Team India Squad Against West Indies : ಈ ತಿಂಗಳ ಅಂತ್ಯದಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ 5 ಟಿ20 ಪಂದ್ಯಗಳ ಸರಣಿಯನ್ನು ಆಡಬೇಕಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವದ ರೋಹಿತ್ ಶರ್ಮಾ ವಹಿಸಿಕೊಂಡಿದ್ದಾರೆ. ಆದ್ರೆ, ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಯುವ ಆಟಗಾರರ ಮೇಲೆ ನಂಬಿಕೆ
ಟೀಂ ಇಂಡಿಯಾದ ಆಯ್ಕೆಗಾರರು ಮತ್ತೊಮ್ಮೆ ಯುವ ಆಟಗಾರರ ಮೇಲೆ ವಿಶ್ವಾಸ ಮೂಡಿಸಿದ್ದಾರೆ. ರವಿ ಬಿಷ್ಣೋಯ್, ಅವೇಶ್ ಖಾನ್ ಮತ್ತು ಅರ್ಷದೀಪ್ ಸಿಂಗ್ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ, ಆದರೆ ಉಮ್ರಾನ್ ಮಲಿಕ್ ಈ ತಂಡದಲ್ಲಿ ಸ್ಥಾನ ಪಡೆದಿಲ್ಲ. ಐಪಿಎಲ್ 2022 ರ ನಂತರ ಮಲಿಕ್ ನಿರಂತರವಾಗಿ ತಂಡದಲ್ಲಿ ಆಡಿದ್ದರು, ಆದರೆ ಆಯ್ಕೆಗಾರರು ಈ ಟಿ 20 ಸರಣಿಯಲ್ಲಿ ಅವರಿಗೆ ಅವಕಾಶ ನೀಡಲಿಲ್ಲ. ಹಾಗೆ, ಆರ್ ಅಶ್ವಿನ್ ಮತ್ತೊಮ್ಮೆ ಟಿ20 ತಂಡದಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.
ಇದನ್ನೂ ಓದಿ : Ind vs Eng : ಟೀಂ ಇಂಡಿಯಾ Playing 11 ನಿಂದ ಇಶಾನ್ ಕಿಶನ್ ಔಟ್!
ತಂಡಕ್ಕೆ ಮರಳಿದ ಈ ಆಟಗಾರರು
ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆದರೆ, ಇಬ್ಬರೂ ಫಿಟ್ ಆದ ನಂತರವೇ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಇಬ್ಬರೂ ಆಟಗಾರರು ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಈ ಇಬ್ಬರೂ ಆಟಗಾರರು ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಗಾಯಗೊಂಡಿದ್ದರು. ಕುಲದೀಪ್ ಯಾದವ್ ಅವರು ಎನ್‌ಸಿಎಯಲ್ಲಿ ಪುನರ್ವಸತಿಯನ್ನೂ ಪೂರ್ಣಗೊಳಿಸಿದ್ದಾರೆ.
India have named their squad for the T20I series against West Indies.
KL Rahul and Kuldeep Yadav picked subject to fitness, Virat Kohli not in 18-member side #WIvIND pic.twitter.com/sFEqTRM8qJ
— ESPNcricinfo (@ESPNcricinfo) July 14, 2022
ವಿಶ್ರಾಂತಿ ಪಡೆದ ಈ ಆಟಗಾರರು
ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ವೆಸ್ಟ್ ಇಂಡೀಸ್ ಪ್ರವಾಸದ ಟಿ20ಐ ಸರಣಿಗೆ ವಿಶ್ರಾಂತಿ ಪಡೆದಿದ್ದಾರೆ. ತೊಡೆಸಂದು ಗಾಯದಿಂದಾಗಿ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಪ್ಲೇಯಿಂಗ್ ಇಲೆವೆನ್‌ನ ಭಾಗವಾಗಿರಲಿಲ್ಲ. ಅದೇ ವೇಳೆ ಎರಡನೇ ಏಕದಿನ ಪಂದ್ಯದಲ್ಲೂ ಅವರು ಆಡುವ ಬಗ್ಗೆ ಸಸ್ಪೆನ್ಸ್ ಸೃಷ್ಟಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿರಾಟ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮತ್ತೊಂದೆಡೆ, ಜಸ್ಪ್ರೀತ್ ಬುಮ್ರಾ ತಮ್ಮ ಕೆಲಸದ ಹೊರೆ ಕಡಿಮೆ ಮಾಡಲು ವಿಶ್ರಾಂತಿ ಪಡೆದಿದ್ದಾರೆ. ಈ ಇಬ್ಬರೂ ಆಟಗಾರರು ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ.
ಇದನ್ನೂ ಓದಿ : ICC ODI Ranking: ಏಕದಿನ ಕ್ರಿಕೆಟ್ ನಲ್ಲಿ ನಂಬರ್ 1 ಪಟ್ಟಕ್ಕೆ ಏರಿದ ಜಸ್ಪ್ರಿತ್ ಬುಮ್ರಾ
ವೆಸ್ಟ್ ಇಂಡೀಸ್ ವಿರುದ್ಧದ ಭಾರತ ತಂಡ
ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಕೆಎಲ್ ರಾಹುಲ್, ಕೆಎಲ್ ರಾಹುಲ್, ಕೆಎಲ್ ರಾಹುಲ್ ಮತ್ತು ಅರ್ಷದೀಪ್ ಸಿಂಗ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ