IND vs ENG: 3ನೇ ಟೆಸ್ಟ್ ಪಂದ್ಯಕ್ಕೆ ಹೀಗಿರಲಿದೆ ಟೀಂ ಇಂಡಿಯಾದ ಪ್ಲೇಯಿಂಗ್ 11: ಕೊಹ್ಲಿ ಸ್ಥಾನದಲ್ಲಿ ಬ್ಯಾಟ್ ಬೀಸೋರು ಇವರೇ…
IND vs ENG 3rd Test Playing 11: ರಾಜ್‌ಕೋಟ್’ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಇನ್ನು ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ತಿಳಿಯೋಣ.
IND vs ENG 3rd Test Playing 11: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್’ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಐದು ಪಂದ್ಯಗಳ ಟೆಸ್ಟ್ ಸರಣಿ ಸದ್ಯ 1-1ರಲ್ಲಿ ಸಮಬಲಗೊಂಡಿದೆ. ಹೈದರಾಬಾದ್’ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 28 ರನ್’ಗಳಿಂದ ಸೋಲಿಸಿತ್ತು. ಇದಾದ ಬಳಿಕ ವಿಶಾಖಪಟ್ಟಣದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದ್ದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 106 ರನ್ ಗಳಿಂದ ಸೋಲಿಸಿ ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ.
ರಾಜ್‌ಕೋಟ್’ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಇನ್ನು ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ತಿಳಿಯೋಣ.
ಇದನ್ನೂ ಓದಿ: Middle Class Family: ಆರ್ಥಿಕ ವಿಚಾರದಲ್ಲಿ ಮಧ್ಯಮ ವರ್ಗದವರು ಮಾಡುವ 5 ತಪ್ಪುಗಳು!
ಆರಂಭಿಕರು:
ರಾಜ್ ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ತೆರೆಯುವ ಸಾಧ್ಯತೆ ಇದೆ. ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 209 ರನ್ ಗಳಿಸಿ ದ್ವಿಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 106 ರನ್‌ಗಳಿಂದ ಜಯ ಸಾಧಿಸಿತ್ತು.
ಮಧ್ಯಮ ಕ್ರಮಾಂಕ
ರಾಜ್‌ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದರೆ, ಕೆಎಲ್ ರಾಹುಲ್ 4ನೇ ಸ್ಥಾನದಲ್ಲಿರುವ ಸಾಧ್ಯತೆ ಇದೆ. ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್’ಗೆ ಬಂದಿದ್ದರು. ಆದರೆ ಕ್ವಾಡ್ರೈಸ್ಪ್ ಸ್ಟ್ರೈನ್’ನಿಂದಾಗಿ ವಿಶಾಖಪಟ್ಟಣಂ ಟೆಸ್ಟ್’ನಿಂದ ಹೊರಗುಳಿದ ಕೆಎಲ್ ರಾಹುಲ್, ಇದೀಗ ಮತ್ತೆ ಭಾರತ ತಂಡಕ್ಕೆ ಮರಳಲಿದ್ದಾರೆ. ಇನ್ನೊಂದೆಡೆ ರಜತ್ ಪಾಟಿದಾರ್ ಗೆ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ ನೀಡುವ ಸಾಧ್ಯತೆ ಇದೆ
ಆಲ್’ರೌಂಡರ್
ರಾಜ್ ಕೋಟ್’ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಲ್ ರೌಂಡರ್’ಗಳಾದ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಕ್ರಮವಾಗಿ 6 ಮತ್ತು 7 ನೇ ಸ್ಥಾನಕ್ಕೆ ಆಯ್ಕೆಯಾಗಬಹುದು. ಈ ಇಬ್ಬರೂ ಆಟಗಾರರು ಬೌಲಿಂಗ್ ಮತ್ತು ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ಬಲ ನೀಡುವುದರಲ್ಲಿ ಸಂಶಯವೇ ಇಲ್ಲ.
ವಿಕೆಟ್ ಕೀಪರ್
ರಾಜ್‌ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಕೆಎಸ್ ಭರತ್ 8ನೇ ಕ್ರಮಾಂಕದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಇನ್ನಿಂಗ್ಸ್’ಗಳಲ್ಲಿ ಕೆಎಸ್ ಭರತ್ 41, 28, 17 ಮತ್ತು 6 ರನ್ ಗಳಿಸಿದ್ದಾರೆ.
ಸ್ಪಿನ್ನರ್
ಪ್ಲೇಯಿಂಗ್ ಇಲೆವೆನ್ ನಲ್ಲಿ ರವಿಚಂದ್ರನ್ ಅಶ್ವಿನ್ ಗೆ ಅವಕಾಶ ಸಿಗುವುದು ಖಚಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕುಲದೀಪ್ ಯಾದವ್ ಆಡುವ ಹನ್ನೊಂದರಿಂದ ಹೊರಗುಳಿಯಬೇಕಾಗಬಹುದು. ರವಿಚಂದ್ರನ್ ಅಶ್ವಿನ್ ರಾಜ್ ಕೋಟ್ ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ 500 ಟೆಸ್ಟ್ ವಿಕೆಟ್ ಪೂರೈಸಲಿದ್ದಾರೆ.
ವೇಗದ ಬೌಲರ್
ರಾಜ್‌ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ವೇಗದ ಬೌಲರ್’ಗಳಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಹನ್ನೊಂದರಲ್ಲಿ ಸ್ಥಾನ ಪಡೆಯಬಹುದು.
ಇದನ್ನೂ ಓದಿ: Radhika Pandit: ಪ್ರೇಮಿಗಳ ದಿನ ಟೈಮ್‌ನಲ್ಲಿ ಸ್ಯಾಂಡಲ್‌ವುಡ್ ಸಿಂಡ್ರೆಲಾಳ ನ್ಯೂ ಫೋಟೋಶೂಟ್!
ಭಾರತದ ಸಂಭಾವ್ಯ ಪ್ಲೇಯಿಂಗ್ 11:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ