India vs Pakistan Asia Cup 2023 Match Memes: ಭಾರತದ ವಿರುದ್ಧ ಏಷ್ಯಾ ಕಪ್ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್’ಗಳು ಉತ್ತಮ ಪ್ರದರ್ಶನ ನೀಡಿದ್ದರು. ನಾಲ್ಕು ವರ್ಷಗಳ ಸುದೀರ್ಘ ಅಂತರದ ನಂತರ ಭಾರತ ಮತ್ತು ಪಾಕಿಸ್ತಾನ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ಪಂದ್ಯವನ್ನಾಡಿದೆ.
ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಭಾರತ ತಂಡದ ಮುಖ್ಯ ಕೋಚ್’ಗೆ ಶೋಕಾಸ್ ನೋಟಿಸ್! ಕಾರಣ ಇದು…
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆಘಾತವನ್ನು ನೀಡುತ್ತಲೇ ಬಂದರು. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಪೆವಿಲಿಯನ್ ದಾರಿ ತೋರಿಸಿದ್ದು ಕೂಡ ಶಾಹಿನ್ ಅಫಿದ್ರಿಯೇ…
ರೋಹಿತ್ ಮತ್ತು ವಿರಾಟ್ ವಿಕೆಟ್ ಕಳೆದುಕೊಂಡಾಗ ಭಾರತ ತಂಡ ಸ್ಕೋರ್ ಕೇವಲ 27 ರನ್ ಆಗಿತ್ತು. ಇದಾದ ಬಳಿಕ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು, ಆದರೆ ಅಯ್ಯರ್ 9 ಎಸೆತಗಳಲ್ಲಿ ಕೇವಲ 14 ರನ್ ಗಳಿಸಿ ಹ್ಯಾರಿಸ್ ರೌಫ್’ಗೆ ವಿಕೆಟ್ ಒಪ್ಪಿಸಿದರೆ, ಟೀಂ ಇಂಡಿಯಾ ಸ್ಕೋರ್ 66 ರನ್ ತಲುಪಿದ್ದಾಗ ಶುಭ್ಮನ್ ಗಿಲ್ ಕೂಡ 32 ಎಸೆತಗಳಲ್ಲಿ 10 ರನ್ ಗಳಿಸಿ ಹ್ಯಾರಿಸ್ ರೌಫ್ ಎಸೆತದಲ್ಲಿ ಪೆವಿಲಿಯನ್ ಗೆ ಮರಳಿದರು.
ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಮೊದಲ ನಾಲ್ವರು ಬ್ಯಾಟ್ಸ್‌ಮನ್’ಗಳ ನಿರಾಶಾದಾಯಕ ಪ್ರದರ್ಶನವು ಇದೀಗ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್ ಶೇರ್ ಮಾಡುತ್ತಾ ಟೀಕಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಅನೇಕ ಫ್ಯಾನ್ಸ್ ಶೇಮ್ ಆನ್ ಯು ಎಂಬ ಕಮೆಂಟ್’ಗಳನ್ನು ಬರೆದು ಹಾಕುತ್ತಿದ್ದಾರೆ.
ಇದನ್ನೂ ಓದಿ: ಪಾಕ್ ವಿರುದ್ಧ ಇತಿಹಾಸ ಸೃಷ್ಟಿಸಿದ ಹಾರ್ದಿಕ್-ಇಶಾನ್ ಜೋಡಿ
ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್:
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 66 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡದ ಇನಿಂಗ್ಸ್ ಅನ್ನು ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಗಿ ನಿಭಾಯಿಸಿದರು. ಇವರಿಬ್ಬರ ನಡುವೆ ಐದನೇ ವಿಕೆಟ್’ಗೆ 141 ಎಸೆತಗಳಲ್ಲಿ 138 ರನ್’ಗಳ ಅತ್ಯುತ್ತಮ ಜೊತೆಯಾಟವಿತ್ತು. ತಮ್ಮ ODI ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧ ಆಡಿದ ಇಶಾನ್, ತಮ್ಮ ಬ್ಯಾಟ್’ನಿಂದ 82 ರನ್’ಗಳ ಇನ್ನಿಂಗ್ಸ್ ಕಂಡರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ