Team India Won: ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಟ20 ವಿಶ್ವಕಪ್ ಫೈನಲ್ ಕಾದಾಟದಲ್ಲಿ ದಕ್ಷಿಣ ಆಫ್ರಿಕಾವನ್ನು ಟೀಂ ಇಂಡಿಯಾ ರಣರೋಚಕವಾಗಿ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ..
ಈ ಹಣಾಹನಿಯಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಮೊದಲ ಓವರ್‌ನಲ್ಲೇ ಮೂರು ಬೌಂಡರಿ ಸಿಡಿಸುವ ಮೂಲಕ ಭರ್ಜರಿ ಆರಂಭ ನೀಡುವ ಮುನ್ಸೂಚನೆ ಕೊಟ್ಟರು .. ಆದರೆ ಸೆಕೆಂಡ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಕ್ಯಾಪ್ಟನ್ ಏಯ್ಡನ್ ಮಾರ್ಕ್‌ರಮ್ ಬಾಲನ್ನು ಸ್ಪಿನ್ನರ್ ಕೇಶವ್ ಮಹರಾಜ್ ಕೈಗಿಟ್ಟರು..
ಇದನ್ನೂ ಓದಿ: T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್
ರನ್ ಮಷೀನ್ ವಿರಾಟ್ ಕೊಹ್ಲಿ ಈ ಪಂದ್ಯದ ಮೂಲಕ ಲೆಜೆಂಡ್ ಆಟಗಾರ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.. ಈ ಹೈವೋಲ್ಟೇಜ್ ಆಟದಲ್ಲಿ ತಂಡ ಕಷ್ಟದಲ್ಲಿದ್ದಾಗ ವಿರಾಟ್ ಅರ್ಧಶತಕ ಸಿಡಿಸಿ ಆಪತ್ಪಾಂಧವನಂತೆ ತಂಡಕ್ಕೆ ನೆರವಾದರು.. ಇದರೊಂದಿಗೆ ಕಿಂಗ್ ಕೊಹ್ಲಿಗೆ ಆಲ್ರೌಂಡರ್ ಅಕ್ಷರ್ ಪಟೇಲ್ ಮತ್ತು ಶಿವಂ ದುಬೆ ಬೆನ್ನೆಲುಬಿನಂತೆ ಸಾಥ್ ನೀಡಿದರು.. ಇದರ ಪರಿಣಾಮವಾಗಿ ಆರಂಭಿಕ ಆಘಾರವನ್ನು ಬಿಟ್ಟು ಟೀಂ ಇಂಡಿಯಾ 2024ರ ಟಿ20 ವಿಶ್ವಕಪ್ ಫೈನಲ್ ಕದನದಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಪಡೆದು.. ದಕ್ಷಿಣ ಆಫ್ರಿಕಾ ತಂಡಕ್ಕೆ ಭರ್ಜರಿ ಗುರಿ ನೀಡಿತು..
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಮೊದಲ ಓವರ್‌ನಲ್ಲೇ ಮೂರು ಬೌಂಡರಿ ಸಿಡಿಸುವ ಮೂಲಕ ಭರ್ಜರಿ ಆರಂಭ ನೀಡುವ ಮುನ್ಸೂಚನೆ ಕೊಟ್ಟರು .. ಆದರೆ ಸೆಕೆಂಡ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಕ್ಯಾಪ್ಟನ್ ಏಯ್ಡನ್ ಮಾರ್ಕ್‌ರಮ್ ಬಾಲನ್ನು ಸ್ಪಿನ್ನರ್ ಕೇಶವ್ ಮಹರಾಜ್ ಕೈಗಿಟ್ಟರು.. ನಂತರ ಕೇಶವ್ ಮೊದಲ ಓವರ್‌ನಲ್ಲೇ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹಾಗೂ ಪಂತ್ ಅವರನ್ನು ಬೀಳಿಸುವಲ್ಲಿ ಯಶಸ್ವಿಯಾದರು.. ಬಳಿಕ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಅವರನ್ನೂ ಒಂದಂಕಿ ಮೊತ್ತಕ್ಕೆ ಪೆವಿಲಿಯನ್‌ಗೆ ಕಳುಹಿಸುವಲ್ಲಿ ರಬಾಡ ಸಕ್ಸಸ್ ಆದರು..
ಈ ಪಂದ್ಯಲ್ಲಿ ಕೇವಲ 4.3 ಓವರ್‌ನಲ್ಲಿ 34 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಂಗೆಟ್ಟಿದ್ದ ಟೀಂ ಇಂಡಿಯಾಗೆ ಲೆಜೆಂಡ್ ಆಟಗಾರ ಕೊಹ್ಲಿ ಮತ್ತು ಆಲ್ರೌಂಡರ್ ಅಕ್ಷರ್ ಪಟೇಲ್ ಔಚಿತ್ಯಜ್ಞಾನದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಎತ್ತಿ ಹಿಡಿದರು.. ದಿಢೀರ್ ವಿಕೆಟ್ ಕಳೆದುಕೊಂಡಿದ್ದರಿಂದ ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಪಡೆದು ಕ್ರೀಸ್‌ಗೆ ಬಂದ ಅಕ್ಷರ್ ಪಟೇಲ್ ಭರ್ಜರಿ ಬಾರಿಸುವ ಮೂಲಕ ತಂಡಕ್ಕೆ ನೆರವಾದರು..
ಇದನ್ನೂ ಓದಿ: T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್
ದಿಢೀರ್ ವಿಕೆಟ್ ಪತನದಿಂದಾಗಿ ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಪಡೆದು ಕ್ರೀಸ್‌ಗಿಳಿದ ಅಕ್ಷರ್ ಪಟೇಲ್ ಚುರುಕಾಗಿ ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರೆ, ಮತ್ತೊಂದು ತುದಿಯಲ್ಲಿ ವಿರಾಟ್ ಕೊಹ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದರು.. ನಂತರ ನಾಲ್ಕನೇ ವಿಕೆಟ್‌ಗೆ ಈ ಇಬ್ಬರೂ 54 ಎಸೆತಗಳಲಿ 72 ರನ್‌ಗಳ ಆಟವಾಡಿದರು.. ಅಕ್ಷರ್ ಪಟೇಲ್ 31 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಾಯದಿಂದ 47 ರನ್‌ಗಳಿಸಿ ರನೌಟ್ ಆದರು..
ಈ ಆಕರ್ಷಕ ಪಂದ್ಯಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಇನಿಂಗ್ಸ್ ಆಡಿ ತಂಡಕ್ಕೆ ನೆರವಾದರು.. 48 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಭರ್ಜರಿ ಇನಿಂಗ್ಸ್ ಆಡಿದರು.. ಕೊನೆಯದಾಗಿ ವಿರಾಟ್ 59 ಎಸೆತಗಳಿಗೆ 6 ಬೌಂಡರಿ 2 ಸಿಕ್ಸರ್, 76 ರನ್ ರನ್ ಬಾರಿಸಿ ತಂಡಕ್ಕೆ ಆಸರೆಯಾದರು.. ಬಳಿಕ ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ರಣರೋಚಕವಾಗಿ ಬ್ಯಾಟಿಂಗ್ ಮಾಡುವ ಮೂಲಕ ತಂಡದ ಮೊತ್ತವನ್ನು 175ರ ಗಡಿ ದಾಡುವಂತೆ ಮಾಡಿದರು..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್