Team India: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪುನರಾಗಮನಕ್ಕೆ ಸಜ್ಜಾಗಿದ್ದಾರೆ. ನಾಳೆಯಿಂದ ಆರಂಭವಾಗಲಿರುವ ರಣಜಿ ಟ್ರೋಫಿ ಗ್ರೂಪ್-ಸಿ ಪಂದ್ಯದಲ್ಲಿ ಶಮಿ ಬಂಗಾಳದ ಪರ ಆಡಲಿದ್ದಾರೆ. ಇದರೊಂದಿಗೆ ಶೀಘ್ರದಲ್ಲೇ ಟೀಂ ಇಂಡಿಯಾ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಮೊಹಮ್ಮದ್ ಶಮಿ ಗಾಯದ ಸಮಸ್ಯೆಯಿಂದ ಕಳೆದ ಒಂದು ವರ್ಷದಿಂದ ಆಟದಿಂದ ದೂರ ಉಳಿದಿರುವುದು ಗೊತ್ತೇ ಇದೆ. ಕಾಲು ನೋವಿನಿಂದ ಭಾರತ ತಂಡದಿಂದ ಹೊರಗುಳಿದಿದ್ದ ಶಮಿ ಇದೀಗ ಇಂದೋರ್ ನಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಆಡಲು ಸಜ್ಜಾಗಿದ್ದಾರೆ.


ಇದನ್ನೂ ಓದಿ-ತನ್ನ ಹಾಡನ್ನು ಹಾಡುತ್ತಾ ಆಸ್ಪತ್ರೆಯ ಹಾಸಿಗೆ ಮೇಲೆ ಪ್ರಾಣ ಬಿಟ್ಟ ಖ್ಯಾತ ಗಾಯಕಿ.. ಕಣ್ಣೀರು ತರಿಸುತ್ತೆ ಕೊನೆಯ ಕ್ಷಣದ ವೈರಲ್‌ ವಿಡಿಯೋ


2023ರ ಏಕದಿನ ವಿಶ್ವಕಪ್ ವೇಳೆ ಮೊಹಮ್ಮದ್ ಶಮಿ ಕಾಲು ನೋವಿನಿಂದ ಬಳಲುತ್ತಿದ್ದರು. ಆದರೆ ಎಷ್ಟೇ ನೋವಿನಲ್ಲಿದ್ದರೂ ಪೇನ್ ಕಿಲ್ಲರ್ ಹಾಕಿಕೊಂಡು ಟೀಂ ಇಂಡಿಯಾ ಪರ ಆಡಿದ್ದಾರೆ. ಇದು ಅವರ ಪಾದದ ಸಮಸ್ಯೆಯನ್ನು ಉಲ್ಬಣಗೊಳಿಸಿತು. ಆದ್ದರಿಂದಲೇ ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯ ಆಡಲಿಲ್ಲ. ವೈದ್ಯಕೀಯ ಪರೀಕ್ಷೆಗಳಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಕಳೆದ ಫೆಬ್ರವರಿಯಲ್ಲಿ ಮೊಹಮ್ಮದ್ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಕಾರಣದಿಂಲೇ ಅವರು ಐಪಿಎಲ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ.


ಆಸ್ಟ್ರೇಲಿಯ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಶಮಿ ಸಂಪೂರ್ಣ ಫಿಟ್ ಆಗಿಲ್ಲದ ಕಾರಣ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಫಿಟ್ ಆಗಿರುವ ಶಮಿ ರಾಷ್ಟ್ರಮಟ್ಟದ ಸ್ಪರ್ಧೆಗೆ ರೆಡಿಯಾಗಿದ್ದಾರೆ. ರಣಜಿ ಟೂರ್ನಿಯಲ್ಲಿ ಎರಡ್ಮೂರು ಪಂದ್ಯಗಳ ಮೂಲಕ ಫಿಟ್ ನೆಸ್ ಸಾಬೀತುಪಡಿಸಿದರೆ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೆ ತಂಡಕ್ಕೆ ಸೇರಿಸಿಕೊಳ್ಳಬಹುದು. ಹಾಗಾಗಿ ಮೊಹಮ್ಮದ್ ಶಮಿ ಪುನರಾಗಮನವನ್ನು ಟೀಂ ಇಂಡಿಯಾಗೆ ಶುಭ ಸುದ್ದಿ ಎಂದು ಪರಿಗಣಿಸಬಹುದು.


ಇದನ್ನೂ ಓದಿ-ಪತಿಯ ʻಈʼ ಅಭ್ಯಾಸದಿಂದ ಕಂಗೆಟ್ಟಿದ್ದ ನಟಿ ಶ್ರೀದೇವಿ... ತನ್ನ ಪ್ರಾಣಕ್ಕೆ ಕುತ್ತು ತಂದುಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದು ಏಕೆ ಗೊತ್ತಾ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ