ಜೂನ್ 29 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ T20 ವಿಶ್ವಕಪ್ 2024 ಫೈನಲ್‌ನಲ್ಲಿ  17ನೇ ಓವರ್ ನ ಮೊದಲ ಎಸೆತದಲ್ಲಿ ಹೆನ್ರಿಚ್ ಕ್ಲಾಸೆನ್ ಅವರನ್ನು ಔಟ್ ಮಾಡಿ 3 ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.


COMMERCIAL BREAK
SCROLL TO CONTINUE READING

ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ಟಿ20 ಶ್ರೇಯಾಂಕದಲ್ಲಿ ಭಾರತದ ಉಪನಾಯಕ ಹಾರ್ದಿಕ್ ಪಾಂಡ್ಯ ನಂ.1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ T20 ವಿಶ್ವಕಪ್ 2024 ಫೈನಲ್‌ನಲ್ಲಿ   17ನೇ ಓವರ್ ನ ಮೊದಲ ಎಸೆತದಲ್ಲಿ ಹೆನ್ರಿಚ್ ಕ್ಲಾಸೆನ್ ಅವರನ್ನು ಔಟ್ ಮಾಡಿ 3 ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.


ಇದನ್ನು ಓದಿ: ಬ್ರೆಡ್ ಪ್ಯಾಕೆಟ್ ಅನ್ನು ಫ್ರಿಜ್ನಲ್ಲಿ ಇಡುತ್ತೀರಾ? ಅದರಿಂದ ಏನಾಗುತ್ತದೆ ಗೊತ್ತಾ!! 


 ಟಿ20 ವಿಶ್ವಕಪ್ 2024ರ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು.  ಹೆನ್ರಿಕ್ ಕ್ಲಾಸೆನ್ ಅವರ ವಿಕೆಟ್ ಈ ಪಂದ್ಯದಲ್ಲಿ ಭಾರಿ ಗೆಲುವನ್ನು ಉಂಟು ಮಾಡಿತು. ಹಾರ್ದಿಕ್  ಕೇವಲ 20 ರನ್‌ಗಳಿಗೆ ಮೂರು ವಿಕೆಟ್ ಪಡೆದರು ಮತ್ತು  ಈ ಟೂರ್ನಿಯಲ್ಲಿ ಅವರು ಒಟ್ಟು 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 


ಟಿ20 ವಿಶ್ವಕಪ್ ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಮಿಂಚಿದ್ದ ಹಾರ್ದಿಕ್ ಪಾಂಡ್ಯ ಐಸಿಸಿ ಟಿ20 ರಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನಕ್ಕೇರಿದರು. ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಹಾರ್ದಿಕ್ ಎರಡು ಸ್ಥಾನ ಮೇಲಕ್ಕೇರಿ ಅಗ್ರಸ್ಥಾನ ಪಡೆದರು. ಪ್ರಸ್ತುತ, ಅವರು 222 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ನಂ.1 ಆಲ್‌ರೌಂಡರ್ ಆಗಿ ಮುಂದುವರಿದಿದ್ದಾರೆ. ಶ್ರೀಲಂಕಾ ತಂಡದ ನಾಯಕಿ ವನಿಂದು ಹಸರಂಗ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾರ್ಕಸ್ ಸ್ಟೊಯಿನಿಸ್ ಮೂರನೇ ಸ್ಥಾನದಲ್ಲಿದ್ದರೆ, ಸಿಕಂದರ್ ರಜಾ ಮತ್ತು ಶಕೀಬ್ ಅಲ್ ಹಸನ್ ನಂತರದ ಸ್ಥಾನದಲ್ಲಿದ್ದಾರೆ. 


ಇದನ್ನು ಓದಿ: ದೆಹಲಿಯಿಂದ ಮುಂಬೈವರೆಗೆ ಸಂಭ್ರಮಾಚರಣೆಯ ಮೇಳ.. ಟೀಂ ಇಂಡಿಯಾಗೆ ಭವ್ಯ ಸ್ವಾಗತ!


ಹಾರ್ದಿಕ್ ಪಾಂಡ್ಯ 2024 ರ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಅತ್ಯಂತ ನಿರ್ಣಾಯಕ ಆಟಗಾರನಾಗಿ ಮುಂದುವರಿದಿದ್ದಾರೆ. ಪಾಂಡ್ಯ ಆರು ಇನ್ನಿಂಗ್ಸ್‌ಗಳಲ್ಲಿ 48 ಸರಾಸರಿ ಮತ್ತು 151.57 ಸ್ಟ್ರೈಕ್ ರೇಟ್‌ನಲ್ಲಿ 144 ರನ್ ಗಳಿಸಿದರು. ಅಲ್ಲದೆ, ಬೌಲಿಂಗ್‌ನಲ್ಲೂ ಮಿಂಚಿ, ಒಟ್ಟು 11 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ (17 ವಿಕೆಟ್) ಮತ್ತು ಜಸ್ಪ್ರೀತ್ ಬುಮ್ರಾ (15 ವಿಕೆಟ್) ಈ ಮೆಗಾ ಟೂರ್ನಮೆಂಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರು ಹಾರ್ದಿಕ್ ಪಾಂಡ್ಯ ನಂತರದ ಸ್ಥಾನದಲ್ಲಿದ್ದಾರೆ.


IPC T20 ಆಲ್ ರೌಂಡರ್ ಶ್ರೇಯಾಂಕಗಳು


1. ಹಾರ್ದಿಕ್ ಪಾಂಡ್ಯ
2. ವನಿಂದು ಹಸ್ರಂಗ
3. ಮಾರ್ಕಸ್ ಸ್ಟೊಯಿನಿಸ್
4. ಸಿಕಂದರ್ ರಜಾ
5. ಶಕೀಬ್ ಅಲ್ ಹಸನ್https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ..