ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ: ತಂಡಕ್ಕೆ ರೋಹಿತ್, ಕೊಹ್ಲಿ ರೀ ಎಂಟ್ರಿ..!
Team India: ದಕ್ಷಿಣ ಆಫ್ರಿಕಾ ವಿರುದ್ಧ ಬರ್ಬಾಡೋಸ್‌ನಲ್ಲಿ ನಡೆ ಫೈನಲ್ ಟಿ20 ವಿಸ್ವಕಪ್ 2024 ರಲ್ಲಿ ಗೆದ್ದು ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದೆ. ಶುಭಮನ್ ನಾಯಕತ್ವದ ಟೀಂ ಇಂಡಿಯಾ ತಂಡ ಊಗಾಗಲೇ ಜಿಂಬಾಬ್ವೆ ಪ್ರವಾಸದಲ್ಲಿದ್ದು, 1-1 ಅಂಕಗಳ ಮೂಲಕ ಸಮಬಲ ಕಾಯ್ದು ಕಾಯ್ದುಕೊಂಡಿದೆ.
Team India: ದಕ್ಷಿಣ ಆಫ್ರಿಕಾ ವಿರುದ್ಧ ಬರ್ಬಾಡೋಸ್‌ನಲ್ಲಿ ನಡೆ ಫೈನಲ್ ಟಿ20 ವಿಸ್ವಕಪ್ 2024 ರಲ್ಲಿ ಗೆದ್ದು ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದೆ. ಶುಭಮನ್ ನಾಯಕತ್ವದ ಟೀಂ ಇಂಡಿಯಾ ತಂಡ ಊಗಾಗಲೇ ಜಿಂಬಾಬ್ವೆ ಪ್ರವಾಸದಲ್ಲಿದ್ದು, 1-1 ಅಂಕಗಳ ಮೂಲಕ ಸಮಬಲ ಕಾಯ್ದು ಕಾಯ್ದುಕೊಂಡಿದೆ.
ಐದು ಪಂದ್ಯಗಳ ಸರಣಿ ಇದಾಗಿದ್ದು, ಸರಣಿ ಯಾರ ಪಾಲಾಗಲಿದೆ ಎಂದು ತಿಳಿಯಲು ಇನ್ನೂ ಮೂರು ಪಂದ್ಯಗಳು ಬಾಕಿ ಇದೆ. ಈಗಿರುವಾಗ ಬ್ಯೂ ಬಾಯ್ಸ್ ಕುರಿತು ಮತ್ತೊಂದು ಅಪ್‌ಡೇಟ್ ಹೊರಬಿದ್ದಿದೆ.
ಏಕದಿನ ಪಂದ್ಯಕ್ಕೆ ಪ್ರಮುಖ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಮುಂದಿನ ವರ್ಷ ಚಾಂಪಿಯನ್ಸ್ ಟ್ರೋಫಿ 2025 ರ ದೃಷ್ಟಿಯಿಂದ ಟೀಮ್ ಇಂಡಿಯಾ ಈ ಪ್ರವಾಸದಿಂದ ಸಿದ್ಧತೆಗಳನ್ನು ಆರಂಭಿಸಿದೆ. ಈ ಪ್ರವಾಸದ ಮೂಲಕ ಹೊಸ ಕೋಚ್ ಕೂಡ ತಮ್ಮ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಬಿಸಿಸಿಐ ವಿರುದ್ಧ ಬೇಸರ ಹೊರಹಾಕಿದ ಇಶಾನ್ ಕಿಶನ್..!
2023ರ ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾ 50 ಓವರ್‌ಗಳ ಮಾದರಿಯಲ್ಲಿ ಒಂದೇ ಒಂದು ಸರಣಿಯನ್ನು ಆಡಿಲ್ಲ. ಈ ಕ್ರಮದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾಗಲಿರುವ ಏಕದಿನ ತಂಡದಲ್ಲಿ ಯಾವ ಆಟಗಾರರು ಇರಲಿದ್ದಾರೆ ಎನ್ನುವ ಪ್ರಶ್ನೆ ಭಾರೀ ಕುತೂಹಲ ಹುಟ್ಟುಹಾಕಿದೆ.
ಈ ಸರಣಿಯೊಂದಿಗೆ ನಾಯಕ ರೋಹಿತ್ ಶರ್ಮಾ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡಲಿದ್ದಾರೆ. ಚಾಂಪಿಯನ್ಸ್ ಟ್ರೋಫಿ ತನಕ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟಪಡಿಸಿದ್ದು ಪಂದ್ಯದಲ್ಲಿ ರೋಹಿತ್, ಶುಭಮನ್ ಗಿಲ್ ಅವರೊಂದಿಗೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಇನ್ನೂ, ವಿರಾಟ್ ಕೊಹ್ಲಿ ಮೊದಲು ಕಣಕ್ಕೆ ಇಳಿದರೆ, ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದು, ರಿಂಕು ಸಿಂಗ್ ಫಿನಿಶರ್ ಆಗಿ ಕಣಕ್ಕೆ ಇಳಿಯಲಿದ್ದಾರೆ.
ಇದನ್ನೂ ಓದಿ: ರಾಹುಲ್ ದ್ರಾವಿಡ್‌ಗೆ ಭಾರತ ರತ್ನ..?ಅಚ್ಚರಿ ಹೇಳಿಕೆ ಕೊಟ್ಟ ಸುನೀಲ್ ಗವಾಸ್ಕರ್..!
ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ವಿಕೆಟ್ ಕೀಪರ್ ಆಗಿ ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿಷಬ್ ಪಂತ್ ಗಿಂತ ರಾಹುಲ್ ಗೆ ಮೊದಲ ಆದ್ಯತೆ ಸಿಗಲಿದೆ. ಇನ್ನೂ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಗಳಾಗಿ ಕಣಕ್ಕೆ ಇಳಿಯಲಿದ್ದಾರೆ. ಗಾಯದಿಂದ 2023ರ ODI ವಿಶ್ವಕಪ್‌ನಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಮತ್ತೆ ODI ಸ್ವರೂಪದಲ್ಲಿ ಆಡಲಿಲ್ಲ. ಅವರು ಉಪನಾಯಕನಾಗಿ ಮರು ಪ್ರವೇಶ ಪಡೆಯಲಿದ್ದಾರೆ.
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ XI:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಕೆಎಲ್ ರಾಹುಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್ , ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ