India vs Australia Test:  ಮುಂದಿನ ತಿಂಗಳಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 4 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ನೋಡುವುದಾದರೆ, ಈ ಸರಣಿಯು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಆದರೆ ಟೀಂ ಇಂಡಿಯಾದ ಆಟಗಾರರೊಬ್ಬರು ಗಾಯದ ಸಮಸ್ಯೆಯಿಂದ ಬಹಳ ದಿನಗಳಿಂದ ಹೊರಗುಳಿದಿದ್ದಾರೆ. ಒಂದು ವೇಳೆ ಆಸ್ಟ್ರೇಲಿಯ ಸರಣಿಗೂ ಮುನ್ನ ಈ ಆಟಗಾರ ಫಿಟ್ ಆಗದೇ ಇದ್ದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs NZ: ಕೊನೆಗೊಂಡಿತು ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಕಂ ಬ್ಯಾಟ್ಸ್ ಮನ್ ಕ್ರಿಕೆಟ್ ಜೀವನ!


ಭಾರತ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ದೀರ್ಘಕಾಲದ ಗಾಯದಿಂದ ಕಂಗೆಟ್ಟಿದ್ದಾರೆ. ಆಸ್ಟ್ರೇಲಿಯ ಸರಣಿಗೆ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ಸರಣಿಗೂ ಮುನ್ನ ಅವರು ಫಿಟ್ ಆಗದಿದ್ದರೆ ಅವರನ್ನು ಕೈಬಿಡಬಹುದು ಎಂದು ಬಿಸಿಸಿಐ ಕೂಡ ಅಪ್‌ಡೇಟ್ ನೀಡಿದೆ. ರವೀಂದ್ರ ಜಡೇಜಾ ಏಷ್ಯಾ ಕಪ್ 2022 ರ ಬಳಿಕ ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ.


ಕಳೆದ ತಿಂಗಳು ಬಾಂಗ್ಲಾದೇಶ ವಿರುದ್ಧ ಆಡಿದ ಟೆಸ್ಟ್ ಸರಣಿ ಸಂದರ್ಭದಲ್ಲಿಯೂ ರವೀಂದ್ರ ಜಡೇಜಾ ಅವರನ್ನು ಟೀಮ್ ಇಂಡಿಯಾದಲ್ಲಿ ಸೇರಿಸಲಾಯಿತು. ಆದರೆ ರವೀಂದ್ರ ಜಡೇಜಾ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ ಅವರು ಈ ಸರಣಿಯಿಂದಲೂ ಹೊರಗುಳಿಯಬೇಕಾಯಿತು. ಹೀಗಿರುವಾಗ ಆಸ್ಟ್ರೇಲಿಯಾ ಸರಣಿಗೂ ಮುನ್ನವೇ ಫಿಟ್ ಆಗದಿದ್ದರೆ ನಾಯಕ ರೋಹಿತ್ ಶರ್ಮಾ ಟೆನ್ಷನ್ ಮತ್ತಷ್ಟು ಹೆಚ್ಚಾಗಬಹುದು.


33 ವರ್ಷದ ರವೀಂದ್ರ ಜಡೇಜಾ ಅವರ ಬಲ ಮೊಣಕಾಲಿಗೆ ಗಾಯವಾಗಿದೆ. ಏಷ್ಯಾ ಕಪ್ 2022 ರಲ್ಲಿ 2 ಪಂದ್ಯಗಳನ್ನು ಆಡಿದ ನಂತರ ಅವರನ್ನು ಕೈಬಿಡಲಾಯಿತು. ಇದರ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಯಲ್ಲಿದ್ದರು. ರವೀಂದ್ರ ಜಡೇಜಾ ಅವರಂತಹ ಬಿಗ್ ಮ್ಯಾಚ್ ವಿನ್ನರ್ ತಂಡಕ್ಕೆ ವಾಪಸಾಗಿರುವುದು ಎಲ್ಲಾ ಭಾರತೀಯ ಅಭಿಮಾನಿಗಳಿಗೆ ಉತ್ತಮ ಸುದ್ದಿಯಾಗಿದೆ. ಆದರೆ ಫಿಟ್ ಆಗದೆ ಮರಳಿದರೆ ಫ್ಯಾನ್ಸ್ ಗೆ ಮತ್ತಷ್ಟು ನಿರಾಸೆಯಾಗಲಿದೆ.


ಮೊದಲ ಎರಡು ಟೆಸ್ಟ್‌ಗಳಿಗೆ ಟೀಂ ಇಂಡಿಯಾ ತಂಡ:


ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೀ), ಇಶಾನ್ ಕಿಶನ್ (ವಿಕೀ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.


ಇದನ್ನೂ ಓದಿ: IND vs NZ: ಏಕದಿನ ತಂಡಕ್ಕೆ ಚೊಚ್ಚಲ ಬಾರಿಗೆ ಎಂಟ್ರಿ ಕೊಟ್ಟ ಈ ಆಟಗಾರ: ದಿಢೀರ್ ಆಗಿ ತೆರೆದ ಅದೃಷ್ಟದ ಬಾಗಿಲು


ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾದ ಟೆಸ್ಟ್ ತಂಡ:


ಪ್ಯಾಟ್ ಕಮ್ಮಿನ್ಸ್ (ನಾ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಟಾರ್ಕ್ತ್, ಸ್ಟೀವ್ ಸ್ಮಿತ್ , ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.