TPL 2 Trophy: ಟಿಪಿಎಲ್ ಸೀಸನ್-2ಗೆ ಅದ್ದೂರಿ ತೆರೆ - ಹರ್ಷ ತಂಡಕ್ಕೆ ಒಲಿದ ಟ್ರೋಫಿ

ಎನ್ 1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್ ಬಿ.ಆರ್ ಕಳೆದ ವರ್ಷದಿಂದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ (ಟಿಪಿಎಲ್) ಆರಂಭಿಸಿದ್ದಾರೆ. ಈ ಬಾರಿ ಎರಡನೇ ಸೀಸನ್ ಮಾರ್ಚ್ 12ರಿಂದ ಆರಂಭವಾಗಿತ್ತು. ಮಾರ್ಚ್ 12 ರಿಂದ 15ರ ವರೆಗೆ ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆದಿದ್ದು, ಅಂತಿಮವಾಗಿ ಹರ್ಷ ಸಿ.ಎಂ. ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿಗೆ ಮುತ್ತಿಟ್ಟಿದೆ.

Written by - Zee Kannada News Desk | Edited by - Bhavishya Shetty | Last Updated : Mar 16, 2023, 07:44 PM IST
    • ಈ ಬಾರಿ ಎರಡನೇ ಸೀಸನ್ ಮಾರ್ಚ್ 12ರಿಂದ ಆರಂಭವಾಗಿತ್ತು.
    • ಮಾರ್ಚ್ 12 ರಿಂದ 15ರ ವರೆಗೆ ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆದಿದೆ.
    • ಅಂತಿಮವಾಗಿ ಹರ್ಷ ಸಿ.ಎಂ. ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿಗೆ ಮುತ್ತಿಟ್ಟಿದೆ.
TPL 2 Trophy: ಟಿಪಿಎಲ್ ಸೀಸನ್-2ಗೆ ಅದ್ದೂರಿ ತೆರೆ - ಹರ್ಷ ತಂಡಕ್ಕೆ ಒಲಿದ ಟ್ರೋಫಿ title=
TPL Season-2

TPL 2 Trophy: ಎನ್ 1 ಕ್ರಿಕೆಟ್ ಅಕಾಡೆಮಿ, ಸುನೀಲ್ ಕುಮಾರ್. ಬಿ. ಆರ್ ಸಾರಥ್ಯದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್’ಗೆ ಅದ್ದೂರಿ ತೆರೆ ಬಿದ್ದಿದೆ. ಹರ್ಷ ಸಿ.ಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿ ಮುಡಿಗೇರಿಸಿಕೊಂಡಿದೆ.

ಇದನ್ನೂ ಓದಿ: Viral Video: ‘ಕೈಗೆ ಬಂದಿದ್ದು, ಕಾಲಲ್ಲಿ ಹೋಯ್ತು’; ಈ ಅಂಕಲ್ ಫೀಲ್ಡಿಂಗ್ ನೋಡಿದ್ರೆ ನೀವು ಜೀವಮಾನದಲ್ಲಿ ನಕ್ಕಿರಲ್ಲ… ಅಷ್ಟು ನಗ್ತೀರಿ

ಎನ್ 1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್ ಬಿ.ಆರ್ ಕಳೆದ ವರ್ಷದಿಂದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ (ಟಿಪಿಎಲ್) ಆರಂಭಿಸಿದ್ದಾರೆ. ಈ ಬಾರಿ ಎರಡನೇ ಸೀಸನ್ ಮಾರ್ಚ್ 12ರಿಂದ ಆರಂಭವಾಗಿತ್ತು. ಮಾರ್ಚ್ 12 ರಿಂದ 15ರ ವರೆಗೆ ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆದಿದ್ದು, ಅಂತಿಮವಾಗಿ ಹರ್ಷ ಸಿ.ಎಂ. ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿಗೆ ಮುತ್ತಿಟ್ಟಿದೆ. ಮಂಜು ಪಾವಗಡ ನೇತೃತ್ವದ ಅಶ್ವಸೂರ್ಯ ರಿಯಾಲಿಟೀಸ್ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ. ಗಾಯಕ ವ್ಯಾಸರಾಜ್ ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸತತ ಸೋಲಿನ ಬಳಿಕ ಯುಪಿ ವಾರಿಯರ್ಸ್ ವಿರುದ್ಧ ಗೆದ್ದುಬೀಗಿದ RCB: ಪ್ಲೇ ಆಫ್ ಕನಸು ಜೀವಂತ!

ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸಫರ್ಡ್ ವಿನ್ ಟೀಂ ಎಂಬ ಒಟ್ಟು ಆರು ತಂಡಗಳು ಟಿಪಿಎಲ್ ಸೀಸನ್-2ನಲ್ಲಿ ಭಾಗವಹಿಸಿದ್ದವು.  ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ ನಾಯಕತ್ವದಲ್ಲಿ ತಂಡಗಳನ್ನು ಮುನ್ನಡೆಸಲಾಗಿತ್ತು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News