IND vs PAK: 17 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ತೆರಳಲಿದೆ ಟೀಂ ಇಂಡಿಯಾ? ಬಹ್ರೇನ್ ನಿಂದ ಬರಲಿದೆ ಅಂತಿಮ ನಿರ್ಧಾರ

Asia Cup-2023 in Pakistan: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ತುರ್ತು ಸಭೆಯಲ್ಲಿ ಪಾಲ್ಗೊಳ್ಳಲು ಜೈ ಶಾ ಬಹ್ರೇನ್ ತಲುಪಿದ್ದಾರೆ. ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರ ಕೋರಿಕೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ. ಇದರಲ್ಲಿ ಪಾಕಿಸ್ತಾನದ ಏಷ್ಯಾಕಪ್ ಆತಿಥ್ಯ ಹಕ್ಕುಗಳ ಭವಿಷ್ಯ ನಿರ್ಧಾರವಾಗಲಿದೆ.

Written by - Bhavishya Shetty | Last Updated : Feb 3, 2023, 10:41 PM IST
    • ಭಾರತ ಕ್ರಿಕೆಟ್ ತಂಡ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗೆ ತಯಾರಿ ನಡೆಸುತ್ತಿದೆ
    • ಬಹ್ರೇನ್‌ನಿಂದ ತುರ್ತು ಸಭೆಯನ್ನು ಕರೆಯಲಾಗಿದೆ ಎಂಬ ದೊಡ್ಡ ಸುದ್ದಿ ಬಂದಿದೆ
    • ಪಾಕಿಸ್ತಾನದ ಏಷ್ಯಾಕಪ್ ಆತಿಥ್ಯ ಹಕ್ಕುಗಳ ಭವಿಷ್ಯ ನಿರ್ಧಾರವಾಗಲಿದೆ
IND vs PAK: 17 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ತೆರಳಲಿದೆ ಟೀಂ ಇಂಡಿಯಾ? ಬಹ್ರೇನ್ ನಿಂದ ಬರಲಿದೆ ಅಂತಿಮ ನಿರ್ಧಾರ title=
IND Vs Pak

Asia Cup-2023 in Pakistan: ಓಪನರ್ ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗೆ ತಯಾರಿ ನಡೆಸುತ್ತಿದೆ. ಈ ಸರಣಿಯಲ್ಲಿ ಉಭಯ ತಂಡಗಳ ನಡುವೆ 4 ಪಂದ್ಯಗಳು ನಡೆಯಲಿವೆ. ಈ ಮಧ್ಯೆ, ಬಹ್ರೇನ್‌ನಿಂದ ತುರ್ತು ಸಭೆಯನ್ನು ಕರೆಯಲಾಗಿದೆ ಎಂಬ ದೊಡ್ಡ ಸುದ್ದಿ ಬಂದಿದೆ. ಈ ಮಹತ್ವದ ಸಭೆಯಲ್ಲಿ ಭಾಗವಹಿಸಲು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಆಗಮಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಅಧಿಕಾರಿಯಾದ MS Dhoni: ಸಮವಸ್ತ್ರದ ಫೋಟೋ ಕಂಡು ಫ್ಯಾನ್ಸ್ ಶಾಕ್!

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ತುರ್ತು ಸಭೆಯಲ್ಲಿ ಪಾಲ್ಗೊಳ್ಳಲು ಜೈ ಶಾ ಬಹ್ರೇನ್ ತಲುಪಿದ್ದಾರೆ. ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರ ಕೋರಿಕೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ. ಇದರಲ್ಲಿ ಪಾಕಿಸ್ತಾನದ ಏಷ್ಯಾಕಪ್ ಆತಿಥ್ಯ ಹಕ್ಕುಗಳ ಭವಿಷ್ಯ ನಿರ್ಧಾರವಾಗಲಿದೆ.

ಏಷ್ಯಾಕಪ್ ಆತಿಥ್ಯವನ್ನು ಪಾಕಿಸ್ತಾನದಿಂದ ಕಸಿದುಕೊಳ್ಳುತ್ತಾ?

ಏಷ್ಯಾಕಪ್-2023ರ ಆತಿಥ್ಯವನ್ನು ಪಾಕಿಸ್ತಾನ ಕಸಿದುಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಆತಿಥ್ಯ ಪಾಕ್ ಪಾಲಾದರೆ, ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಡೆಯಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೋಸ್ಟಿಂಗ್ ಹಕ್ಕುಗಳನ್ನು ಉಳಿಸಿಕೊಳ್ಳುತ್ತದೆ ಅಥವಾ ಶ್ರೀಲಂಕಾ ಮತ್ತೊಂದು ಆಯ್ಕೆಯಾಗಿರಬಹುದು. ಬಿಸಿಸಿಐ ಮೂಲಗಳು ಈ ಬಗ್ಗೆ ಪಿಟಿಐಗೆ ತಿಳಿಸಿದ್ದು, 'ಜಯ್ ಶಾ ಪ್ರಸ್ತುತ ಎಸಿಸಿ ಸಭೆಗಾಗಿ ಬಹ್ರೇನ್‌ನಲ್ಲಿದ್ದಾರೆ. ಬಿಸಿಸಿಐ ತನ್ನ ನಿಲುವು ಬದಲಿಸುವುದಿಲ್ಲ. ಸರ್ಕಾರದಿಂದ ಅನುಮತಿ ಸಿಗದ ಕಾರಣ ನಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: IND vs AUS : ಟೆಸ್ಟ್‌ನಲ್ಲಿ ಈ ಐತಿಹಾಸಿಕ ದಾಖಲೆ ಮುರಿಯುವ ಹೊಸ್ತಿಲಲ್ಲಿ ಆರ್ ಅಶ್ವಿನ್!

2005-06ರಲ್ಲಿ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ನಂತರ ಉಭಯ ದೇಶಗಳ ತಂಡಗಳ ನಡುವೆ 2 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳು ನಡೆದವು. ಪೇಶಾವರದಲ್ಲಿ ನಡೆದ ಬಾಂಬ್ ಸ್ಫೋಟವು ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಪುನರಾರಂಭಿಸುವ ಬಗ್ಗೆ ಭದ್ರತಾ ಕಳವಳವನ್ನು ಹೆಚ್ಚಿಸಿದೆ ಎಂದು ಅರ್ಥಮಾಡಿಕೊಳ್ಳಬಹುದು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News