವೇಗದ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾಕ್ಕೆ ಆಕ್ರಮಣಕಾರಿ ಆರಂಭವನ್ನು ನೀಡಬಲ್ಲರು. ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 171 ರನ್ ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದು, ಎರಡನೇ ಟೆಸ್ಟ್‌ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಸಾಮಾರ್ಥ್ಯ ಅವರಿಗಿದೆ.
ಮಧ್ಯಮ ಕ್ರಮಾಂಕ:
ಟ್ರಿನಿಡಾಡ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಇಳಿಯಲಿದ್ದಾರೆ. ಉಪನಾಯಕ ಅಜಿಂಕ್ಯ ರಹಾನೆ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
ವಿಕೆಟ್ ಕೀಪರ್:
ಟ್ರಿನಿಡಾಡ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 6ನೇ ಕ್ರಮಾಂಕದಲ್ಲಿ ಅವಕಾಶ ಪಡೆಯಲಿದ್ದಾರೆ. ಟ್ರಿನಿಡಾಡ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ 7 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬರಲಿದ್ದು, ಅವರು ಬಾಲ್ ಮತ್ತು ಬ್ಯಾಟ್‌ನಿಂದ ಟೀಮ್ ಇಂಡಿಯಾವನ್ನು ಬಲಪಡಿಸಲಿದ್ದಾರೆ.
ಸ್ಪಿನ್ನರ್:
ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಗೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾ ಟೆಸ್ಟ್ ಪಂದ್ಯದಲ್ಲಿ 12 ವಿಕೆಟ್ ಕಬಳಿಸಿದ್ದರು. ಎರಡನೇ ಟೆಸ್ಟ್ ಪಂದ್ಯದಲ್ಲೂ, ಈ ಆಫ್ ಸ್ಪಿನ್ನರ್ ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್‌ಗಳಿಗೆ ಸಿಂಹಸ್ವಪ್ನವಾಗುವುದು ಖಚಿತ. ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಮಾರಕ ಸ್ಪಿನ್ ಬೌಲಿಂಗ್ ಮತ್ತು ಸ್ಫೋಟಕ ಬ್ಯಾಟಿಂಗ್ ನಲ್ಲಿ ಪರಿಣತಿ ಹೊಂದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ವೇಗದ ಬೌಲರ್ ಗಳಾಗಿ ಸ್ಥಾನ ಪಡೆಯಲಿದ್ದಾರೆ. ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ಪ್ಲೇಯಿಂಗ್ 11 ನಿಂದ ಕೈ ಬಿಟ್ಟು, ಬದಲಿಗೆ ಅಕ್ಷರ್ ಪಟೇಲ್ ಅವರಿಗೆ ಮಣೆ ಹಾಕಬಹುದು. ಟ್ರಿನಿಡಾಡ್‌ನ ಪಿಚ್ ಸ್ಪಿನ್ ಬೌಲರ್‌ಗಳಿಗೆ ನೆರವಾಗಲಿದೆ. ಇದೇ ಕಾರಣಕ್ಕೆ ಮೂವರು ಸ್ಪಿನ್ನರ್‌ಗಳಾದ ಅಶ್ವಿನ್, ಜಡೇಜಾ ಮತ್ತು ಅಕ್ಷರ್ ಒಟ್ಟಾಗಿ ಕಣಕ್ಕಿಳಿಯಬಹುದು.
ಟ್ರಿನಿಡಾಡ್ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್’ಗೆ ಭಾರತದ ಸಂಭಾವ್ಯ ಆಟಗಾರರ XI:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಅಕ್ಷರ್ ಪಟೇಲ್
ಇದನ್ನೂ ಓದಿ: “RCBಗಾಗಿ 8 ವರ್ಷ ಆಡಿದೆ, ಆದ್ರೆ ಹೊರಹಾಕುವಾಗ ಒಂದು ಫೋನ್ ಕೂಡ ಮಾಡಿಲ್ಲ”: ಸ್ಟಾರ್ ಸ್ಪಿನ್ನರ್ ಬೇಸರ
ಭಾರತ vs ವೆಸ್ಟ್ ಇಂಡೀಸ್ 2ನೇ ಟೆಸ್ಟ್ ಜುಲೈ 20-24ರವರೆಗೆ ರಾತ್ರಿ 7.30ಕ್ಕೆ ಟ್ರಿನಿಡಾಡ್ ನಲ್ಲಿ ನಡೆಯಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ