ನ್ಯೂಜಿಲೆಂಡ್ ಸರಣಿ: ಟೀಮ್ ಇಂಡಿಯಾ ಇಲೆವನ್ ಸದಸ್ಯರ ಪಟ್ಟಿ ಪ್ರಕಟ
ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಏಕದಿನ ಪಂದ್ಯಗಳ ಮತ್ತು ಟಿ20 ಸರಣಿಗೆ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ, ಗಾಯಗೊಂಡಿರುವ ಸಂಜು ಸ್ಯಾಮ್ಸನ್ ಅವರನ್ನು ಎರಡೂ ತಂಡಗಳಿಂದ ಹೊರಗಿಡಲಾಗಿದೆ ಮತ್ತು ಕೆ.ಎಸ್ ಭರತ್ ಏಕದಿನ ತಂಡದಲ್ಲಿ ಮತ್ತು ಜಿತೇಶ್ ಶರ್ಮಾ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಏಕದಿನ ಪಂದ್ಯಗಳ ಮತ್ತು ಟಿ20 ಸರಣಿಗೆ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ, ಗಾಯಗೊಂಡಿರುವ ಸಂಜು ಸ್ಯಾಮ್ಸನ್ ಅವರನ್ನು ಎರಡೂ ತಂಡಗಳಿಂದ ಹೊರಗಿಡಲಾಗಿದೆ ಮತ್ತು ಕೆ.ಎಸ್ ಭರತ್ ಏಕದಿನ ತಂಡದಲ್ಲಿ ಮತ್ತು ಜಿತೇಶ್ ಶರ್ಮಾ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಕುಟುಂಬದ ಬದ್ಧತೆಯ ಕಾರಣ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆ.
ರೋಹಿತ್ ಏಕದಿನ ಮಾದರಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.ಸ್ಪಿನ್ ಬೌಲಿಂಗ್ ಆಯ್ಕೆಯಾಗಿ ಯುಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಮುಂದುವರಿಯಲಿದ್ದಾರೆ.ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್ ಭಾರತದ ವೇಗದ ಬೌಲಿಂಗ್ ದಾಳಿಯನ್ನು ರೂಪಿಸಲಿದ್ದಾರೆ. ಬೆನ್ನುನೋವಿನಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ ಈ ಸರಣಿಗೆ ಹಿಂದಿರುಗುವ ಯಾವುದೇ ಲಕ್ಷಣಗಳಿಲ್ಲ.
ಇದನ್ನೂ ಓದಿ: Online Fraud: ಆನ್ಲೈನ್ ನಲ್ಲಿ ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆ ಕಳೆದುಕೊಂಡಿದ್ದು ಬರೋಬ್ಬರಿ 10 ಲಕ್ಷ ರೂ..!
ಇನ್ನೊಂದೆಡೆಗೆ ಟಿ20 ಪಂದ್ಯಗಳಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ತಂಡವನ್ನು ಮುನ್ನಡೆಸುತ್ತಾರೆ, ಆಸ್ಟ್ರೇಲಿಯಾ ವಿರುದ್ಧ ಭಾರತ ಆಡಲಿರುವ ನಿರ್ಣಾಯಕ ನಾಲ್ಕು ಪಂದ್ಯಗಳ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಬಹುದಿತ್ತು. ವಿರಾಟ್ ನ್ಯೂಜಿಲೆಂಡ್ ಟಿ20 ಐಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ. ಈ ಋತುವಿನಲ್ಲಿ ದೇಶೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಪೃಥ್ವಿ ಶಾ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.
ಇದನ್ನೂ ಓದಿ: ಕಾಮಗಾರಿಗಳಿಗೆ ಲಂಚ.. ಪಂಚಾಯ್ತಿ ಮುಂದೆ ಭಿಕ್ಷಾಪಾತ್ರೆ ಹಿಡಿದು ಕುಳಿತ ಗ್ರಾಪಂ ಸದಸ್ಯ
ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್ , ಕುಲದೀಪ್ ಯಾದವ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್
ಭಾರತದ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್ ), ಆರ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್ ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ವೈ.ಚಹಾಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.