Asia Cup 2023: ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ Playing 11 ಪ್ರಕಟ! ಈ ಬಾರಿ ನಾಲ್ವರು ವೇಗಿಗಳಿಗೆ ಸ್ಥಾನ ಕೊಟ್ಟ ಸಮಿತಿ

Team India Probable Playing 11: ಏಷ್ಯಾಕಪ್‌ 2023ಕ್ಕಾಗಿ ಶ್ರೀಲಂಕಾಕ್ಕೆ ತೆರಳುವ ಮುನ್ನ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆ ನೀಡಿದ್ದಾರೆ. “ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಈ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

Written by - Bhavishya Shetty | Last Updated : Aug 30, 2023, 09:33 AM IST
    • ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ.
    • ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆ ನೀಡಿದ್ದಾರೆ.
    • ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಇಶಾನ್ ಕಿಶನ್ ಸ್ಥಾನ ಪಡೆಯುವುದು ಖಚಿತವಾಗಿದೆ
Asia Cup 2023: ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ Playing 11 ಪ್ರಕಟ! ಈ ಬಾರಿ ನಾಲ್ವರು ವೇಗಿಗಳಿಗೆ ಸ್ಥಾನ ಕೊಟ್ಟ ಸಮಿತಿ title=
Team India Asia Cup 2023

Indian Head Coach Rahul Dravid Statement, IND vs PAK: ಏಷ್ಯಾ ಕಪ್‌’ನಲ್ಲಿ ಆಡಲು ಭಾರತ ತಂಡ ಶ್ರೀಲಂಕಾಕ್ಕೆ ತೆರಳಿದೆ. ಏಷ್ಯಾಕಪ್-2023ರಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಆದರೆ ತಂಡದ ನಿರ್ಗಮನಕ್ಕೂ ಮುನ್ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆ ನೀಡಿದ್ದು, ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ವೃತ್ತಿಜೀವನದಲ್ಲಿ ಕೇವಲ 2 ಪಂದ್ಯ ಆಡಿದ ಕ್ರಿಕೆಟಿಗನಿಗೆ ಏಷ್ಯಾಕಪ್ ತಂಡದಲ್ಲಿ ಅವಕಾಶ ಕೊಟ್ಟ ಸಮಿತಿ

ಏಷ್ಯಾಕಪ್‌ 2023ಕ್ಕಾಗಿ ಶ್ರೀಲಂಕಾಕ್ಕೆ ತೆರಳುವ ಮುನ್ನ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆ ನೀಡಿದ್ದಾರೆ. “ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಈ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಹುಲ್ ಸೆಪ್ಟೆಂಬರ್ 2ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ. ಇನ್ನೊಂದೆಡೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಇಶಾನ್ ಕಿಶನ್ ಸ್ಥಾನ ಪಡೆಯುವುದು ಖಚಿತವಾಗಿದೆ.

ಭಾರತ ತಂಡವು ಸೆಪ್ಟೆಂಬರ್ 2 ರಂದು ಪಾಕಿಸ್ತಾನದ ವಿರುದ್ಧ ಏಷ್ಯಾ ಕಪ್‌’ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ತಂಡದ ನಾಯಕತ್ವವು ರೋಹಿತ್ ಶರ್ಮಾ ಅವರ ಕೈಯಲ್ಲಿದ್ದು, ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವ ರೀತಿಯ ಬದಲಾವಣೆಯನ್ನು ಮಾಡಲಾಗುತ್ತದೆ ಎಂಬುದು ಇನ್ನೂ ಅಸ್ಪಷ್ಟವಾಗಿದೆ. ಏಕೆಂದರೆ ಇಶಾನ್ ಕಿಶನ್ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿರುವುದರಿಂದ ಓಪನಿಂಗ್ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ಈಗ ರೋಹಿತ್ ಓಪನಿಂಗ್ ಮಾಡಿದರೆ ಕಿಶನ್ 5ನೇ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ರೋಹಿತ್ ಜೊತೆಗೆ ಮತ್ತೋರ್ವ ಓಪನರ್ ಶುಭ್ಮನ್ ಗಿಲ್ ಕೂಡ ಅದೇ ಸ್ಥಿತಿಯಲ್ಲಿ ಇದ್ದಾರೆ. ಇನ್ನು ವಿರಾಟ್ ಕೊಹ್ಲಿ ತಮ್ಮ ನೆಚ್ಚಿನ ನಂಬರ್-3ರಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಶ್ರೇಯಸ್ ಅಯ್ಯರ್ ಫಿಟ್ ಆಗಿದ್ದು ಅವರನ್ನು ನಂಬರ್-4ರಲ್ಲಿ ಇಳಿಯಲು ತಂಡ ನಿರ್ಧರಿಸಿದೆ ಎನ್ನಲಾಗಿದೆ.

ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕತ್ವ ವಹಿಸಿದ್ದರು. ಇದೀಗ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಇನ್ನು 11 ತಿಂಗಳ ನಂತರ ತಂಡಕ್ಕೆ ವಾಪಸಾದ ಬುಮ್ರಾ ಮೊದಲ ಓವರ್‌’ನಲ್ಲಿ ವಿಕೆಟ್‌’ಗಳನ್ನು ಪಡೆದಿದ್ದರು. ಇವರಲ್ಲದೆ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಅವರಿಗೆ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯಕ್ಕೆ ತಂಡದಲ್ಲಿ ಅವಕಾಶ ನೀಡುವುದು ಖಚಿತವಾದಂತಿದೆ. ಇನ್ನೊಂದೆಡೆ, ಹಾರ್ದಿಕ್ ಪಾಂಡ್ಯ ಕೂಡ ಪೇಸ್ ಬೌಲಿಂಗ್ ಆಲ್ ರೌಂಡರ್ ಆಗಿದ್ದು, ಅವರು ಸಹ ಈ ಪ್ಲೇಯಿಂಗ್ 11ಗೆ ಎಂಟ್ರಿ ಕೊಡೋದು ಬಹುತೇಕ ಖಚಿತವಾಗಿದೆ.

ಇನ್ನು ಸ್ಪಿನ್ ದಾಳಿಯನ್ನು ಬಲಪಡಿಸಲು ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ತಂಡದಲ್ಲಿದ್ದಾರೆ. ಜಡೇಜಾ ಬ್ಯಾಟ್‌ನಲ್ಲೂ ಅದ್ಭುತ ಪ್ರದರ್ಶನ ನೀಡಬಲ್ಲರು. ಏಕದಿನ ಮಾದರಿಯಲ್ಲಿ 177 ಪಂದ್ಯಗಳನ್ನು ಆಡಿದ ಅವರು, 13 ಅರ್ಧ ಶತಕಗಳ ಸಹಾಯದಿಂದ 2560 ರನ್ ಗಳಿಸಿದ್ದಾರೆ. ಟೆಸ್ಟ್‌’ನಲ್ಲಿ 3 ಶತಕ ಮತ್ತು 19 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ 194 ವಿಕೆಟ್‌’ಗಳನ್ನು ಕಬಳಿಸಿದ್ದಾರೆ,

ಇದನ್ನೂ ಓದಿ: Rain Alert: ರಾಜ್ಯದ 16 ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಡುವಿಲ್ಲದೆ ಸುರಿಯಲಿದೆ ಭಾರೀ ಮಳೆ

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ (Playing-11):

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News