)
ನವದೆಹಲಿ: ಅಕ್ಟೋಬರ್ 2 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಪ್ರಕಟಿಸಲಾಗಿದೆ. ಆದರೆ ಕನ್ನಡಿಗ ಕರುಣ್ ನಾಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇನ್ನೊಂದೆಡೆಗೆ ಗಾಯಗೊಂಡಿರುವ ರಿಶಬ್ ಪಂತ್ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ತಂಡಕ್ಕೆ ಆಯ್ಕೆ ಮಾಡಿಲ್ಲ.
ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಎಂಟು ವರ್ಷಗಳ ನಂತರ ಕರುಣ್ ನಾಯರ್ ಅವರನ್ನು ಭಾರತೀಯ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದಾಗ್ಯೂ, ಅವರು ಆಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ನಾಲ್ಕು ಟೆಸ್ಟ್ಗಳಲ್ಲಿ ಎಂಟು ಇನ್ನಿಂಗ್ಸ್ಗಳಲ್ಲಿ, ಅವರು 25 ಕ್ಕಿಂತ ಸ್ವಲ್ಪ ಹೆಚ್ಚು ಸರಾಸರಿಯಲ್ಲಿ ಕೇವಲ 205 ರನ್ಗಳನ್ನು ಗಳಿಸಿದರು. ಇದರ ಪರಿಣಾಮವಾಗಿ, ಆಯ್ಕೆದಾರರು ಅವರನ್ನು ವೆಸ್ಟ್ ಇಂಡೀಸ್ ಸರಣಿಗೆ ಕೈಬಿಟ್ಟಿದ್ದಾರೆ. ಹಾಗಾಗಿ ಈಗ 33 ವರ್ಷದ ಕರುಣ್ ನಾಯರ್ ಗೆ ಟೀಮ್ ಇಂಡಿಯಾದಲ್ಲಿ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದೇ ಹೇಳಬಹುದು.
? Presenting #TeamIndia's squad for the West Indies Test series ?#INDvWI | @IDFCFIRSTBank pic.twitter.com/S4D5mDGJNN
— BCCI (@BCCI) September 25, 2025
ಟೀಮ್ ಇಂಡಿಯಾಗೆ ಮರಳಿದ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕಲ್:
ಇತ್ತೀಚೆಗೆ ಲಕ್ನೋದಲ್ಲಿ ಆಸ್ಟ್ರೇಲಿಯಾ ಎ ವಿರುದ್ಧ ಅದ್ಭುತ 150 ರನ್ ಗಳಿಸಿದ್ದ ದೇವದತ್ ಪಡಿಕ್ಕಲ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.ಎಡಗೈ ಬ್ಯಾಟ್ಸ್ಮನ್ ಕಳೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತಂಡದ ಭಾಗವಾಗಿದ್ದರು.
ಗಾಯಗೊಂಡ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್
ಇನ್ನೊಂದೆಡೆಗೆ ಓಲ್ಡ್ ಟ್ರಾಫರ್ಡ್ ಟೆಸ್ಟ್ ಪಂದ್ಯದ ವೇಳೆ ಬಲಗಾಲಿನ ಹೆಬ್ಬೆರಳು ಮುರಿದುಕೊಂಡ ರಿಷಭ್ ಪಂತ್ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ತಂಡದಿಂದ ಹೊರಗುಳಿಯಲಿದ್ದಾರೆ.ಅವರು ಪ್ರಸ್ತುತ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಸ್ಥಾನದಲ್ಲಿ ಧ್ರುವ್ ಜುರೆಲ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿರುತ್ತಾರೆ.
ಟೆಸ್ಟ್ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 2 ರಿಂದ ಅಕ್ಟೋಬರ್ 6 ರವರೆಗೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಅಕ್ಟೋಬರ್ 10 ರಿಂದ ಅಕ್ಟೋಬರ್ 14 ರವರೆಗೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೀಮ್ ಇಂಡಿಯಾ 15 ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ರೆಡ್ಡಿ, ಎನ್ ಜಗದೀಶ್ರಾಜ್, ಮೊಹಮ್ಮದ್ ಕೆ.