IND vs NZ 1st ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಏಕದಿನ ಸರಣಿಯ ಮೊದಲ ಪಂದ್ಯ ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಎರಡು ವಿಕೆಟ್ ನಷ್ಟಕ್ಕೆ 124 ರನ್ ಕಲೆ ಹಾಕಿದೆ.
ಈ ಪಂದ್ಯದಲ್ಲಿ ಹಲವು ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಇನ್ನು ಕೆಲಕಾಲ ಪ್ಲೇಯಿಂಗ್ XIರಲ್ಲಿ ಸ್ಥಾನ ಪಡೆಯಲು ಪರದಾಡುತ್ತಿದ್ದ ಓರ್ವ ಆಟಗಾರನಿಗೆ ಶಿಖರ್ ಧವನ್ ಅವಕಾಶ ನೀಡಿದ್ದಾರೆ. ವಿಶೇಷವೆಂದರೆ ಈ ಆಟಗಾರ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಆಡುತ್ತಿದ್ದಾನೆ.
ಇದನ್ನೂ ಓದಿ: Hardik Pandya : 'ಹಾರ್ದಿಕ್ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಲಾಭವಾಗಲಿದೆ'
ನಾಯಕ ಶಿಖರ್ ಧವನ್ ಅವರು ಯುವ ಮಾರಕ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಮೊದಲ ಏಕದಿನದ ಪ್ಲೇಯಿಂಗ್ XIನಲ್ಲಿ ಸೇರಿಸಿಕೊಂಡಿದ್ದಾರೆ. ಉಮ್ರಾನ್ ಮಲಿಕ್ ಮೊದಲ ಬಾರಿಗೆ ಭಾರತದ ಏಕದಿನ ತಂಡದ ಭಾಗವಾಗಿದ್ದಾರೆ. ಈ ಹಿಂದೆ ಉಮ್ರಾನ್ ಮಲಿಕ್ ಕೂಡ T20 ಸರಣಿಯ ಭಾಗವಾಗಿದ್ದರೂ ಸಹ ಪ್ಲೇಯಿಂಗ್ XIನಲ್ಲಿ ಭಾಗವಾಗಲು ಸಾಧ್ಯವಾಗಿರಲಿಲ್ಲ. ಕಾಶ್ಮೀರದ ನಿವಾಸಿ ಉಮ್ರಾನ್ ಮಲಿಕ್ 150 KMPH ವೇಗದಲ್ಲಿ ಬೌಲಿಂಗ್ ಮಾಡಲು ಹೆಸರುವಾಸಿಯಾಗಿದ್ದಾರೆ.
ಉಮ್ರಾನ್ ಮಲಿಕ್ ಇದುವರೆಗೆ ಟೀಂ ಇಂಡಿಯಾ ಪರ 3 ಟಿ20 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 12.44 ಎಕಾನಮಿಯೊಂದಿಗೆ ರನ್ ನೀಡಿ ಕೇವಲ 2 ವಿಕೆಟ್ ಪಡೆದಿದ್ದಾರೆ. ಅವರ ಕಳಪೆ ಪ್ರದರ್ಶನ ಕಂಡು ತಂಡದಿಂದ ಕೈಬಿಡಲಾಗಿತ್ತು. ಈ ವರ್ಷ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಮತ್ತೊಮ್ಮೆ ಮೈದಾನಕ್ಕಿಳಿಯಲಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ XI:
ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಇದನ್ನೂ ಓದಿ: FIFA World Cup 2022: ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೋ ರೊನಾಲ್ಡೊ!
ನ್ಯೂಜಿಲೆಂಡ್ ಪ್ಲೇಯಿಂಗ್ XI:
ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.