ಡಿವೋರ್ಸ್ ಬಳಿಕ ಈ ಖ್ಯಾತ ನಟಿಯೊಂದಿಗೆ ಎರಡನೇ ಮದುವೆಗೆ ರೆಡಿಯಾದ ಖ್ಯಾತ ಕ್ರಿಕೆಟರ್!? ಕ್ರೀಡಾ ಜಗತ್ತಿಗೆ ದೊಡ್ಡ ಸಂಭ್ರಮ!!
Team India Star Cricketer: ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ತಮ್ಮ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದರು. ಆದರೆ ಇದೀಗ ಧವನ್ ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದಾರೆ.. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Shikar Dhawan: ಶಿಖರ್ ಧವನ್ ಮತ್ತೆ ಯಾರನ್ನಾದರೂ ಪ್ರೀತಿಸುತ್ತಿದ್ದಾರಾ? ಧವನ್ ಮತ್ತೆ ಮದುವೆಯಾಗ್ತಾರಾ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದಕ್ಕೂ ಕಾರಣವಿದೆ.. ಶಿಖರ್ ಧವನ್ ಹೊಸ ಹುಡುಗಿಯೊಂದಿಗೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ. ಅವರು ಮಿಸ್ಟರಿ ಗರ್ಲ್ ಜೊತೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಆದರೆ ಆ ಹುಡುಗಿಗೆ ಧವನ್ ಅವರೊಂದಿಗೆ ಏನು ಸಂಬಂಧ ಎನ್ನುವುದರ ಬಗ್ಗೆ ಇನ್ನೂ ಅಧಿಕೃತವಾಗಿ ತಿಳಿದಿಲ್ಲ. ಆದ್ರೆ, ಟೀಂ ಇಂಡಿಯಾದ ಮಾಜಿ ಓಪನರ್ ಜೀವನದಲ್ಲಿ ಹೊಸತೇನಾದರೂ ಬರುವ ಸಾಧ್ಯತೆ ಇದೆಯಂತೆ.
ಗಬ್ಬರ್ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾನೆಯೇ?
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಧವನ್ ನೀಲಿ ಟಿ-ಶರ್ಟ್ ಮತ್ತು ಕಪ್ಪು ಕಾರ್ಗೋವನ್ನು ಧರಿಸಿದ್ದಾರೆ. ಈ ವಿಡಿಯೋದಲ್ಲಿ ಧವನ್ ಜೊತೆ ಹುಡುಗಿಯೂ ಕಾಣಿಸಿಕೊಂಡಿದ್ದಾಳೆ. ಹುಡುಗಿ ಕ್ಯಾಮರಾದಿಂದ ತನ್ನನ್ನು ರಕ್ಷಿಸಿಕೊಳ್ಳುವುದು ಮತ್ತು ನಾಚಿಕೆಪಡುವುದು ಕಂಡುಬರುತ್ತದೆ. ಒಂದೇ ಪ್ರೇಮ್‌ನಲ್ಲಿ ಧವನ್ ಜೊತೆ ತನ್ನ ಪೋಟೋ ತೆಗೆಯಲು ಯಾರಿಗೂ ಅವಕಾಶ ನೀಡದಿರಲು ಆಕೆ ತನ್ನಿಂದಾದಷ್ಟು ಪ್ರಯತ್ನಿಸಿದಳು.
ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದರು. ವಿಚ್ಛೇದನದ ನಂತರ ಧವನ್ ಹೊಸ ಹುಡುಗಿಯ ಜೊತೆ ಕಾಣಿಸಿಕೊಂಡಿದ್ದಾರೆ. ಶಿಖರ್ ಧವನ್ ಜೊತೆಗಿನ ಈ ಹೊಸ ಸಂಬಂಧ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.
ಧವನ್ ಈ ವರ್ಷ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ಅವರು ಈ ವರ್ಷದ ಆಗಸ್ಟ್‌ನಲ್ಲಿ ನಿವೃತ್ತಿ ಘೋಷಿಸಿದರು. ಧವನ್ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ 269 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು 10867 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು 24 ಶತಕ ಮತ್ತು 44 ಅರ್ಧ ಶತಕಗಳನ್ನು ಗಳಿಸಿದ್ದಾರೆ. 2015ರ ಏಕದಿನ ವಿಶ್ವಕಪ್‌ನಲ್ಲಿ ಧವನ್ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅವರು 8 ಪಂದ್ಯಗಳಲ್ಲಿ 51.50 ಸರಾಸರಿಯಲ್ಲಿ 412 ರನ್ ಗಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ