T20 World Cup 2024: ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಬಹು ನಿರೀಕ್ಷಿತ T20 ವಿಶ್ವಕಪ್ನ ಸಮಯ ಸಮೀಪಿಸುತ್ತಿದೆ. ಈ ಕಿರು ವಿಶ್ವಕಪ್ ಜೂನ್ 2 ರಿಂದ ಆರಂಭವಾಗಲಿದೆ. ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಿರುವ ಈ ವಿಶ್ವಕಪ್ನಲ್ಲಿ ಭಾಗವಹಿಸಲು ಭಾರತ ತಂಡ ಈಗಾಗಲೇ ಎರಡು ತಂಡಗಳಾಗಿ ಅಮೆರಿಕಕ್ಕೆ ಆಗಮಿಸಿದೆ. ಆದರೆ.. ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೋಗಿರಲಿಲ್ಲ..
ಇದೀಗ ಕೊನೆಗೂ ರನ್ ಮಷಿನ್, ದಾಖಲೆಗಳ ರಾಜ ಕೊಹ್ಲಿ ಅಮೆರಿಕಗೆ ತೆರಳಿದ್ದಾರೆ... ಗುರುವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣ ತಲುಪಿ ಅಮೆರಿಕದ ವಿಮಾನ ಹತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ-RCB Top-5 Players: ಈ ಆಟಗಾರರಿಂದಲೇ ರಾಯಲ್ ಚಾಲೆಂಜರ್ಸ್ ಪ್ಲೇಆಫ್ ತಲುಪಿದ್ದು!!
ಇನ್ನು ಭಾರತ ತಂಡ ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಕೊಹ್ಲಿ ಆಡುವ ಬಗ್ಗೆ ಸ್ಪಷ್ಟತೆ ಇಲ್ಲ. ಭಾರತ ತಂಡ ಕಿರು ವಿಶ್ವಕಪ್ನಲ್ಲಿ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಅಲ್ಲದೇ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿದೆ.
ಟಿ20 ವಿಶ್ವಕಪ್ಗೆ ಟೀಂ ಇಂಡಿಯಾ..
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಯಶಸ್ವಿ ಜೈಶ್ವಾಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ-RCB ಮ್ಯಾಚ್ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾ... ವಿರಾಟ್ ಕೊಹ್ಲಿ ರಿಯಾಕ್ಷನ್ ವೈರಲ್!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.