IND vs BAN 1st ODI March: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಈ ಮೂಲಕ ಮತ್ತೆ ತಂಡಕ್ಕೆ ಮರಳಿದ್ದಾರೆ. 2022 ರ ಟಿ20 ವಿಶ್ವಕಪ್ ಬಳಿಕ ಅವರಿಗೆ ವಿಶ್ರಾಂತಿಯನ್ನು ನೀಡಲಾಗಿತ್ತು.
ಇದನ್ನೂ ಓದಿ: IND vs BAN : 'ಹಿಟ್‌ಮ್ಯಾನ್'ನ ಹಳೆಯ ಈ ಸ್ನೇಹಿತ ಬಾಂಗ್ಲಾದೇಶದ ದೊಡ್ಡ ಶತ್ರು!
ಇನ್ನು ಈ ಸರಣಿಯಲ್ಲಿ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ಎಂಎಸ್ ಧೋನಿಯವರ ಏಳು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಕೊನೆಯ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಿತ್ತು.
ಧೋನಿಯ ಸೇಡು ತೀರಿಸಲಿದ್ದಾರೆಯೇ ರೋಹಿತ್?
ಏಳು ವರ್ಷಗಳ ಬಳಿಕ ಟೀಂ ಇಂಡಿಯಾ ಏಕದಿನ ಸರಣಿ ಆಡಲೆಂದು ಬಾಂಗ್ಲಾದೇಶಕ್ಕೆ ಕಾಲಿಟ್ಟಿದೆ. ಇದಕ್ಕೂ ಮುನ್ನ 2015ರಲ್ಲಿ ಬಾಂಗ್ಲಾದೇಶದಲ್ಲಿ ಉಭಯ ತಂಡಗಳ ನಡುವೆ ಏಕದಿನ ಸರಣಿ ನಡೆದಿತ್ತು. ಆ ಸರಣಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ 1-2 ಅಂತರದಿಂದ ಸೋಲನುಭವಿಸಬೇಕಾಯಿತು. ಹೀಗಾಗಿ ನಾಯಕ ರೋಹಿತ್ ಶರ್ಮಾ ತಂಡ ಈಗ ಆ ಸರಣಿಯ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 4 ಏಕದಿನ ಸರಣಿಗಳು ನಡೆದಿದ್ದು, ಈ ಪೈಕಿ ಭಾರತ 3 ಸರಣಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಬಾಂಗ್ಲಾದೇಶದಲ್ಲಿ ಟೀಮ್ ಇಂಡಿಯಾ ಅಂಕಿ ಅಂಶಗಳು:
ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 36 ಏಕದಿನ ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 30 ಗೆದ್ದು 5 ರಲ್ಲಿ ಸೋತಿದೆ. ಒಂದು ಪಂದ್ಯ ಅನಿರ್ದಿಷ್ಟವಾಗಿತ್ತು. ಬಾಂಗ್ಲಾದೇಶದಲ್ಲಿ ಟೀಂ ಇಂಡಿಯಾ 22 ಪಂದ್ಯಗಳಲ್ಲಿ 17 ಪಂದ್ಯಗಳನ್ನು ಗೆದ್ದಿದೆ. ಇಂದಿನಿಂದ ಬೆಳಗ್ಗೆ 11.30 ರಿಂದ ಮೀರ್‌ಪುರದಲ್ಲಿ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಮಿರ್‌ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಕುಲದೀಪ್ ಸೇನ್ ಮತ್ತು ಉಮ್ರಾನ್ ಮಲಿಕ್.
ಇದನ್ನೂ ಓದಿ: IND vs BAN: ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ಆಟಗಾರನ ಅದೃಷ್ಟ ಖುಲಾಯಿಸಲಿದೆ?!
ಬಾಂಗ್ಲಾದೇಶ ತಂಡ:
ನಜ್ಮುಲ್ ಹೊಸೈನ್ ಶಾಂತಿ, ಯಾಸಿರ್ ಅಲಿ, ಆಸಿಫ್ ಹೊಸೈನ್, ಮಹಮ್ಮದುಲ್ಲಾ ರಿಯಾದ್, ಮೆಹಿದಿ ಹಸನ್, ಶಕೀಬ್ ಅಲ್ ಹಸನ್, ಅನಾಮುಲ್ ಹಕ್ (ವಿಕೆಟ್ ಕೀಪರ್), ಲಿಟನ್ ದಾಸ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ನೂರುಲ್ ಹಸನ್ (ವಿಕೆಟ್ ಕೀಪರ್), ಇಬಾದತ್ ಹೊಸೈನ್, ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ನಾಸಮ್ ಅಹ್ಮದ್, ತಸ್ಕಿನ್ ಅಹ್ಮದ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.