IND vs AUS: ಬಾರ್ಡರ್ ಗವಾಸ್ಕರ್ ಟ್ರೋಫಿ ನಂತರ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಭಾರತದ ಆಯ್ಕೆಗಾರರು ಈಗಾಗಲೇ ಈ ಸರಣಿಗೆ ಟೀಂ ಇಂಡಿಯಾವನ್ನು ಘೋಷಿಸಿದ್ದಾರೆ. ಆದರೆ ಈ ಸರಣಿಯಲ್ಲಿ ಟೀಂ ಇಂಡಿಯಾದ ಬಿಗ್ ಮ್ಯಾಚ್ ವಿನ್ನರ್ ಆಟಗಾರರು ಆಡುವುದು ಕಾಣಿಸುತ್ತಿಲ್ಲ. ಗಾಯದಿಂದಾಗಿ ಈ ಆಟಗಾರ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲೂ ಭಾರತ ತಂಡದ ಭಾಗವಾಗಿಲ್ಲ. ಗಾಯದಿಂದಾಗಿ ಈ ಆಟಗಾರ ಕನಿಷ್ಠ 3-4 ತಿಂಗಳ ಕಾಲ ಮೈದಾನದಿಂದ ದೂರ ಉಳಿಯಲಿದ್ದಾರೆ.
ಇದನ್ನೂ ಓದಿ: ರಾಯಲ್ ಆಗಿ ಹೋಳಿ ಆಚರಿಸಿದ ʼRCBʼ ವುಮೆನ್ಸ್ ಟೀಂ..! ಫೋಟೋಸ್ ನೋಡಿ
ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ಹಲವು ಬಾರಿ ಗಾಯದಿಂದ ಬಳಲುತ್ತಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿಲ್ಲ. ಉಭಯ ತಂಡಗಳ ನಡುವಿನ ಏಕದಿನ ಸರಣಿಗೂ ಜಸ್ಪ್ರೀತ್ ಬುಮ್ರಾ ಆಯ್ಕೆಯಾಗಿಲ್ಲ.
ನ್ಯೂಜಿಲೆಂಡ್‌ನಲ್ಲಿ ಬೆನ್ನಿನ ಶಸ್ತ್ರಚಿಕಿತ್ಸೆ!
ಜಸ್ಪ್ರೀತ್ ಬುಮ್ರಾ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಲು ನ್ಯೂಜಿಲೆಂಡ್‌ಗೆ ತೆರಳಿದ್ದಾರೆ. ಈಗ ಬುಮ್ರಾ ಚೇತರಿಸಿಕೊಳ್ಳಲು ಮೂರ್ನಾಲ್ಕು ತಿಂಗಳು ಬೇಕಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ಜಸ್ಪ್ರೀತ್ ಬುಮ್ರಾ ಐಪಿಎಲ್ 2023 ರಿಂದ ಹೊರಗುಳಿಯುತ್ತಾರೆ ಎಂದು ಹೇಳಲಾಗುತ್ತಿದೆ.
ಜಸ್ಪ್ರೀತ್ ಬುಮ್ರಾ ಇದುವರೆಗೆ ಟೀಂ ಇಂಡಿಯಾ ಪರ 30 ಟೆಸ್ಟ್ ಪಂದ್ಯಗಳು, 72 ODIಗಳು ಮತ್ತು 60 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 128, ಏಕದಿನದಲ್ಲಿ 121 ಮತ್ತು ಟಿ 20ಯಲ್ಲಿ 70 ವಿಕೆಟ್‌ಗಳನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಪ್ರಸ್ತುತ ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಜುಲೈ 2022 ರಲ್ಲಿ ಇಂಗ್ಲೆಂಡ್ ಪ್ರವಾಸದ ನಂತರ ಬುಮ್ರಾ ಸೊಂಟದ ಸ್ಟ್ರೆಸ್ ಫ್ರ್ಯಾಕ್ಚರ್’ಗೆ ಒಳಗಾದರು. ಈ ಗಾಯದಿಂದಾಗಿ ಅವರು ನಿರಂತರವಾಗಿ ತಂಡದಿಂದ ಹೊರಗುಳಿಯುತ್ತಿದ್ದಾರೆ.
ಇದನ್ನೂ ಓದಿ: ವಾಟ್ಸ್ ಆಪ್ ಗ್ರೂಪ್ ಗೂ ಇರಲಿದೆ ಇನ್ನು ಎಕ್ಸ್ ಪೈರಿ ಡೇಟ್ ! ತನ್ನಷ್ಟಕ್ಕೆ ಆಗುವುದು ಗ್ರೂಪ್ ಡಿಲೀಟ್
ಏಕದಿನ ಸರಣಿಗೆ ಟೀಂ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕತ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.