ಕ್ರಿಕೆಟ್‌ ಪ್ರಿಯರಿಗೆ ಗುಡ್‌ನ್ಯೂಸ್‌... ರದ್ದಾಗಿಲ್ಲ ಐಪಿಎಲ್‌, ಬದಲಾಗಿ ಮುಂದೂಡಿಕೆ! ಮತ್ತೆ ಈ ದಿನದಿಂದ ಶುರುವಾಗಲಿದೆ ಫೈಟ್‌

IPL 2025 New Schedule: ಬಿಸಿಸಿಐ ಉಪಾಧ್ಯಕ್ಷರು ಐಪಿಎಲ್‌ನ ಹೊಸ ವೇಳಾಪಟ್ಟಿಯ ಕುರಿತು ಇತ್ತೀಚಿನ ನವೀಕರಣವನ್ನು ನೀಡಿದ್ದಾರೆ. ಐಪಿಎಲ್ ಅನ್ನು ಕೇವಲ ಒಂದು ವಾರ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  

Written by - Bhavishya Shetty | Last Updated : May 9, 2025, 06:56 PM IST
    • ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ
    • IPL ನ ರೋಮಾಂಚಕಾರಿ ಋತುವಿನ ಮೇಲೆ ದೊಡ್ಡ ಪರಿಣಾಮ
    • ಐಪಿಎಲ್‌ನ ಹೊಸ ವೇಳಾಪಟ್ಟಿಯ ಕುರಿತು ಇತ್ತೀಚಿನ ನವೀಕರಣ
ಕ್ರಿಕೆಟ್‌ ಪ್ರಿಯರಿಗೆ ಗುಡ್‌ನ್ಯೂಸ್‌... ರದ್ದಾಗಿಲ್ಲ ಐಪಿಎಲ್‌, ಬದಲಾಗಿ ಮುಂದೂಡಿಕೆ! ಮತ್ತೆ ಈ ದಿನದಿಂದ ಶುರುವಾಗಲಿದೆ ಫೈಟ್‌
IPL 2025 New Schedule

IPL 2025 New Schedule:  ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯು IPL ನ ರೋಮಾಂಚಕಾರಿ ಋತುವಿನ ಮೇಲೆ ದೊಡ್ಡ ಪರಿಣಾಮ ಬೀರಿದೆ. ಮೇ 8 ರಂದು ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಆ ನಂತರ ಐಪಿಎಲ್ ಅನ್ನು ಸಹ ಅನಿರ್ದಿಷ್ಟವಾಗಿ ಮುಂದೂಡಲಾಯಿತು. ಈಗ ಬಿಸಿಸಿಐ ಉಪಾಧ್ಯಕ್ಷರು ಐಪಿಎಲ್‌ನ ಹೊಸ ವೇಳಾಪಟ್ಟಿಯ ಕುರಿತು ಇತ್ತೀಚಿನ ನವೀಕರಣವನ್ನು ನೀಡಿದ್ದಾರೆ. ಐಪಿಎಲ್ ಅನ್ನು ಕೇವಲ ಒಂದು ವಾರ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Add Zee News as a Preferred Source

ಇದನ್ನೂ ಓದಿ: "ಆಪರೇಷನ್‌ ಸಿಂಧೂರ".. 'ಫೋರ್ಸ್ 18'ಗೂ ಇದೆ ಸಂಬಂಧ..! "ಸೋಫಿಯಾ ಸಾಮಾನ್ಯದವರಲ್ಲ.."

ರಾಜೀವ್ ಶುಕ್ಲಾ ಹೇಳಿದ್ದೇನು?
'ಐಪಿಎಲ್ 2025 ರ ಬಗ್ಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿ,' ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಐಪಿಎಲ್ 2025 ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿದೆ' ಎಂದು ಹೇಳಿದರು. "ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ ಪಂದ್ಯಾವಳಿಯ ಹೊಸ ವೇಳಾಪಟ್ಟಿಯನ್ನು ಘೋಷಿಸಲಾಗುವುದು. ನಮಗೆ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಇದೆ. ಬಿಸಿಸಿಐ ನಮ್ಮ ಸಶಸ್ತ್ರ ಪಡೆಗಳು ಮತ್ತು ಸರ್ಕಾರದೊಂದಿಗೆ ನಿಂತಿದೆ" ಎಂದರು.

ಇದನ್ನೂ ಓದಿ: ಟೀಂ ಇಂಡಿಯಾಗೂ ಮೊದಲು ಸಚಿನ್‌ ತೆಂಡೂಲ್ಕರ್‌ ಕ್ರಿಕೆಟ್‌ ಆಡಿದ್ದು ಪಾಕಿಸ್ತಾನದ ಪರ..! ಶಾಕ್‌ ಆದ್ರೂ ಸ್ವತಃ ಅವರೇ ಹೇಳಿದ ಸತ್ಯವಿದು.. ಯಾಕೆ ಗೊತ್ತಾ?

ಐಪಿಎಲ್ 2025 ರ ಅಂತಿಮ ಪಂದ್ಯವು ಮೇ 25 ರಂದು ನಡೆಯಬೇಕಿತ್ತು. ಇನ್ನು ಪಂದ್ಯಾವಳಿಯು ಪ್ಲೇಆಫ್‌ಗೆ ಬಹಳ ಹತ್ತಿರದಲ್ಲಿದ್ದು ಮುಂದಿನ ದಿನಗಳಲ್ಲಿ ವೇಳಾಪಟ್ಟಿ ಯಾವ ರೀತಿ ಇರಲಿದೆ ಎಂಬುದನ್ನು ಕಾದುನೋಡಬೇಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News