IND vs NZ 2nd ODI Match: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದೆ. ಈ ಸರಣಿಯ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಮತ್ತು ಬೌಲರ್ ಗಳು ಅಟ್ಟಹಾಸ ಮೆರೆದಿದ್ದು, ನ್ಯೂಜಿಲೆಂಡ್ ತಂಡವನ್ನು 108 ರನ್ ಗಳಿಗೆ ಕಟ್ಟಿಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs NZ: ಟೀಂ ಇಂಡಿಯಾದಲ್ಲಿ ಬೌಲರ್ ಗಳ ಅಟ್ಟಹಾಸ: ಬ್ಯಾಕ್ ಟು ಬ್ಯಾಕ್ ಉರುಳಿದ ಕೀವೀಸ್ ವಿಕೆಟ್


ಬೌಲಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಶಮಿ 18 ರನ್ ಗೆ 3 ವಿಕೆಟ್, ಹಾರ್ದಿಕ್ ಪಾಂಡ್ಯ 16 ರನ್ ಗೆ 2 ವಿಕೆಟ್, ವಾಷಿಂಗ್ಟನ್ ಸುಂದರ್ 7 ರನ್ ಗೆ 2 ವಿಕೆಟ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.


ನ್ಯೂಜಿಲೆಂಡ್ ಪರ ಕಳಪೆ ಬ್ಯಾಟಿಂಗ್ ಮಾಡಿದ ಬ್ಯಾಟ್ಸ್ ಮನ್ ಗಳು ಕೇವಲ 108 ರನ್ ಗಳಿಸಲಷ್ಟೇ ಶಕ್ತವಾಯಿತು. ಇನ್ನು ಕೀವೀಸ್ ನೀಡಿದ ಸುಲಭ ಗುರಿ ಬೆನ್ನಟ್ಟಿದ ಭಾರತ 21.1 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 111 ರನ್ ಕಲೆ ಹಾಕಿ ಸರಣಿ ವಶಪಡಿಸಿಕೊಂಡಿದೆ. ಆರಂಭಿಕ ಆಟಗಾರ ನಾಯಕ ರೋಹಿತ್ ಶರ್ಮಾ (51)ಅರ್ಧ ಶತಕ ಸಿಡಿಸಿ ಔಟ್ ಆದರು. ಆ ಬಳಿಕ ಕ್ರೀಸ್ ಗೆ ಆಗಮಿಸಿದ ವಿರಾಟ್ ಕೊಹ್ಲಿ 11 ರನ್ ಕಲೆ ಹಾಕಿ ಪೆವಿಲಿಯನ್ ಗೆ ಮರಳಿದರು. ನಂತರ ಬಂದ ಇಶಾನ್ ಕಿಶನ್, ಗೆಳಯ ಶುಭ್ಮನ್ ಗಿಲ್ ಜೊತೆ ಸೇರಿ ಭರ್ಜರಿ ಆಟವಾಡಿದ್ದಾರೆ.


ಇದನ್ನೂ ಓದಿ: Rohit Sharma: ಟಾಸ್ ವೇಳೆ ಗಜನಿ ಥರ ವರ್ತಿಸಿದ ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕನಿಗೆ ಇದ್ದಕ್ಕಿಂದ್ದಂತೆ ಆಗಿದ್ದೇನು?


ಐತಿಹಾಸಿಕ ಸಾಧನೆಗೆ ಒಂದೇ ಮೆಟ್ಟಿಲು ಬಾಕಿ:


ಈಗಾಗಲೇ ಟಿ20 ಮತ್ತು ಟೆಸ್ಟ್ ಸ್ವರೂಪದ ಐಸಿಸಿ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಟೀಂ ಇಂಡಿಯಾ, ಏಕದಿನದಲ್ಲೂ ಪ್ರಾಬಲ್ಯ ಮೆರೆಯುವ ನಿರೀಕ್ಷೆ ಇಟ್ಟುಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯವನ್ನೂ ಗೆದ್ದರೆ, ಏಕದಿನ ಐಸಿಸಿ ಶ್ರೇಯಾಂಕದಲ್ಲಿಯೂ ಭಾರತ ಮೊದಲ ಸ್ಥಾನ ಏರಲಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.